ಆಪ್ತರ ಬಂಧನವಾಗುತ್ತಿದ್ದಂತೆ ಪ್ರಿಯಾಂಕ್ ಖರ್ಗೆ ಆಡಿಯೋ ಬಿಡುಗಡೆ ಮಾಡಿದ್ದಾರೆ: ಆರಗ
Team Udayavani, Apr 23, 2022, 1:27 PM IST
ಬೆಂಗಳೂರು: ಪಿಎಸ್ಐ ಹುದ್ದೆಗಳ ಅಕ್ರಮ ನೇಮಕಾತಿ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಅಪ್ತರೆನ್ನಲಾದ ಅವರದೇ ಪಕ್ಷದ ನಾಯಕರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ತಮ್ಮ ಬಳಿ ಅಕ್ರಮಕ್ಕೆ, ಸಂಬಂಧಿಸಿದಂತೆ ಒಂದು ತಿಂಗಳ ಹಿಂದೆಯೇ, ತಮಗೆ ಸಲ್ಲಿಕೆಯಾಗಿದೆ ಎನ್ನಲಾದ ಒಂದು ಆಡಿಯೋ ರೆಕಾರ್ಡ್ಅನ್ನು ಖರ್ಗೆಯವರು ಇಂದು ಬಿಡುಗಡೆ ಮಾಡಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ, ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಸಿಐಡಿ ತನಿಖೆಗೆ ನಾನೇ ಸ್ವತಃ ಆಸಕ್ತಿ ತೋರಿಸಿ ಮುಖ್ಯಮಂತ್ರಿಗಳ ಜತೆ ಸಮಾಲೋಚಿಸಿ, ತನಿಖೆಗೆ ಆದೇಶ ನೀಡಿದ್ದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.
ಪ್ರಿಯಾಂಕ್ ಖರ್ಗೆಯವರು ನಂತರ ಪತ್ರಿಕಾ ಗೊಷ್ಠಿ ನಡೆಸಿದ್ದರು, ಆದರೆ ಆಡಿಯೋ ರೆಕಾರ್ಡ್ ಬಗ್ಗೆ ಮಾಹಿತಿ ನೀಡಿರಲಿಲ್ಲ. ಈಗ ಅವರ ಆಪ್ತರು ಬಂಧನವಾಗುತ್ತಿದ್ದಂತೆ ಮಾಹಿತಿ ಹೊರ ಹಾಕಿದ್ದಾರೆ. ಇಷ್ಟು ದಿನ ಯಾಕೆ ಸಾಕ್ಷ್ಯವನ್ನು ತಮ್ಮ ಬಳಿ, ಇಟ್ಟುಕೊಂಡಿದ್ದರು ಎಂದು ಸಾರ್ವಜನಿಕರಿಗೆ ತಿಳಿಸಬೇಕು. ತಮ್ಮ ಬೆಂಬಲಿಗರು, ಸಿಐಡಿ ತನಿಖೆಯಲ್ಲಿ ಸಿಕ್ಕಿ ಬೀಳುವುದಿಲ್ಲ ಎಂಬ ಹುಸಿ ನಂಬಿಕೆಯೂ ಇರಬಹುದು ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:ಸಂಘಟನಾ ತಂತ್ರ; ಬಿಜೆಪಿ ಪೇಜ್ ಪ್ರಮುಖ್ ವ್ಯವಸ್ಥೆಯಲ್ಲಿ ಬದಲಾವಣೆ
ಈಗಲಾದರೂ ಖರ್ಗೆಯವರು ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು. ತಮ್ಮ ಹೊಣೆಗಾರಿಕೆಯನ್ನು ಅರಿಯಬೇಕು ಎಂದು ವಿನಂತಿಸುತ್ತೇನೆ. ತನಿಖೆಯು ನಿಷ್ಪಕ್ಷಪಾತವಾಗಿ ನಡೆಯುತ್ತಿದ್ದು, ಅಕ್ರಮದಲ್ಲಿ ಒಳಗಾಗಿದವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ. ಕಾಂಗ್ರೆಸ್ ನಾಯಕರು ತನಿಖೆಗೆ ಸಹಕರಿಸಬೇಕು ಹಾಗೂ ಯಾವುದೇ ರೀತಿಯ ರಾಜಕೀಯ ಲಾಭ ಅಪೇಕ್ಷೆ ಮಾಡದೆ, ಅಕ್ರಮ ಎಸಗಿದವರನ್ನು, ಕಾನೂನಿನ ಬಲೆಗೆ ತರಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.