ಎಂಡಿಆರ್‌ ಮೇಲ್ದರ್ಜೆಯಿಂದ 25 ಮೀ. ಚಟುವಟಿಕೆಗೆ ಅವಕಾಶವಿಲ್ಲದೆ ಸಮಸ್ಯೆ


Team Udayavani, Apr 24, 2022, 9:29 AM IST

meldharje

ಬಂಟ್ವಾಳ: ಗ್ರಾಮೀಣ ಭಾಗಗಳಲ್ಲಿ ರಸ್ತೆಗಳು ಮೇಲ್ದರ್ಜೆ ಗೇರಿದಾಗ ಹಳ್ಳಿ ಅಭಿವೃದ್ಧಿಯಾಗುತ್ತದೆ ಎಂಬುದು ಜನಜನಿತವಾದ ವಿಚಾರ. ಆದರೆ ನರಿಕೊಂಬು ಗ್ರಾ.ಪಂ. ವ್ಯಾಪ್ತಿ ಯಲ್ಲಿ ಗ್ರಾಮದ ಮುಖ್ಯರಸ್ತೆ ಮೇಲ್ದರ್ಜೆಗೇರಿರುವುದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ!

ರಾ.ಹೆ. 75ರ ಪಾಣೆಮಂಗಳೂರು ಶ್ರೀ ಕಲ್ಲುರ್ಟಿ ದೈವಸ್ಥಾನದ ಮುಂಭಾಗದಿಂದ ಶಂಭೂರು ಮೂಲಕ ಸಾಗಿ ಬಾಳ್ತಿಲ ಗ್ರಾಮದ ದಾಸಕೋಡಿಯನ್ನು ಸಂಪರ್ಕಿಸುವ ರಸ್ತೆಯು ಜಿಲ್ಲಾ ಮುಖ್ಯ ರಸ್ತೆ (ಎಂಡಿಆರ್‌) ಯಾಗಿ ಅಭಿವೃದ್ಧಿ ಗೊಂಡಿರುವುದರಿಂದ ರಸ್ತೆಯ ಎರಡೂ ಭಾಗದಲ್ಲಿ ಮಧ್ಯ ಭಾಗದಿಂದ 25 ಮೀ.(ಸುಮಾರು 82 ಅಡಿ) ವರೆಗೆ ಖಾಸಗಿ ಜಾಗದಲ್ಲೂ ಯಾವುದೇ ಚಟುವಟಿಕೆಗೆ ಗ್ರಾ.ಪಂ.ನಿಂದ ಅನುಮತಿ ಇಲ್ಲದೆ ತೊಂದರೆ ಅನುಭವಿಸುವಂತಾಗಿದೆ.

ರಸ್ತೆಯ ಎರಡೂ ಬದಿಗಳಲ್ಲೂ ಸಾಕಷ್ಟು ಖಾಲಿ ಜಾಗಗಳಿದ್ದು, ಈಗಾಗಲೇ ಹಲವು ಮಂದಿ ಚಟುವಟಿಕೆಗಾಗಿ ಗ್ರಾ.ಪಂ.ನ ಅನುಮತಿ ಕೇಳಿದ್ದರೂ, ಅವಕಾಶ ಸಿಕ್ಕಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಮನೆಯೋ ಅಥವಾ ಇನ್ಯಾವುದೋ ಕಟ್ಟಡ ನಿರ್ಮಾಣಕ್ಕಾಗಿ ಸಣ್ಣ ಜಾಗ ಖರೀದಿಸಿದವರಿಗೆ ಧರ್ಮ ಸಂಕಟ ಎದುರಾಗಿದೆ. ಒಂದು ವೇಳೆ ಅನುಮತಿ ಪಡೆಯದೇ ಉದ್ದೇಶಿತ ಯೋಜನೆಗಾಗಿ ಕಟ್ಟಡ ನಿರ್ಮಿಸಿದರೂ, ಅದು ಅಕ್ರಮ ಕಟ್ಟಡ ಎನಿಸಿಕೊಳ್ಳುತ್ತದೆ. ವಿದ್ಯುತ್‌ ಅಥವಾ ಇನ್ಯಾವುದೇ ಸೌಕರ್ಯಕ್ಕೆ ಅರ್ಜಿ ಸಲ್ಲಿಸಿದರೆ ಸಿಗದೇ ತೊಂದರೆ ಅನುಭವಿಸುವ ಸಾಧ್ಯತೆ ಹೆಚ್ಚಿದೆ.

ನಿಯಮ ಸಡಿಲಿಕೆ ಆಗ್ರಹ

ಸುಮಾರು 2 ವರ್ಷಗಳ ಹಿಂದೆಯಷ್ಟೇ ಈ ರಸ್ತೆ ಮೇಲ್ದರ್ಜೆಗೇರಿದೆ. ಅದರ ಹಿಂದೆ ಈಗ ನಿರ್ಬಂಧವಿರುವ ವ್ಯಾಪ್ತಿಯ ಒಳಭಾಗದಲ್ಲಿ ಸಾಕಷ್ಟು ಮನೆ, ವಾಣಿಜ್ಯ ಚಟುವಟಿಕೆಯ ಕಟ್ಟಡಗಳಿವೆ. ಸದ್ಯಕ್ಕೆ ಅವುಗಳಿಗೆ ಯಾವುದೇ ತೊಂದರೆ ಇಲ್ಲದೇ ಇದ್ದರೂ, ಮುಂದೆ ರಸ್ತೆ ವಿಸ್ತರಣೆಗೊಳ್ಳುವ ಸಂದರ್ಭದಲ್ಲಿ ತೊಂದರೆಬಾರದು ಎಂಬುದನ್ನು ಈಗಲೇ ಹೇಳುವಂತಿಲ್ಲ. ನಿಯಮದ ಪ್ರಕಾರ 25 ಮೀ. ಮಾರ್ಜಿನ್‌ ಒಳಭಾಗದಲ್ಲಿ ಇರುವ ಕಟ್ಟಡಗಳ ಅಭಿವೃದ್ಧಿ, ಇತರ ಚಟುವಟಿಕೆಗಳಿಗೆ ಗ್ರಾಮ ಪಂಚಾಯತ್‌ನ ಅನುಮತಿ ಕೇಳಿದರೆ ಸಿಗುವುದು ಕೂಡ ಕಷ್ಟವಾಗುವ ಸಾಧ್ಯತೆ ಇದೆ. ಹೀಗಾಗಿ ನಿಯಮ ಸಡಿಲಿಕೆ ಮಾಡುವಂತೆ ಆಗ್ರಹಗಳು ಕೇಳಿ ಬರುತ್ತಿದೆ. ಆದರೆ ಎಂಡಿಆರ್‌ ರಸ್ತೆಗಳ ನಿಯಮವೇ ಹಾಗೇ ಇರುವುದರಿಂದ ಗ್ರಾಮಸ್ಥರ ಆಗ್ರಹಕ್ಕೆ ಯಾವ ರೀತಿಯ ಸ್ಪಂದನೆ ಸಿಗಬಹುದು ಎನ್ನುವುದನ್ನೂ ಹೇಳುವಂತಿಲ್ಲ.

ನಿಯಮದಲ್ಲಿ ಅವಕಾಶವಿಲ್ಲ

ಪಾಣೆಮಂಗಳೂರು ಗುಡಿಯ ಬಳಿಯಿಂದ ನರಿಕೊಂಬು -ದಾಸ ಕೋಡಿ ರಸ್ತೆಯು ಎಂಡಿಆರ್‌ ರಸ್ತೆಯಾಗಿ ಮೇಲ್ದರ್ಜೆಗೇರಿರುವುದರಿಂದ ಇಲಾಖೆಯ ನಿಯಮ ಪ್ರಕಾರ 25 ಮೀ. ವರೆಗೆ ಖಾಸಗಿ ಜಮೀನು ಇದ್ದರೂ ಯಾವುದೇ ಚಟುವಟಿಕೆ ಗಳನ್ನು ನಡೆಸುವುದಕ್ಕೆ ಅವಕಾಶವಿಲ್ಲ. ಷಣ್ಮುಗಂ, ಎಇಇ, ಲೋಕೋಪಯೋಗಿ ಇಲಾಖೆ, ಬಂಟ್ವಾಳ

ನಿಯಮ ಸಡಿಲಿಕೆ ಆಗಲಿ

ನರಿಕೊಂಬು ಗ್ರಾಮದ ಮೂಲಕ ಹಾದು ಹೋಗಿರುವ ಮುಖ್ಯ ರಸ್ತೆಯ ಮಧ್ಯಭಾಗದಿಂದ ಎರಡೂ ಕಡೆ 25 ಮೀ. ವರೆಗೆ ವಾಣಿಜ್ಯ ಕಟ್ಟಡ, ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ಗ್ರಾ.ಪಂ.ನಲ್ಲಿ ಅವಕಾಶ ಇಲ್ಲದೇ ಇರುವುದರಿಂದ ಗ್ರಾಮಸ್ಥರ ಜತೆಗೆ ಗ್ರಾ.ಪಂ.ನ ಆದಾಯಕ್ಕೂ ತೊಂದರೆಯಾಗಿದೆ. ಹೀಗಾಗಿ ಈ ನಿಯಮ ಸಡಿಲಿಕೆ ಯಾಗಬೇಕು. ವಿನುತಾ ಪುರುಷೋತ್ತಮ, ಅಧ್ಯಕ್ಷರು, ನರಿಕೊಂಬು ಗ್ರಾ.ಪಂ.

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.