ಕಾರ್ಮಿಕರು ಸಂಘಟಿತರಾಗಬೇಕಿದೆ: ಶಾಸಕ ಡಾ.ಜಿ.ಪರಮೇಶ್ವರ್

Team Udayavani, Apr 22, 2022, 8:02 PM IST

1-sdsadas

ಕೊರಟಗೆರೆ: ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕಾದಲ್ಲಿ ಸಂಘಟಿತರಾಗಬೇಕಿದೆ ಎಂದು ಶಾಸಕ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಗುರುಭವನದಲ್ಲಿ ಕಲ್ಪತರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು  ಹಾಗೂ ಅಸಂಘಟಿತ ಕಾರ್ಮಿಕರ ನೂತನ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಕಾರ್ಮಿಕರು ಸಂಘಟಿತರಾಗದೇ ಹೋದರೆ ಅವರಿಗೆ ಸಿಗಬೇಕಾದ ಸೌಲಭ್ಯಗಳಿಂದ ವಂಚಿತರರಾಗಬೇಕಾಗುತ್ತದೆ. ನಮ್ಮ ದೇಶದಲ್ಲಿ ಸುಮಾರು ಶೇ. 90ಕ್ಕೂ ಹೆಚ್ಚು ಜನ ಇನ್ನೂ ಅಸಂಘಟಿತರಾಗಿಯೇ ಉಳಿದಿದ್ದಾರೆ. ಅದರಲ್ಲಿ ವಿಶೇಷವಾಗಿ ಕೃಷಿ ಕಾರ್ಮಿಕರು ಶೇ.45 ರಷ್ಟು ಜನ ಇದ್ದಾರೆ. ಸೇವಾಕೆಂದ್ರದಲ್ಲಿ ಶೇ. 30 ರಷ್ಟಿದ್ದಾರೆ. ಕೈಗಾರಿಕೆಯಲ್ಲಿ ಶೇ.25 ರಷ್ಟಿದ್ದಾರೆ. ಅವರು ಇಂದಿಗೂ ಶೋಷಿತರಾಗಿಯೇ ಉಳಿದಿದ್ದಾರೆ. ಅವರ ಸಂಕಷ್ಟವನ್ನ ಹೇಳೋರು, ಕೋಳೋರೇ ಯಾರೂ ಇಲ್ಲ. ಹಾಗಿದ್ದಾಗ ಅವರ ಜೀವನ ಶೈಲಿ ಇಂದಿಗೂ ಸುಸಜ್ಜಿತವಾಗಿಲ್ಲ ಎಂದರು.

ಬಾಬ ಸಾಹೇಬ್ ಅಂಬೇಡ್ಕರ್ ಅವರು ಮೊದಲಬಾರಿಗೆ ಕಾರ್ಮಿಕ ಸಚಿವರಾದ ಮೇಲೆ ಕಾರ್ಮಿಕರನ್ನು ಶೋಷಣೆಗೆ ಒಳಗಾಗುತ್ತಾರೆ ಎಂಬ ಮುಂದಾಲೋಚನೆಯಲ್ಲಿ ಅನೇಕ ಕಾನೂನು ರೂಪಿಸಿದರು. ಮನಮೋಹನ್ ಸಿಂಗ್ ಪ್ರಧಾನ ಸಿಂಗ್ ಪ್ರಧಾನಿಯಾಗಿದ್ದ ವೇಳೆ ಕೇಂದ್ರ ಕಾರ್ಮಿಕ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಕಾರ್ಮಿಕರಿಗಾಗಿ ಅನೇಕ ಕಾನೂನುಗಳನ್ನು ಜಾರಿಗೆ ತಂದರು. ಅದರಿಂದಾಗಿ ಅನೇಕ ಬದಲಾವಣೆಗಳಾಯಿತು ಎಂದರು.

ಕೊರಟಗೆರೆಯಲ್ಲಿ ಸುಮಾರು ೬೯೨೩ ಜನ ಅಸಂಘಟಿತ ಕಾರ್ಮಿಕರಿದ್ದಾರೆ. ಇವರಿಗೆ ನಿರ್ದಿಷ್ಟವಾದ ಕೆಲಸ ಇಲ್ಲ. ಇಂತವರಿಗೆ ಕೆಲಸ ನೀಡುವ ಕಾರಣದಿಂದಲೇ ನರೇಗ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತರಲಾಗಿದೆ. ಕಟ್ಟಡ ಕಾರ್ಮಿಕರಿಗೆ ಅನೇಕ ಸೌಲಭ್ಯಗಳಿವೆ ಆ ಕಾರಣದಿಂದ ಎಲ್ಲರೂ ನೋಂದಣಿ ಮಾಡಿಕೊಳ್ಳುವುದು ಅತ್ಯಗತ್ಯ ಎಂದರು.

ಕಾರ್ಮಿಕ ಜಿಲ್ಲಾ ಅಧಿಕಾರಿ ಎಚ್.ಎನ್.ರಮೇಶ್, ಪಟ್ಟಣ ಪಂಚಾಯಿತಿ ಸದಸ್ಯ ಎ.ಡಿ.ಬಲರಾಮಯ್ಯ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಕಾರ್ಮಿಕರಿಗೆ ವಿವಿಧ ಬಗೆಯ ಕಿಟ್ ಹಾಗೂ ಆರೋಗ್ಯ ಕಿಟ್ ವಿತರಿಸಲಾಯಿತು.

ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಆರ್.ಓಬಳರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಡಿಕಲ್ ಅಶ್ವತ್ಥ್, ಸಂಘದ ಗೌರವಾಧ್ಯಕ್ಷ ಅಧ್ಯಕ್ಷ ರಾಮಕೃಷ್ಣಯ್ಯ, ಅಧ್ಯಕ್ಷ ಡಿ.ಕಾಂತರಾಜು, ಉಪಾಧ್ಯಕ್ಷ ಕೆ.ವಿ.ಲಕ್ಷ್ಮಣ್, ಪ್ರಧಾನ ಕಾರ್ಯದರ್ಶಿ ಹನುಮಂತರಾಯಪ್ಪ, ಸದಸ್ಯರಾದ ಗಂಗಾಧರ್, ನಾಗರತ್ನಮ್ಮ, ಕೆ.ಶ್ರೀನಾಥ್ ಚಿನ್ನಿ, ರಾಜಣ್ಣ, ದೇವರಾಜು, ಗುಂಡಾನಾಯ್ಕ, ಚಿಕ್ಕೀರಪ್ಪ, ನಾಗರಾಜು, ಎಚ್.ಆನಂದ್, ಗಂಗಹನುಮಯ್ಯ, ಬಾನು ಜಾನ್ ಇತರರು ಇದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

1-pavagada

Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.