ಮೇದಲ್ಲಿ ಸರ್ವಧರ್ಮ ಸಮಾವೇಶ: ಕಮಕನೂರ


Team Udayavani, Apr 24, 2022, 11:24 AM IST

5meeting

ಕಲಬುರಗಿ: ರಾಜ್ಯದ ವಿವಿಧೆಡೆ ಕೋಮು ಸಂಘರ್ಷಗಳು ಹೆಚ್ಚಾಗುತ್ತಿರುವುದರಿಂದ ಸಮಾಜದಲ್ಲಿ ಸೌಹಾರ್ದ ವಾತಾವರಣ ಮೂಡಿಸುವ ಉದ್ದೇಶದಿಂದ ನಗರದಲ್ಲಿ ಮೇ ತಿಂಗಳಲ್ಲಿ ಸರ್ವಧರ್ಮ ಸಮಾವೇಶ ಆಯೋಜಿಸಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜಿ.ಹಳ್ಳಿ, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಹಲವು ಕಡೆ ಬಿಜೆಪಿ ಮುಖಂಡರು ಕೋಮು ಗಲಭೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಆದರೆ, ಜಿಲ್ಲೆಯಲ್ಲಿ ಇದೂವರೆಗೆ ಯಾವತ್ತೂ ಹಿಂದೂ ಮುಸ್ಲಿಮರ ಮಧ್ಯೆ ಸಂಘರ್ಷ ನಡೆದಿಲ್ಲ. ಇಲ್ಲಿಯೂ ದುಷ್ಟಶಕ್ತಿಗಳು ತಲೆಹಾಕುವ ಮುನ್ನವೇ ನಾವು ಸೌಹಾರ್ದ ಸಮಾವೇಶ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಈ ಸಮಾವೇಶವನ್ನು ಕಾಂಗ್ರೆಸ್‌ ಪಕ್ಷ ದಿಂದ ಆಯೋಜಿಸಬೇಕೋ ಅಥವಾ ಎಲ್ಲ ಧರ್ಮಗಳ ಸಂಘಟನೆಗಳನ್ನು ಒಳ ಗೊಂಡು ಆಯೋಜಿಸಬೇಕೋ ಎಂಬ ಬಗ್ಗೆ ಶೀಘ್ರದಲ್ಲೇ ಚರ್ಚಿಸಿ ತೀರ್ಮಾನಿಸಲಾಗುವುದು. ದಿನಾಂಕ ಹಾಗೂ ಸ್ಥಳ ನಿಗದಿ ಮಾಡಲಾಗುವುದು. ರಾಜ್ಯದಲ್ಲಿ ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಳ್ಳದ ಸುಮಾರು 50ಕ್ಕೂ ಹೆಚ್ಚು ಮಠಾಧೀಶರನ್ನು ಇದಕ್ಕೆ ಆಹ್ವಾನಿಸಲಾಗುವುದು. ಶಾಸಕರಾದ ಪ್ರಿಯಾಂಕ್‌ ಖರ್ಗೆ ಹಾಗೂ ಡಾ| ಅಜಯಸಿಂಗ್‌ಗೆ ಉಸ್ತುವಾರಿ ವಹಿಸಲಾಗಿದೆ. ಸಮಾವೇಶವು ಜಿಲ್ಲೆಯಲ್ಲಿಯೇ ಐತಿಹಾಸಿಕ ಗುರುತಾಗಿ ಉಳಿಯುವಂತೆ ಮಾಡಲಾಗುವುದು ಎಂದರು.

ಕೆಪಿಸಿಸಿಗೆ ನನ್ನನ್ನು ಹಾಗೂ ಡಾ| ಶರಣಪ್ರಕಾಶ ಪಾಟೀಲ ಅವರನ್ನು ಉಪಾಧ್ಯಕ್ಷರನ್ನಾಗಿ, ಶರಣಕುಮಾರ ಮೋದಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪಕ್ಷದ ಮುಖಂಡರು ನಮಗೆ ಜವಾಬ್ದಾರಿ ನೀಡಿದ್ದಾರೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿ ಓಡಾಡಿ ಸಂಘಟನೆ ಮಾಡಲಾಗುವುದು. ಪರಿಶಿಷ್ಟರು, ತುಳಿತಕ್ಕೆ ಒಳಗಾದವರು, ನಿಷ್ಠಾವಂತರನ್ನು ಪಕ್ಷಕ್ಕೆ ತೆಗೆದುಕೊಂಡು ಬಲಿಷ್ಠ ಸಂಘಟನೆ ಮಾಡಲಾಗುವುದು. ಸ್ಥಳೀಯವಾಗಿ ಕೆಲವರು ಪಕ್ಷ ಬಿಟ್ಟುಹೋಗಿದ್ದು ಅವರನ್ನು ಪುನಃ ಕರೆತರಲಾಗುವುದು ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣ ಕುಮಾರ ಮೋದಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು ಎಂಬ ಬಗ್ಗೆ ಚರ್ಚಿಸಲು ಏ. 27, 28ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ. ಸಭೆಯಲ್ಲಿ ಪಕ್ಷದ ಉಸ್ತುವಾರಿ ಸುರ್ಜಾವಾಲ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಮುಖಂಡರಾದ ನೀಲಕಂಠರಾವ್‌ ಮೂಲಗೆ, ಭೀಮಣ್ಣ ಸಾಲಿ, ರಮೇಶ ಯರಗೋಳ, ಬಸವರಾಜ ಬೂದಿಹಾಳ, ಶಾಮ ನಾಟಿಕಾರ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.