ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ: ಶಾಸಕ ಡಾ.ಜಿ ಪರಮೇಶ್ವರ್
Team Udayavani, Apr 23, 2022, 12:48 PM IST
ಕೊರಟೆಗೆರೆ: ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ ಕ್ಷೇತ್ರ ಅಭಿವೃದ್ಧಿಯೇ ನನ್ನ ಉದ್ದೇಶ ಎಂದು ಶಾಸಕ ಡಾ.ಜಿ ಪರಮೇಶ್ವರ್ ತಿಳಿಸಿದರು.
ತಾಲೂಕಿನ ಕೋಳಾಲ ಹೋಬಳಿಯ ಸುಮಾರು 5 ಕೋಟಿಯ ಹಲವು ಕಾಮಗಾರಿಗಳನ್ನು ನೀಲಗೊಂಡನಹಳ್ಳಿ, ಎಲೆರಾಂಪುರ, ವಜ್ಜನಕುರಿಕೆ,ಚಿನ್ನಹಳ್ಳಿ ಗ್ರಾ.ಪಂಗಳಲ್ಲಿನ ಹಲವು ಗ್ರಾಮಗಳ ಸಿಸಿ ರಸ್ತೆ,ಶಾಲಾ ಕಟ್ಟಡ, ಸಮುದಾಯ ಭವನ, ಗ್ರಾ.ಪಂ ಕಟ್ಟಡ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿ ಮಾತನಾಡಿದರು.
ವಸತಿ ಸಚಿವ ಸೋಮಣ್ಣ ಅವರಿಂದ 5 ಸಾವಿರ ಮನೆಯನ್ನು ಮಂಜೂರು ಮಾಡಿಸಿಕೊಂಡಿದ್ದು ಗ್ರಾಮ ಸಭೆಗಳನ್ನು ನಡೆಸಿ ಅರ್ಹ ಫಲಾನುಭವಿಗಳಿಗೆ ಮನೆ ವಿತರಿಸಿಸುವುದಾಗಿ ಹೇಳಿದರು.
ಪ್ರತಿ ಹಂತದಲ್ಲಿಯೂ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ನನ್ನ ನಿರಂತರ ಪ್ರಯತ್ನ ಇದ್ದೇ ಇರುತ್ತದೆ. ನಾನು ಕ್ಷೇತ್ರದಲ್ಲಿ 15 ವರ್ಷದಿಂದ ಸ್ಪರ್ಧೆ ಮಾಡುತ್ತಿದ್ದೇನೆ ಆದರೆ ನನಗೆ ಸಿಕ್ಕಿರುವಂತಹ ಒಂಬತ್ತು ವರ್ಷ ಆಕಾಶದಲ್ಲಿ ಸ್ಮರಣೀಯ ಕೆಲಸಗಳನ್ನು ಕ್ಷೇತ್ರದಲ್ಲಿ ಮಾಡಿದ್ದೇನೆ ಎಂದು ತಿಳಿಸಿದರು.
ಸಿಂಗ್ರಿಹಳ್ಳಿ ಗ್ರಾಮದಲ್ಲಿ 30 ಮತ್ತು ವಜ್ಜನಕುರಿಕೆ ಗ್ರಾಮದಲ್ಲಿ ವಯೋವೃದ್ಧ, ವಿಧವಾ ಮತ್ತು ಅಂಗವಿಕಲ ಫಲಾನುಭವಿಗಳಿಗೆ ಕಂದಾಯ ಇಲಾಖೆಯ ವತಿಯಿಂದ ಶಾಸಕರ ನೇತೃತ್ವದಲ್ಲಿ ಪಿಂಚಣೆ ಆದೇಶ ಪ್ರತಿಗಳನ್ನು ವಿತರಿಸಲಾಯಿತು.
ಎಲೆರಾಂಪುರ ಗ್ರಾ.ಪಂ ವ್ಯಾಪ್ತಿಯ ಸಿಂಗ್ರಿಹಳ್ಳಿ ಗ್ರಾಮಸ್ಥರು, ಗ್ರಾಮಕ್ಕೆ ಸರಕಾರಿ ಬಸ್, ಪಶು ಆಸ್ಪತ್ರೆ, ಅಂಬೇಡ್ಕರ್ ಭವನ, ಗ್ರಾಮ ಲೆಕ್ಕಿಗರ ನಿವಾಸ ದುರಸ್ಥಿ, ಗ್ರಾಮದಲ್ಲಿನ ತಿಮ್ಮಪ್ಪ ಸ್ವಾಮಿ ದೇವಾಲಯವನ್ನು ಅಭಿವೃದ್ಧಿ ಪಡಿಸುವುದು ಸೇರಿದಂತೆ ಇತರೆ ಕೆಲಸಗಳನ್ನು ಮಾಡಿಕೊಡುವಂತೆ ಶಾಸಕರನ್ನು ಮನವಿ ಮಾಡಿದರು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕ ಎಲ್ಲವನ್ನೂ ಪೂರೈಸುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅರಕೆರೆ ಶಂಕರ್, ತಹಶೀಲ್ದಾರ್ ನಹೀದಾ ಜಮ್ ಜಮ್,ವಜ್ಜನಕುರಿಕೆ ಗ್ರಾ.ಪಂ ಅಧ್ಯಕ್ಷ ನಾಗೇಂದ್ರ, ಎಲೆರಾಂಪುರ ಗ್ರಾ.ಪಂ ಗಂಗಾಭಿಕೆ, ಉಪಾಧ್ಯಕ್ಷ ಉಮೇಶ್ ಚಂದ್ರ, ನೀಲಗೊಂಡನಹಳ್ಳಿ ಗ್ರಾ.ಪಂ ಉಪಾಧ್ಯಕ್ಷ ಕಿರಣ್ ಕುಮಾರ್, ಬಿಇಒ ಸುಧಾಕರ್, ಎಇಇ ರವಿಕುಮಾರ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.