ತಣ್ಣೀರುಬಾವಿ : ಅಪಾಯಕ್ಕೆ ಸಿಲುಕಿದ್ದ ಐವರು ವಿದ್ಯಾರ್ಥಿಗಳನ್ನು ರಕ್ಷಿಸಿದ ಸರ್ಫರ್ ಗಳು
Team Udayavani, Apr 25, 2022, 1:58 AM IST
ಪಣಂಬೂರು : ಮೂಡುಬಿದಿರೆಯ ಕಾಲೇಜೊಂದರ ಐವರು ವಿದ್ಯಾರ್ಥಿಗಳು ತಣ್ಣೀರುಬಾವಿ ಬೀಚ್‌ನಲ್ಲಿ ರವಿವಾರ ಅಪಾಯಕ್ಕೆ ಸಿಲುಕಿದ್ದು, ಸಮೀಪದಲ್ಲೇ ಸರ್ಫಿಂಗ್ ತರಬೇತಿ ನೀಡುತ್ತಿದ್ದ ತೇಜಸ್ ನಾಯ್ಕ ಮತ್ತು ಜತೆಗಾರರು ರಕ್ಷಿಸಿ ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಸಂಭಾವ್ಯ ಭಾರೀ ಅನಾಹುತವೊಂದು ತಪ್ಪಿದೆ.
ರವಿವಾರ ಬೆಳಗ್ಗೆ 8 ಗಂಟೆ ವೇಳೆಗೆ ವಿದ್ಯಾರ್ಥಿಗಳು ಫಾತಿಮಾ ಚರ್ಚ್ ಸಮೀಪ ಕಡಲಲ್ಲಿ ಈಜುತ್ತಿದ್ದರು. ಅಲೆಗಳ ಅಬ್ಬರ ಜೋರಾಗಿದ್ದ ಕಾರಣ ದಡದತ್ತ ಈಜಲು ಸಾಧ್ಯವಾಗದೆ ಅಸಹಾಯಕ ಸ್ಥಿತಿಗೆ ತಲುಪಿದರು. ಆಗ ಸ್ಥಳದಲ್ಲಿದ್ದ ರಾಷ್ಟ್ರೀಯ ಈಜುಪಟುಗಳಾದ ಸಂಕೇತ್ ಬೆಂಗ್ರೆ, ಶಿಲ್ಪಾ ಬೆಂಗ್ರೆ ಧಾವಿಸಿ ಬಂದು ಇಬ್ಬರನ್ನು ರಕ್ಷಿಸಿದರು. ಇತರ ಮೂವರು ಅಪಾಯದಲ್ಲಿದ್ದು ರಕ್ಷಣೆಗೆ ಕೂಗಿಕೊಂಡದ್ದನ್ನು ಗಮನಿಸಿದ ತೇಜಸ್ ಮತ್ತು ಇತರ ಸರ್ಫ್ ತರಬೇತುದಾರರು ಸ್ಥಳಕ್ಕೆ ಧಾವಿಸಿ ಅವರನ್ನು ಸರ್ಫ್ ಬೋರ್ಡ್ ಮೂಲಕ ದಡಕ್ಕೆ ಕರೆತಂದರು ಹಾಗೂ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿ ಕಳಿಸಿಕೊಟ್ಟರು.
ತೇಜಸ್ ಜೀವರಕ್ಷಣೆಯ ತರಬೇತಿ ಪಡೆದವರಾಗಿದ್ದಾರೆ. ಐವರ ಜೀವ ಉಳಿಸಿದ ಈಜುಪಟುಗಳ ಕಾರ್ಯಕ್ಕೆ ಭಾರೀ ಶ್ಲಾಘನೆಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Mangaluru: ಹಂಪನಕಟ್ಟೆ; ಬೇಕರಿ ಕೆಲಸಗಾರ ನಾಪತ್ತೆ
Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.