ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಶ್ರದ್ಧೆ ಪರಿಶ್ರಮ ಅಗತ್ಯ
ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ವಿನಯ್‌ಕುಮಾರ್ ಅಭಿಮತ
Team Udayavani, Apr 25, 2022, 3:56 PM IST
ಶಿವಮೊಗ್ಗ: ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಶ್ರದ್ಧೆ, ಪರಿಶ್ರಮ ಜತೆಯಲ್ಲಿ ಉತ್ತಮ ಸಂವಹನ ಕೌಶಲ್ಯವು ಅತ್ಯಂತ ಮುಖ್ಯ ಎಂದು ಎಚ್‌ಸಿಲ್ ತರಬೇತಿ ವ್ಯವಸ್ಥಾಪಕ ವಿನಯ್‌ಕುಮಾರ್ ಹೇಳಿದರು.
ಶಿವಮೊಗ್ಗ ನಗರದಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಉನ್ನತ ಹುದ್ದೆ ತಲುಪಿದರೂ ಆಯಾ ಕ್ಷೇತ್ರಕ್ಕೆ ಅಗತ್ಯವಿರುವ ಸಂವಹನ ಕೌಶಲ್ಯ ಅಗತ್ಯವಾಗಿ ಬೇಕಾಗಿರುತ್ತದೆ. ಸಂವಹನ ಕೌಶಲ್ಯ ಉತ್ತಮ ಮಾಡಿಕೊಳ್ಳುವುದು ಸಹ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗೆ ಅವಶ್ಯಕ ಎಂದು ತಿಳಿಸಿದರು.
ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಚಿರಂಜೀವಿ ಮಾತನಾಡಿ, ಸ್ಪರ್ಧಾತ್ಮಕ ಅಂಶವನ್ನುಋಣಾತ್ಮಕವಾಗಿ ಪರಿಗಣಿಸಬಾರದು. ನಮ್ಮ ಸಾಮರ್ಥ್ಯದ ಪರಿಗಣನೆಗೆ ನಡೆಯುವ, ಅರ್ಹತೆಯ ಪರೀಕ್ಷೆ ಆಗಿರುತ್ತದೆ. ಧನಾತ್ಮಕವಾಗಿ ಆಲೋಚಿಸುವ, ನಮ್ಮಲ್ಲಿರುವ ಸಾಮಾರ್ಥ್ಯ ತೋರಿಸುವ ಬಗ್ಗೆ ಸದಾ ಆಲೋಚಿಸಬೇಕು ಎಂದು ಹೇಳಿದರು.
ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಹೇಗೆ ನಡೆಸಬೇಕು. ಅಧ್ಯಯನ ಪಠ್ಯ, ಸಮಯದ ನಿರ್ವಹಣೆ ಹೇಗೆ ಮಾಡಬೇಕು ಎಂಬುದರ ಬಗ್ಗೆ ಸರಿಯಾದ ತಿಳವಳಿಕೆ ಮೂಡಿಸಿ ಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಇರುವ ಭಯವನ್ನು ಹೋಗಲಾಡಿಸಬೇಕು. ಸಾಧಕರ ಹಾದಿಯ ಬಗ್ಗೆ ಸರಿಯಾಗಿ ಅರಿತುಕೊಂಡು ಒಳ್ಳೆಯ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಮನ್ವಯ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಅಭ್ಯರ್ಥಿಗಳು ಮನೋಸಾಮಾರ್ಥ್ಯ ವೃದ್ಧಿಸಿಕೊಳ್ಳುವತ್ತ ಗಮನಹರಿಸಬೇಕು. ನಾವು ಸಾ ಧಿಸುವ ಗುರಿಯ ಮಾರ್ಗವನ್ನು ಹಂತ ಹಂತವಾಗಿ ಸಾಗುವ ಬಗ್ಗೆ ಸೂಕ್ತ ಯೋಜನೆ ರೂಪಿಸಿಕೊಳ್ಳಬೇಕು. ಧನಾತ್ಮಕ ಆಲೋಚನೆಗಳೇ ನಮ್ಮ ಶಕ್ತಿ. ಒಳ್ಳೆಯ ಅಲೋಚನೆಗಳನ್ನು ಯೋಜಿಸುತ್ತ ಅನುಷ್ಠಾನಗೊಳಿಸಿ ಯಶಸ್ಸು ಸಾಧಿಸಬೇಕು ಎಂದರು.
ಸಮನ್ವಯ ಟ್ರಸ್ಟ್ ನಿರಂತರವಾಗಿ ಸಮಾಜಮುಖೀ ಮತ್ತು ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಸಮನ್ವಯಟ್ರಸ್ಟ್ ಸ್ಥಾಪಕ ಸದಸ್ಯೆ ಸ್ಮಿತಾ, ಟ್ರಸ್ಟಿ ನಿತ್ಯಾ ಎಚ್.ಆರ್., ಪ್ರಮುಖರಾದ ವಿಜಯಕುಮಾರ್, ವಿಸ್ಮಯ, ಶರತ್, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.