ಮಂಗಳೂರು: BMW ಕಾರು ಢಿಕ್ಕಿ; ಮೆದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ದಾನಕ್ಕೆ ನಿರ್ಧಾರ
Team Udayavani, Apr 23, 2022, 12:24 PM IST
ಮಂಗಳೂರು: ನಗರದ ಬಲ್ಲಾಳ್ ಭಾಗ್ ನಲ್ಲಿ ಡಿವೈಡರ್ ಹಾರಿ ಬಿಎಂಡಬ್ಲ್ಯು ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೀತಿ ಮನೋಜ್ ಅವರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಏ. 9 ರಂದು ನಗರದ ಬಲ್ಲಾಳ್ ಭಾಗ್ ನಲ್ಲಿ ವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ಡಿವೈಡರ್ ಹಾರಿ ಎರಡು ವಾಹನಗಳಿಗೆ ಢಿಕ್ಕಿ ಆಗಿತ್ತು. ಈ ಪೈಕಿ ಪ್ರೀತಿ ಮನೋಜ್ ಎನ್ನುವವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು, ಅವರು ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಎರಡು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಿರಲಿಲ್ಲ. ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದು, ಆ ಬಳಿಕ ಕುಟುಂಬದ ಸದಸ್ಯರು ಪ್ರೀತಿ ಮನೋಜ್ ಅವರ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.