ಪೊಲೀಸ್ ನೇಮಕಾತಿ ಅಕ್ರಮ; ಬಿಜೆಪಿ,ಕಾಂಗ್ರೆಸ್ ನವರು ಎಂದು ಬೇಡ: ಜೋಶಿ
ಹುಬ್ಬಳ್ಳಿಯಲ್ಲಿ ತಪ್ಪು ಮಾಡಿದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ
Team Udayavani, Apr 23, 2022, 4:18 PM IST
ಹುಬ್ಬಳ್ಳಿ: ಪೊಲೀಸ್ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾದವರು ಬಿಜೆಪಿ,ಕಾಂಗ್ರೆಸ್ ನವರು ಎಂದು ಬೇಡ ಅಕ್ರಮದಲ್ಲಿ ಭಾಗಿಯಾದವರು ಯಾರೇ ಆಗಲಿ ಅವರಿಗೆ ಶಿಕ್ಷೆ ಆಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಯಾವ ಮಟ್ಟಕ್ಕೂ ಇಳಿಯುತ್ತದೆ.ಅದರ ಭಾಗವಾಗಿಯೇ ವಿಧಾನಸಭೆ ವಿಪಕ್ಷ ನಾಯಕ ಆರ್ ಎಸ್ ಎಸ್ ಸೇರಿದಂತೆ ಕೆಲ ಸಂಘಟನೆಗಳ ನಿಷೇಧಕ್ಕೆ ಒತ್ತಾಯಿಸಿರುವುದು ಅವರ ಬೌದ್ಧಿಕ ದಿವಾಳಿತನದ ಸಂಕೇತವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಎಸ್ ಡಿಪಿಐಯಿಂದ ಕಾಂಗ್ರೆಸ್ ಮತಬ್ಯಾಂಕ್ ಗೆ ಧಕ್ಕೆ ಆಗುತ್ತಿದ್ದು, ಅದನ್ನು ನಿಷೇಧಿಸಬೇಕೆಂಬುದಕ್ಕೆ, ಆರ್ ಎಸ್ ಎಸ್, ಹಿಂದೂ ಸಂಘಟನೆಗಳನ್ನು ಸೇರಿಸಲಾಗುತ್ತಿದೆ. ಇಂತಹ ಒತ್ತಾಯ ಗಮನಿಸಿದರೆ ಸಿದ್ದರಾಮಯ್ಯ ಅವರಿಗೆ ಸಂಸ್ಕಾರ, ಘನತೆ ಇಲ್ಲ ಎಂದೆನಿಸುತ್ತಿದೆ.ಮಠಗಳಿಗೆ ಅನುದಾನ ನೀಡಲು ಯವುದೇ ಕಮಿಷನ್ ಪಡೆದಿಲ್ಲ ಎಂದು ಬಹುತೇಕ ಮಠಾಧೀಶರು ಹೇಳಿದ್ದಾರೆ, ಅದರ ಬಗ್ಗೆ ಸಿದ್ದರಾಮಯ್ಯನವರು ಮಾತನಾಡಲಿ ಎಂದರು.
ಹಳೇ ಹುಬ್ಬಳ್ಳಿ ಘಟನೆಯಲ್ಲಿ ತಪ್ಪು ಮಾಡಿದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಪೊಲೀಸರು ಕಾನೂನು ಪ್ರಕಾರ ತಮ್ಮ ಕ್ರಮ ಕೈಗೊಳ್ಳುತ್ತಿದ್ದಾರೆ . ಹಿಜಾಬ್ ವಿಷಯವಾಗಿ ವಿದ್ಯಾರ್ಥಿನಿಯರು ಪರೀಕ್ಷೆ ಯಿಂದ ಹೊರಗುಳಿಯುವುದು ಬೇಡ. ಹಿಜಾಬ್ ಇರಲಿ ಎಂದು ಪ್ರಚೋದಿಸುವ ಮುಖಂಡರ ಮಕ್ಕಳು ಬೇರೆ ಕಡೆ ಓದಿಸುತ್ತಿದ್ದಾರೆ. ಕಾಶ್ಮೀರ ದಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ ನಾಯಕರು ತಮ್ಮ ಮಕ್ಕಳನ್ನು ವಿದೇಶದಲ್ಲಿ ಓದಿಸುತ್ತಿದ್ದಾರೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುವುದು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.