ರಾಜಸ್ಥಾನ: 300 ವರ್ಷಗಳಷ್ಟು ಹಳೆಯ ದೇವಸ್ಥಾನ ಬುಲ್ಡೋಜರ್ ಬಳಸಿ ಧ್ವಂಸ
ಜಹಾಂಗೀರ್ ಪುರಿ ಪ್ರಕರಣದ ಸೇಡು: ಹೋರಾಟಕ್ಕಿಳಿದ ಬಿಜೆಪಿ
Team Udayavani, Apr 22, 2022, 7:03 PM IST
ಜೈಪುರ: ರಾಜಸ್ಥಾನದ ಅಲ್ವಾರ್‌ನಲ್ಲಿ ರಸ್ತೆ ಅಗಲೀಕರಣದ ವೇಳೆ ಒತ್ತುವರಿ ತೆರವು ವಿಚಾರದಲ್ಲಿ ವಿವಾದ ಆರಂಭವಾಗಿದ್ದು, 300 ವರ್ಷಗಳಷ್ಟು ಹಳೆಯದಾದ ದೇವಸ್ಥಾನವನ್ನು ಬುಲ್ಡೋಜರ್ ಬಳಸಿ ಧ್ವಂಸ ಮಾಡಲಾಗಿದ್ದು, ಬಿಜೆಪಿಯು ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದೆ.
300 ವರ್ಷಗಳಷ್ಟು ಹಳೆಯದಾದ ದೇವಾಲಯವನ್ನು ಹೇಗೆ ಅತಿಕ್ರಮಣ ಮಾಡಲು ಸಾಧ್ಯ. ಬಿಜೆಪಿ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತಿದ್ದು, ಮೂರು ದಿನಗಳಲ್ಲಿ ವರದಿ ನೀಡಲಿದೆ. ಬಿಜೆಪಿಯವರು ಅಭಿವೃದ್ಧಿಯ ಹೆಸರಿನಲ್ಲಿ ದೇವಸ್ಥಾನವನ್ನು ಹಾಳು ಮಾಡುವುದು ಸರಿಯಲ್ಲ. ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡುತ್ತಿದೆ. ರಾಜ್‌ಗಢ ಪುರಸಭೆಯಲ್ಲಿ ಬಿಜೆಪಿ ಪ್ರಭಾವ ಇದೆ ಎಂದು ಕಾಂಗ್ರೆಸ್ ಸೆಡ್ಡು ಹೊಡೆದು ಈ ಕ್ರಮ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಕಿಡಿ ಕಾರಿದ್ದಾರೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಮಾತನಾಡಿ, ಅಭಿವೃದ್ಧಿ ಹೆಸರಿನಲ್ಲಿ ದೇಗುಲದ ಮೇಲೆ ದಾಳಿ ನಡೆಸುತ್ತಿರುವುದು ಅತ್ಯಂತ ವಿಷಾದಕರ.ದೆಹಲಿಯ ಜಹಾಂಗೀರ್ ಪುರಿ ಪ್ರಕರಣದ ಸೇಡು ತೀರಿಸಿಕೊಳ್ಳಲು ರಾಜಸ್ಥಾನ ಸರ್ಕಾರ ಇಂತಹ ಕೃತ್ಯ ಮಾಡುತ್ತಿದೆ. ಕಾಂಗ್ರೆಸ್ ಸೇಡಿನ ಭಾವನೆಯಿಂದ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜಗಢ ಪಟ್ಟಣದ ದೇವಾಲಯವನ್ನು ಜೆಸಿಬಿ ಬಳಸಿ ಕೆಡಹುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಇದರಿಂದಾಗಿ ವಿಷಯ ವೇಗ ಪಡೆದುಕೊಂಡಿದೆ.
ಮಾಸ್ಟರ್ ಯೋಜನೆಯ ಉಲ್ಲೇಖ
ಮಾಸ್ಟರ್ ಪ್ಲಾನ್ ಪ್ರಕಾರ ರಾಜಗಢದಲ್ಲಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಆಡಳಿತ ಹೇಳುತ್ತಿದೆ. ಹಲವು ವರ್ಷಗಳಿಂದ ಅತಿಕ್ರಮಣ ನಡೆದಿದೆ. ಕಂದಾಯ ದಾಖಲೆ ಪ್ರಕಾರ ಇಲ್ಲಿ ಸುಮಾರು 60 ಅಡಿ ರಸ್ತೆ ಇದೆ. ಇದು 25 ಅಡಿಗಳಷ್ಟು ಒತ್ತುವರಿ ಮಾಡಲಾಗಿದೆ. ಹೀಗಾಗಿ ಜೆಸಿಬಿಯಿಂದ ಒತ್ತುವರಿ ತೆರವು ಮಾಡಲಾಗಿದೆ ಎಂದು ಹೇಳಲಾಗಿದೆ.
ರಾಜಗಢ ಪಟ್ಟಣದಲ್ಲಿ ಒತ್ತುವರಿ ತೆರವು ಮಾಡಲಾಗಿದೆ ಎಂದು ಕಾಂಗ್ರೆಸ್ ಶಾಸಕ ಜೋಹ್ರಿ ಲಾಲ್ ಮೀನಾ ಹೇಳಿದ್ದಾರೆ. ಇಲ್ಲಿನ ಪುರಸಭೆಯಲ್ಲಿ ಬಿಜೆಪಿ ಬೋರ್ಡ್ ಇದೆ. ಅದಕ್ಕಾಗಿಯೇ ಅವರು ಹೆಚ್ಚು ಹೇಳಲು ಸಾಧ್ಯವಿಲ್ಲ. ಇನ್ನೊಂದೆಡೆ ಆಡಳಿತ ಮಟ್ಟದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನುತ್ತಾರೆ ನಗರಸಭೆ ಅಧ್ಯಕ್ಷರು. ಪಾಲಿಕೆ ಆಡಳಿತ ಮಂಡಳಿ ಮಟ್ಟದಲ್ಲಿ ಠರಾವು ಪಾಸು ಮಾಡಲಾಗಿದೆ. ವಾಸ್ತವವಾಗಿ 2012ರ ಮಾಸ್ಟರ್ ಪ್ಲಾನ್ ನಲ್ಲಿ 60 ಅಡಿ ರಸ್ತೆಯಾಗಿದ್ದು, ಯೋಜನೆಯನ್ನು ಉಲ್ಲೇಖಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.