ಟಿಆರ್‌ಎಸ್‌ಗೆ ಟಾಂಗ್‌ ಕೊಟ್ಟ ಶಾಸಕ ಪಾಟೀಲ್‌!


Team Udayavani, Apr 23, 2022, 1:12 PM IST

7patil

ರಾಯಚೂರು: ಜಿಲ್ಲೆಯನ್ನು ಕಡೆಗಣಿಸಿದ ಸರ್ಕಾರದ ವಿರುದ್ಧ ಆವೇಶದಲ್ಲಿ ನೀಡಿದ್ದ ಹೇಳಿಕೆಯನ್ನೇ ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ತೆಲಂಗಾಣ ರಾಷ್ಟ್ರ ಸಮಿತಿ ನಾಯಕರಿಗೆ ಬಿಜೆಪಿ ಶಾಸಕ ಡಾ| ಶಿವರಾಜ್‌ ಪಾಟೀಲ್‌ ಅವರ ಭಾಷೆಯಲ್ಲೆ ಉತ್ತರ ನೀಡಿದ್ದಾರೆ.

ತೆಲುಗಿನಲ್ಲಿ ವಿಡಿಯೊ ಮಾಡಿ ವಿನಾಕಾರಣ ತಮ್ಮ ಹೇಳಿಕೆಯನ್ನು ತಿರುಚಿ ರಾಜಕೀಯಕ್ಕೆ ಬಳಸಿಕೊಳ್ಳದಂತೆ ಎಚ್ಚರಿಸಿದ್ದಾರೆ. ಕಳೆದ ವರ್ಷ ನಗರಕ್ಕೆ ಆಗಮಿಸಿದ್ದ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಕಾರ್ಯಕ್ರಮದಲ್ಲಿ ಶಾಸಕ ಶಿವರಾಜ್‌ ಪಾಟೀಲ್‌ ಮಾತನಾಡುವ ಭರದಲ್ಲಿ ಸರ್ಕಾರದ ನಡೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು.

ಭಾಗವನ್ನು ಸರ್ಕಾರ ಕಡೆಗಣಿಸುತ್ತಿದೆ. ಸರಿಯಾದ ಸೌಲಭ್ಯ, ಅನುದಾನ ಕೊಡದಿದ್ದರೆ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಶಾಸಕ ಆಡಿದ ಮಾತನ್ನು ಬೇರೆ ರೀತಿಯಲ್ಲಿ ಬಿಂಬಿಸಿ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವಂತೆ ಶಾಸಕರೇ ಹೇಳಿದ್ದಾರೆ ಎಂದು ಸುದ್ದಿ ಹಬ್ಬಿಸಲಾಯಿತು. ಶಾಸಕರು ಮಾತನಾಡಿದ ವಿಡಿಯೋ ಕೂಡ ಎಲ್ಲೆಡೆ ವೈರಲ್‌ ಆಗಿತ್ತು. ಈ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಿದ್ದ ಶಾಸಕ ಶಿವರಾಜ್‌ ಪಾಟೀಲ್‌, “ನಾನು ಆವೇಶದಲ್ಲಿ ಸರ್ಕಾರದ ಮೇಲಿನ ಅಸಮಾಧಾನದಿಂದ ಈ ಮಾತನಾಡಿದ್ದು, ದಯವಿಟ್ಟು ಕ್ಷಮಿಸಿ’ ಎಂದು ಸ್ಪಷ್ಟಿಕರಣ ಕೂಡ ನೀಡಿದ್ದರು.

ಮಳೆ ನಿಂತರೂ ಮರದ ಹನಿ ನಿಲ್ಲಿಲಿಲ್ಲ ಎನ್ನುವಂತೆ ಶಾಸಕರ ಈ ಹೇಳಿಕೆಯನ್ನು ಟಿಆರ್‌ ಎಸ್‌ ನಾಯಕರು ಇಂದಿಗೂ ತಮ್ಮ ಪ್ರಚಾರಕ್ಕೆ ಬಳಸಿಕೊಳ್ಳುವ ಮೂಲಕ ಅಲ್ಲಿನ ಬಿಜೆಪಿ ನಾಯಕರನ್ನು ಕೆಣಕುತ್ತಿದ್ದಾರೆ.

ತೆಲುಗಿನಲ್ಲೇ ಉತ್ತರ!: ಟಿಆರ್‌ಎಸ್‌ ಮುಖಂಡ ಹಾಗೂ ಸಿಎಂ ಪುತ್ರ ಕೆ.ಟಿ. ರಾಮರಾವ್‌ ತಮ್ಮ ಸದನದಲ್ಲಿ, ಪ್ರಚಾರ ಸಭೆಗಳಲ್ಲಿ ಈ ವಿಚಾರ ಒತ್ತಿ ಒತ್ತಿ ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. “ನಮ್ಮ ಟಿಆರ್‌ಎಸ್‌ ಆಡಳಿತ ಕಂಡು ಬಿಜೆಪಿಯ ಶಾಸಕರೇ ಮರುಳಾಗಿದ್ದಾರೆ. ಕರ್ನಾಟಕದ ತಮ್ಮ ಕ್ಷೇತ್ರವನ್ನು ತೆಲಂಗಾಣಕ್ಕೆ ಸೇರಿಸಲು ಉತ್ಸುಕರಾಗಿದ್ದಾರೆ. ಅಲ್ಲಿನ ಬಿಜೆಪಿ ಕಿಂಚಿತ್ತೂ ಅಭಿವೃದ್ಧಿ ಮಾಡಿಲ್ಲ. ರೈತರಿಗೆ ವಿದ್ಯುತ್‌ ಕೊಡುತ್ತಿಲ್ಲ. ಸರಿಯಾದ ರಸ್ತೆಗಳಿಲ್ಲ. ಬಡವರಿಗೆ ಸೌಲಭ್ಯ ನೀಡುತ್ತಿಲ್ಲ. ನಮಗೆ ಸಾಕಾಗಿದೆ, ತೆಲಂಗಾಣಕ್ಕೆ ಸೇರಿಸಿಬಿಡಿ ಎಂದು ಗೋಗರೆಯುತ್ತಿದ್ದಾರೆ’ ಎಂದೆಲ್ಲ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಈ ಹೇಳಿಕೆ ಕೇಳಿ ಕೇಳಿ ಬೇಸತ್ತಿದ್ದ ಶಾಸಕ ಪಾಟೀಲ್‌ ಕೊನೆಗೆ ಕನ್ನಡದಲ್ಲಿ ಉತ್ತರ ನೀಡದೇ ಆ ನಾಯಕರಿಗೆ ಅರ್ಥವಾಗುವ ಹಾಗೆ ತೆಲುಗಿನಲ್ಲೇ ವಿಡಿಯೋ ಮಾಡಿ ಉತ್ತರ ನೀಡಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಶಾಕಸರು ಮಾಡಿರುವ ವಿಡಿಯೊದಲ್ಲಿ “ನಾನು ಆವೇಷದಲ್ಲಿ ಹೇಳಿದ್ದ ಒಂದು ಮಾತನ್ನು ನೀವು ರಾಜಕೀಯಕ್ಕೆ ಬಳಸಿಕೊಳ್ಳುವುದನ್ನು ಬಿಡಿ. ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರ ಮಾಡಿದಷ್ಟು ನೀವು ಮಾಡಲು ಸಾಧ್ಯವಿಲ್ಲ. ಮೊದಲು ನಿಮ್ಮ ರಾಜ್ಯವನ್ನು ಅಭಿವೃದ್ಧಿ ಮಾಡಿಕೊಳ್ಳಿ. ತೆಲಂಗಾಣದ ಮೆಹಬೂಬ್‌ ನಗರ ರಾಯಚೂರು ಪಕ್ಕದಲ್ಲೇ ಇದ್ದು, ಎಷ್ಟು ಅಭಿವೃದ್ಧಿಯಾಗಿದೆ ಎಂದು ಒಮ್ಮೆ ನೋಡಿಕೊಳ್ಳಿ. ನಮ್ಮಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಐದು ಸಾವಿರ ಕೋಟಿ ಅನುದಾನ ತಂದು ಜಿಲ್ಲೆಯನ್ನು ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ನನ್ನ ಹೇಳಿಕೆಯನ್ನೇ ಬಳಸಿಕೊಂಡು ಬಿಟ್ಟಿ ಪ್ರಚಾರ ಪಡೆಯುವುದು ಬಿಡಿ’ ಎಂದು ಎಚ್ಚರಿಕೆ ನೀಡಿದ್ದಾರೆ. ಲಾಭ ಪಡೆಯಲು ಕಾಂಗ್ರೆಸ್‌ ಯತ್ನ

ಪ್ರತಿಪಕ್ಷ ಕಾಂಗ್ರೆಸ್‌ ಈ ಅವಕಾಶವನ್ನು ಬಳಸಿಕೊಂಡು ಶಾಸಕರ ವಿರುದ್ಧ ವಾಗ್ಧಾಳಿ ನಡೆಸುತ್ತಿದೆ. ಟಿಆರ್‌ ಎಸ್‌ ನಾಯಕರ ಹೇಳಿಕೆಗಳನ್ನು ತಮ್ಮ ಸುದ್ದಿಗೋಷ್ಠಿಯಲ್ಲಿ ಬಳಸಿಕೊಳ್ಳುವುದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿವರಾಜ್‌ ಪಾಟೀಲ್‌ ವರ್ಚಸ್ಸು ಕುಗ್ಗಿಸುವ ಯತ್ನದಲ್ಲಿದೆ. ಈ ಎಲ್ಲ ಬೆಳವಣಿಗೆ ಗಮನಿಸಿ ಶಾಸಕರು ಈ ರೀತಿ ಪ್ರತಿಕ್ರಿಯಿಸಿದ್ದಾರೆ ಎಂದು ತಿಳಿದು ಬಂದಿದೆ.

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.