ಊಟ ಹಂಚುವಂತಿಲ್ಲ; ಮಾಸ್ಕ್ ತೆಗೆಯುವಂತಿಲ್ಲ; ದಿಲ್ಲಿಯ ಶಾಲೆಗಳಲ್ಲಿ ಮತ್ತೆ ಕಠಿನ ನಿಯಮ

Team Udayavani, Apr 23, 2022, 7:15 AM IST

thumb 4

ಹೊಸದಿಲ್ಲಿ: “ಕೊರೊನಾ ಸೋಂಕು ಇದ್ದರೆ, ಮಕ್ಕಳನ್ನು ಶಾಲೆಗೆ ಕಳುಹಿ­ಸಬೇಡಿ, ಶಾಲೆಯಲ್ಲಿ ಮಕ್ಕಳು ಊಟ ಹಂಚಿ­ಕೊಳ್ಳುವಂತಿಲ್ಲ…’ ಹೀಗೆಂದು ಶಾಲೆಗಳಲ್ಲಿ ಕೊರೊನಾ ಸಂಬಂಧ ಕಠಿನ ನಿಯಮಗಳನ್ನು ದಿಲ್ಲಿ ಸರಕಾರ ಮತ್ತೊಮ್ಮೆ ಜಾರಿಗೊಳಿಸಿದೆ.

ಮಕ್ಕ­ಳಲ್ಲಿ ಅಥವಾ ಮನೆಯ ಸದಸ್ಯರಲ್ಲಿ ಕೊರೊನಾ ಲಕ್ಷಣವಿದ್ದರೆ ಹೆತ್ತವರು ಮಕ್ಕಳನ್ನು ಶಾಲೆಗೆ ಕಳುಹಿಸ­ಬಾರದು. ಯಾವುದೇ ವಿದ್ಯಾರ್ಥಿ ಅಥವಾ ಶಿಕ್ಷಕರಲ್ಲಿ ಸೋಂಕಿನ ಲಕ್ಷಣ ಕಂಡುಬಂದರೆ ಕೂಡಲೇ ಅದನ್ನು ಶಾಲೆಯ ಮೇಲಧಿಕಾರಿ ಗಮನಕ್ಕೆ ತಂದು ಕ್ವಾರಂಟೈನ್‌ ಮಾಡಲು ಸೂಚಿಸಲಾಗಿದೆ. ಅದಕ್ಕಾಗಿ ಶಾಲೆ­ಯಲ್ಲಿ ಕ್ವಾರಂಟೈನ್‌ಗಾಗಿ ಪ್ರತ್ಯೇಕ ವ್ಯವಸ್ಥೆ ಹೊಂದಬೇಕು ಎಂದು ಸೂಚಿಸಲಾಗಿದೆ.

ಜತೆಗೆ ಶಾಲೆಯ ಅಧ್ಯಾಪಕರು ಮತ್ತು ಸಿಬಂದಿ ಪ್ರತೀ ದಿನ ವಿದ್ಯಾರ್ಥಿಗಳ ಬಳಿ, ಕೊರೊನಾ ಲಕ್ಷಣ ಇದೆಯೇ ಎಂದು ಪ್ರಶ್ನಿಸಬೇಕು. ಶಾಲೆಯ ಪ್ರವೇಶಕ್ಕೆ ಮುನ್ನವೇ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ಕಡ್ಡಾಯವಾಗಿ ಥರ್ಮಲ್‌ ಸ್ಕ್ಯಾನಿಂಗ್‌ ನಡೆಸಲೂ ಆದೇಶಿ­ಸಲಾಗಿದೆ.

1,042 ಕೇಸು: ಹೊಸದಿಲ್ಲಿಯಲ್ಲಿ ಶುಕ್ರ­ವಾರ 1,042 ಹೊಸ ಕೇಸುಗಳು ದೃಢಪಟ್ಟಿವೆ ಮತ್ತು ಇಬ್ಬರು ಅಸುನೀಗಿದ್ದಾರೆ. ಪಾಸಿಟಿ­ವಿಟಿ ಪ್ರಮಾಣ ಶೇ.4.64 ಆಗಿದೆ. ಜತೆಗೆ ಮಾಸ್ಕ್ ಧರಿಸುವ ನಿಯಮ ಕೂಡ ಜಾರಿಯಾಗಿದೆ. ತಪ್ಪಿದಲ್ಲಿ 500 ರೂ. ದಂಡ ವಿಧಿಸಲಾಗುತ್ತದೆ. ತಮಿಳುನಾಡಿನಲ್ಲೂ ಇದೇ ನಿಯಮ ಜಾರಿ ಮಾಡಲಾಗಿದೆ.

ಏರಿಕೆ: ಗುರುವಾರದಿಂದ ಶುಕ್ರವಾರದ ಅವಧಿಯಲ್ಲಿ 2,451 ಕೊರೊನಾ ಪ್ರಕರಣ ದೃಢವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ, 14,241ಕ್ಕೆ ಏರಿಕೆಯಾಗಿದೆ. 54 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಚೀನದ ಶಾಂಘೈಯಲ್ಲಿ ಲಾಕ್‌ಡೌನ್‌ 26ರ ವರೆಗೆ ವಿಸ್ತರಿಸಲಾಗಿದೆ. ಸಾವಿನ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

ಕೊವಿಶೀಲ್ಡ್‌ ಉತ್ಪಾದನೆ ಸ್ಥಗಿತ
ಭಾರತದ ಅತಿ ದೊಡ್ಡ ಲಸಿಕೆ ಉತ್ಪಾದನ ಕೇಂದ್ರವಾಗಿರುವ ಸೀರಂ ಇನ್‌ಸ್ಟಿಟ್ಯೂಟ್‌ “ಕೊವಿಶೀಲ್ಡ್‌’ ಲಸಿಕೆಯ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ ಎಂದು ಅದರ ಮುಖ್ಯಸ್ಥ ಆದಾರ್‌ ಪೂನಾವಾಲ ತಿಳಿಸಿದ್ದಾರೆ. ಡಿಸೆಂಬರ್‌ ವೇಳೆಗೆ ನಮ್ಮ ಬಳಿ 200 ಮಿಲಿಯನ್‌ ಡೋಸ್‌ ಲಸಿಕೆಯಿತ್ತು. ಆದರೆ ಕೊಳ್ಳುವವರು ಇರಲಿಲ್ಲ. ಹಾಗಾಗಿ ಉಚಿತವಾಗಿ ಲಸಿಕೆ ಹಂಚುವುದಾಗಿ ಘೋಷಿಸಿದೆವು. ಲಸಿಕೆಗೆ ಬೇಡಿಕೆ ಕಡಿಮೆಯಾದ ಹಿನ್ನೆಲೆ ಉತ್ಪಾದನೆಯನ್ನು ಸ್ಥಗಿತಗೊಳಿಸದೆ ಬೇರೆ ದಾರಿಯಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.