ಪ್ರಿಯಾಂಕ್ ಖರ್ಗೆ ಆಡಿಯೋದಲ್ಲಿ ಬಾಂಬ್ ಇಲ್ಲ, ಏನೂ ಇಲ್ಲ: ಸಿಎಂ
Team Udayavani, Apr 23, 2022, 2:21 PM IST
ದಾವಣಗೆರೆ:ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಯಾವ ಬಾಂಬ್ ಇಲ್ಲ, ಏನೂ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಶನಿವಾರ ಹೇಳಿಕೆ ನೀಡಿದ್ದಾರೆ.
ಬಾಂಬ್ ಸ್ಪೋಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅದರಲ್ಲಿ ಏನೂ ಇಲ್ಲವಲ್ಲ, ನಿಮ್ಮ ಪ್ರಕಾರ ಏನಿದೆ ನೀವೇ ಹೇಳಿ.ಆಡಿಯೋ ದಲ್ಲಿ ಏನಿದೆ, ಆರೋಪಿಗಳು ಏನು ಮಾತನಾಡಿದ್ದಾರೆಂಬ ಬಗ್ಗೆ ತನಿಖೆಗೆ ಒಳಪಡಿಸುತ್ತೇವೆ ಎಂದರು.
ಬೆಂಗಳೂರಿನ ಶಾಲೆಗಳಲ್ಲಿ ಹುಸಿ ಬಾಂಬ್ ಕರೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಪಾಕಿಸ್ಥಾನನ, ಸಿರಿಯಾದಿಂದ ಬಂದಿದೆ ಎಂಬ ಗೊಂದಲವಿದೆ. ಆ ರೀತಿಯ ಕರೆ, ಇಮೇಲ್ ಗಳು ಹಿಂದೆಯೂ ಸಹ ಬಂದಿವೆ. ಅವುಗಳ ಇ ಮೇಲ್ ಇದ್ದರೆ ಯಾವ ದೇಶದಿಂದ ಬಂದಿವೆ ಅಂತ ಸುಲಭವಾಗಿ ಪತ್ತೆ ಹಚ್ಚಬಹುದು.ಈ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ, ಗಂಭೀರವಾದ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ : ಸರಕಾರಕ್ಕೆ ಬಿಸಿತುಪ್ಪವಾದ PSI ಪರೀಕ್ಷೆ ಹಗರಣ: ಖರ್ಗೆ ಆಡಿಯೋ ಟೇಪ್ ತನಿಖೆಗೆ ಸಿಎಂ ನಿರ್ಧಾರ
ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ವಿಚಾರಕ್ಕೆ ಪ್ರತಿಕ್ರಿಯಿಸಿ, ತನಿಖೆ ನಡೆಸಲು ಸಿಐಡಿಗೆ ಮುಕ್ತ ಅವಕಾಶ ನೀಡಿದ್ದೇವೆ.ಯಾರ್ಯಾರು ಭಾಗಿಯಾಗಿದ್ದಾರೆಂಬ ತನಿಖೆ ನಡೆಸಿ ಸೂಕ್ರ ಕ್ರಮಕೈಗೊಳ್ಳುತ್ತೇವೆ. ತನಿಖೆ ವೇಳೆ ಯಾವುದೇ ಪಕ್ಷದವರಾದರು ನಿರ್ದಾಕ್ಷಿಣ್ಯವಾದ ಕ್ರಮ ಕೈಗೊಳ್ಳುತ್ತೇವೆ ಎಂದರು.
ಪರೀಕ್ಷಾ ಕೇಂದ್ರದಲ್ಲಿ ಅಕ್ರಮವೆಸಗಲು ಸಹಕಾರ ನೀಡಿದವರ ವಿರುದ್ಧ ಕಠಿಣ ಕ್ರಮ. ಸಂಪುಟ ವಿಸ್ತರಣೆ ವಿಚಾರ ವರಿಷ್ಟರ ಜೊತೆ ಚರ್ಚೆ ಬಳಿಕ ನನಗೂ ಮಾಹಿತಿ ಸಿಗಲಿದೆ. ಸಂಪುಟದಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡುವ ಬಗ್ಗೆ ಸಂಪುಟ ರಚನೆ ಬಳಿಕ ತಿಳಿಸುವೆ ಎಂದರು.
ಆಡಿಯೋದಲ್ಲಿ ಏನಿದೆ?
ಆಡಿಯೋದಲ್ಲಿ ಪಿಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಅಭ್ಯರ್ಥಿ ಮತ್ತು ಮಧ್ಯವರ್ತಿಯೊಬ್ಬ ಮಾತನಾಡಿದ್ದಾರೆ ಎನ್ನಲಾಗಿದ್ದು, ಪರೀಕ್ಷೆಗೆ ಮೊದಲೇ ಅಕ್ರಮಕ್ಕೆ ಅನುಕೂಲವಾಗುವ ಕೇಂದ್ರವನ್ನು ಮಂಜೂರು ಮಾಡುವಂತೆ ಅರ್ಜಿ ಸಂಖ್ಯೆ ಕಳುಹಿಸುವಂತೆ ಕೇಳುತ್ತಿರುವುದು ಆಡಿಯೋದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.