ಕಂದಾಯ ಇಲಾಖೆ ಸೌಲಭ್ಯ ಜನಕ್ಕೆ ತಲುಪಿಸಿ: ರಾಗಪ್ರಿಯಾ
Team Udayavani, Apr 23, 2022, 3:10 PM IST
ಯಾದಗಿರಿ: ಸರ್ಕಾರದ ಕಂದಾಯ ಇಲಾಖೆಯಲ್ಲಿನ ಯೋಜನೆಯ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಸೂಚಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ಯಾದಗಿರಿ ತಾಲೂಕಿನ 4, ಶಹಾಪುರ 13, ಸುರಪುರ 8, ಗುರುಮಿಠಕಲ್ 6, ವಡಿಗೇರಾ 8, ಹುಣಸಗಿ 16 ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ಒಟ್ಟು 55 ಸಾಂಪ್ರದಾಯಿಕ ರುದ್ರಭೂಮಿಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಸಹ ಪ್ರಗತಿ ವರದಿಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗಿರುತ್ತದೆ ಎಂದು ತಿಳಿಸಿದರು.
ಏಪ್ರಿಲ್ ತಿಂಗಳಲ್ಲಿ ಯಾದಗಿರಿ ತಾಲೂಕು 2 ಗುರುಮಿಠಕಲ್ 5 ಒಟ್ಟು 7 ಗ್ರಾಮಗಳ ಸ್ಮಶಾನ ಮಂಜೂರು ಮಾಡಲಾಗಿರುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಜಮೀನು ಸರ್ವೇ ಕಾರ್ಯಗಳ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಇಲಾಖೆಯ ಹಾಗೂ ನೋಂದಾಯಿತ ಸರ್ವೇಯರ್‌ಗಳಿಗೆ ಪ್ರಕರಣಗಳನ್ನು ಹಂಚಿಕೆ ಮಾಡಿದ ನಂತರ, ಸಂಬಂಧಪಟ್ಟ ಸ್ಥಳಕ್ಕೆ ಭೇಟಿ ನೀಡಿ, ಶೀಘ್ರದಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸರ್ವೇಯರ್ ಗಳ ಪ್ರಗತಿಯನ್ನು ನಿರಂತರವಾಗಿ ಗಮನಿಸಲು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಶಹಾಪುರ ತಹಶೀಲ್ದಾರ್ ಮಧುರಾಜ್, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ವಡಿಗೇರಾ ತಹಶೀಲ್ದಾರ್ ಸುರೇಶ್ ಅಂಕಲಗಿ, ಗುರುಮಿಠಕಲ್ ತಹಶೀಲ್ದಾರ್ ಶರಣಬಸವ, ಹುಣಸಗಿ ತಹಶೀಲ್ದಾರ್ ಅಶೋಕ ಸುರಪುರಕರ್ ಹಾಗೂ ಇನ್ನಿತರ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.