ರಾಜ್ಯದಲ್ಲಿರುವುದು “ಕಮಿಷನ್’ ಸರಕಾರ : ಮಂಜುನಾಥ ಭಂಡಾರಿ
Team Udayavani, Apr 24, 2022, 6:15 AM IST
ಕುಂದಾಪುರ: ರಾಜ್ಯದಲ್ಲಿ ರುವ ಬಿಜೆಪಿ ಸರಕಾರವು “ಕಮಿಷನ್’ ಸರಕಾರವಾಗಿದ್ದು, ಕಾಮಗಾರಿಯಲ್ಲಿ ಶೇ. 40, ಮಠ-ಮಂದಿರಗಳ ಅನುದಾದನಲ್ಲಿ ಶೇ. 30 ಪಡೆಯುತ್ತಿದೆ ಎನ್ನುವ ಆರೋಪಗಳಿವೆ. ಇಂತಹ ಸರಕಾರದಿಂದ ನಾವು ರಾಜ್ಯದಲ್ಲಿ ಏನು ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯ? ಈ ಬಗ್ಗೆ ಗೊತ್ತಿದ್ದರೂ ಪ್ರಧಾನಿ ಮೌನ ವಹಿಸಿರುವುದು ಯಾಕೆ ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರಶ್ನಿಸಿದರು.
ಹೆಮ್ಮಾಡಿಯಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಆಳುತ್ತಿರುವ ಬಿಜೆಪಿ ಸರಕಾರದ ಒಂದೊಂದೇ ಹಗರಣಗಳು ನೊಂದವರಿಂದ ಕೇಳಿಬರುತ್ತಿದೆ. ಇದಕ್ಕೆ ಪೂರಕವೆಂಬಂತೆ ಶೇ. 40 ಕಮಿಷನ್ ಆರೋಪಿಸಿ, ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಈಗ ಅವರ ಕುಟುಂಬವೇ ಬೀದಿಗೆ ಬರುವಂತಾಗಿದೆ. ಇಂತಹ ಕೆಲಸಕ್ಕೆ ಇಂತಿಷ್ಟು ಎಂಬ ದರಪಟ್ಟಿ ನಿಗದಿಪಡಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಚುನಾವಣೆ ಸಂದರ್ಭ ಕೆಲವರು ಭಾವನಾತ್ಮಕವಾಗಿ ಜನರನ್ನು ಪರಿವರ್ತನೆ ಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದ್ದು, ಜಾತಿಗಳ ಮಧ್ಯೆ ಕಂದಕ ನಿರ್ಮಾಣ ಮಾಡಿ, ಲಾಭ ಪಡೆಯುತ್ತಿದ್ದಾರೆ. ಬಿಜೆಪಿಯವರು ಮಾತ್ರ ದೇಶ ಭಕ್ತರಲ್ಲ. ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬರು ದೇಶಭಕ್ತರು. ಎದೆ ಬಗೆದು ರಾಷ್ಟ್ರಭಕ್ತಿ ಬಗ್ಗೆ ತೋರಿಸಲು ಆಗುವುದಿಲ್ಲ. ಕೋಮು ಭಾವನೆಗೆ ಜನರು ಬೆಲೆ ನೀಡಬಾರದು ಎಂದು ಭಂಡಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.