![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 24, 2022, 3:24 PM IST
ಮಸ್ಕಿ: ತಾಲೂಕಿನ ಮುದಬಾಳ ಕ್ರಾಸ್ ನಲ್ಲಿ ಸಾರಿಗೆ ಇಲಾಖೆ ಬಸ್‌ಗಳನ್ನು ನಿಲುಗಡೆ ಮಾಡಬೇಕೆಂದು ಒತ್ತಾಯಿಸಿ ತಹಶೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ರಾಷ್ಟ್ರೀಯ ಹೆದ್ದಾರಿ 150(ಎ) ಜೇವರ್ಗಿ- ಚಾಮರಾಜನಗರ ಮಾರ್ಗದಲ್ಲಿರುವ ತಾಲೂಕಿನ ಮುದಬಾಳ ಕ್ರಾಸ್‌ನಲ್ಲಿ ಪ್ರಯಾಣಿಕರಿಗೆ ಬಸ್ ನಿಲ್ದಾಣವಿದ್ದು, ಕುಡಿವ ನೀರು ಸೇರಿದಂತೆ ಇನ್ನಿತರೆ ಮೂಲ ಸೌಕರ್ಯಗಳಿವೆ. ಆದರೆ ಇಲ್ಲಿ ಸಾರಿಗೆ ಬಸ್‌ಗಳು ನಿಲುಗಡೆ ಆಗದಿರುವುದರಿಂದ 20ಕ್ಕೂ ಹೆಚ್ಚು ಹಳ್ಳಿಗಳ ಪ್ರಯಾಣಿಕರಿಗೆ ತೊಂದರೆಯಾಗಿದೆ. ಮುದಬಾಳ, ಬುದ್ದಿನ್ನಿ ಎಸ್, ಹೂವಿನಭಾವಿ, ಉಸ್ಕಿಹಾಳ, ಕಾಟಗಲ್, ಮಾರಲದಿನ್ನಿ, ಪಾಮನಕೆಲ್ಲೂರು, ಬೆಂಚಮರಡಿ, ಇಲಾಲಪೂರ, ಹರ್ವಾಪೂರು, ತುಪ್ಪದೂರು ಸೇರಿದಂತೆ ಇತರೆ ಹಳ್ಳಿಯಿಂದ ಪ್ರಯಾಣಿಸುವ ಜನರಿಗೆ ಸಮಸ್ಯೆಯಾಗಿದೆ. ಆದ್ದರಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್‌ಗಳನ್ನು ನಿಲುಗಡೆ ಮಾಡಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನಾಗರಡ್ಡೆಪ್ಪ ದೇವರಮನಿ, ಬಸವರಾಜ ಈಳಿಗೇರ, ಗಂಗಪ್ಪ ತೋರಣದಿನ್ನಿ, ಬಸವರಾಜ ದಿನ್ನಿ, ಮರಿಗೌಡ ಉಸ್ಕಿಹಾಳ, ಬಸನಗೌಡ ಹರ್ವಾಪೂರು ಸೇರಿದಂತೆ ಇನ್ನಿತರರಿದ್ದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.