ಮತ್ತೆ ಹೆಚ್ಚಿದ ಕೋವಿಡ್ ಪ್ರಕರಣಗಳ ಸಂಖ್ಯೆ; 24 ಗಂಟೆಯಲ್ಲಿ 2593 ಹೊಸ ಕೇಸ್ ಪತ್ತೆ
Team Udayavani, Apr 24, 2022, 12:09 PM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚುತ್ತಿದೆ. ದೇಶದಲ್ಲಿ ನಾಲ್ಕನೇ ಅಲೆಯ ಭೀತಿ ಎದುರಾಗಿದ್ದು, ಮತ್ತೆ ದಿನಂಪ್ರತಿ ಕೋವಿಡ್ ಸೋಂಕುಗಳ ಸಂಖ್ಯೆ ಎರಡು ಸಾವಿರ ದಾಟಿದೆ.
ರಾಷ್ಟ್ರೀಯ ಆರೋಗ್ಯ ಇಲಾಖೆ ನೀಡಿದ ವರದಿಯಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2593 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಕಳೆದ ಐದು ದಿನಗಳಿಂದ ಹೊಸ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಎರಡು ಸಾವಿರ ಗಡಿ ದಾಟುತ್ತಿದೆ.
ಕಳೆದ 24 ಗಂಟೆಯ ಅವಧಿಯಲ್ಲಿ ದೇಶದಲ್ಲಿ 44 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 5,22,193ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 15,873 ಸಕ್ರಿಯ ಸೋಂಕು ಪ್ರಕರಣಗಳಿವೆ. ದೇಶದ ದೈನಂದಿನ ಪಾಸಿಟಿವಿಟಿ ದರ ಶೇ. 0.56ರಲ್ಲಿದೆ.
ಇದನ್ನೂ ಓದಿ:ಕಠಿಣ ಕ್ರಮದ ವಿಚಾರದಲ್ಲಿ ಕರ್ನಾಟಕವೇ ಮಾದರಿಯಾಗಲಿದೆ: ಸಿಎಂ ಬಸವರಾಜ ಬೊಮ್ಮಾಯಿ
ಕಳೆದ 24 ಗಂಟೆಗಳಲ್ಲಿ ಒಟ್ಟು 1,755 ಸೋಂಕಿತರು ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,25,19,479 ಕ್ಕೆ ತಲುಪಿದೆ.
ಮೋದಿ ಸಭೆ: ನವದೆಹಲಿ: ದೇಶದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಪ್ರಧಾನಿ ಮೋದಿ ಅವರು, ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಭೆ ನಡೆಯಲಿದ್ದು, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಶನಿವಾರ ದೇಶದಲ್ಲಿ 2,527 ಮಂದಿಗೆ ಸೋಂಕು ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15 ಸಾವಿರಕ್ಕೆ ಏರಿಕೆಯಾಗಿದೆ. ಹೀಗಾಗಿ, ಯಾವ ರೀತಿ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಪ್ರಧಾನಿ ಚರ್ಚಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.