ಅರ್ಥಪೂರ್ಣ ಜಯಂತಿ ಆಚರಣೆಗೆ ಸಿದ್ಧತೆ
3ರಂದು ಬಸವೇಶ್ವರ, 6ಕ್ಕೆ ಶಂಕರಾಚಾರ್ಯ, 8ರಂದು ಮಹರ್ಷಿ ಭಗೀರಥ ಜಯಂತಿ
Team Udayavani, Apr 22, 2022, 4:08 PM IST
ಬೆಳಗಾವಿ: ಜಿಲ್ಲಾಡಳಿತದಿಂದ ಮೇ 3 ರಂದು ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಬಸವೇಶ್ವರ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇ 3 ರಂದು ನಗರದ ಗೋವಾವೇಸ್‌ನಲ್ಲಿರುವ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪುತ್ಥಳಿಗೆ ಪೂಜೆ ನೆರವೇರಿಸಲಾಗುವುದು.
ಸಂಜೆ 4 ಗಂಟೆಗೆ ಚನ್ನಮ್ಮ ವೃತ್ತದಿಂದ ಲಿಂಗರಾಜು ಕಾಲೇಜು ಮೈದಾನ ದವರೆಗೆ ಬಸವೇಶ್ವರ ಭಾವಚಿತ್ರ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು ವಿಶೇಷ ಮೆರಗು ನೀಡಲಿವೆ ಎಂದರು.
ನಂತರ ಬಸವೇಶ್ವರ ಉದ್ಯಾನವನದಲ್ಲಿ ಮುಖ್ಯ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ವಚನ ಗಾಯನ, ವಿದ್ವಾಂಸರಿಂದ ಉಪನ್ಯಾಸ ನಡೆ ಯಲಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಬಸವೇಶ್ವರ ಜಯಂತಿ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ನಗರದಲ್ಲಿ ಬೆ„ಕ್ ರ್ಯಾಲಿ ನಡೆಸಲಾಗುವುದು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಡಿಸಿಪಿ ರವೀಂದ್ರ ಗಡಾದ, ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.
ಭಗೀರಥ ಜಯಂತಿ: ಜಿಲ್ಲಾಡಳಿತದಿಂದ ಮೇ 8 ರಂದು ಮಹಿರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ನಡೆದ ಭಗೀರಥ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇ 8 ರಂದು ಸಂಜೆ 5 ಗಂಟೆಯಿಂದ 7.30ರವರೆಗೆ ನಗರದಲ್ಲಿ ಭಗೀರಥ ಮೆರವಣಿಗೆ ನಡೆಸಲಾಗುವುದು, ನಂತರ ಕನ್ನಡ ಸಾಹಿತ್ಯ ಭವನದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು ಭಗೀರಥರ ಜೀವನ ಸಂದೇಶಗಳನ್ನು, ಉಪನ್ಯಾಸ ಗಳನ್ನು ನಡೆಸಲಾಗುವುದು ಎಂದು ಹೇಳಿದರು.
ಶಂಕರಾಚಾರ್ಯರ ಜಯಂತಿ: ಜಿಲ್ಲಾಡಳಿತದ ವತಿಯಿಂದ ಮೇ 6 ರಂದು ಶಂಕರಾಚಾರ್ಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇ 6 ರಂದು ನಗರದಲ್ಲಿ ಶಂಕರಾಚಾರ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಶಂಕರಾಚಾರ್ಯರ ಜೀವನವನ್ನು ಸಾರುವ ರೂಪಗಳ ಮೆರವಣಿಗೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.