ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ರಾಣಿ ಚೆನ್ನಮ್ಮ ಹೆಸರಿಡಿ: ವಚನಾನಂದ ಶ್ರೀ
ನನ್ನ ಹೆಸರಿಡುವುದು ಬೇಡ ಎಂದಿದ್ದು ಯಡಿಯೂರಪ್ಪ ಅವರ ದೊಡ್ಡ ಗುಣ
Team Udayavani, Apr 25, 2022, 5:28 PM IST
ದಾವಣಗೆರೆ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ರಾಣಿ ಚೆನ್ನಮ್ಮ ಹೆಸರಿಡಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ ರಾಜ್ಯ, ಕೇಂದ್ರ ಸರ್ಕಾರವನ್ನ ಆಗ್ರಹಿಸಿದ್ದಾರೆ.
ಸೋಮವಾರ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, 400 ವರ್ಷಗಳ ಹಿಂದೆಯೇ ಸ್ತ್ರೀಸಶಕ್ತಿಕರಣ, ಸಮಾನತೆಯ ಪ್ರತೀಕವಾದ ಕೆಳದಿ ರಾಣಿ ಚೆನ್ನಮ್ಮ ಅವರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರಿಗೆ ಒತ್ತಾಯಿಸಿದರು.
ಕೆಳದಿ ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿ ಮಹಾರಾಜರ ಪುತ್ರ ರಾಜಾರಾಮ್ಗೆ ಆಶ್ರಯ ನೀಡಿದ್ದಲ್ಲದೆ ಲಕ್ಷ ಸೈನಿಕರ ಹೊಂದಿದ್ದ ಔರಂಗಜೇಬ್ನನ್ನೇ ಸೋಲಿಸಿ, ಅವನ ಮಗನನ್ನ ಸೆರೆಯಾಗಿಟ್ಟುಕೊಂಡವರು. ರಾಜಾರಾಮ್ನ ಪಟ್ಟಾಭಿಷೇಕ ಸಹ ನೆರವೇರಿಸಿದಂತಹ ಮಹಾನ್ ನಾಯಕಿ. ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅವರ ಹೆಸರಿಟ್ಟಲ್ಲಿ ಸಾರ್ಥಕ ಆಗುತ್ತದೆ ಎಂದು ತಿಳಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿ ತಳಮಟ್ಟದಿಂದ ಕಟ್ಟಿದ, ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕಿಟ್ಟಲ್ಲಿ ನಮಗಿಂತಲೂ ಹೆಚ್ಚು ಸಂತೋಷ ಪಡುವಂತಹವರು ಯಾರೂ ಇರುವುದೇ ಇಲ್ಲ.ನಮಗೆ ಹಂಡೆ ಹಾಲು ಕುಡಿದಷ್ಟು ಸಂತೋಷವಾಗುತ್ತದೆ ಎಂದರು.
ಸ್ವತಃ ಯಡಿಯೂರಪ್ಪ ಅವರೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡುವುದು ಬೇಡ. ಅನೇಕ ಮಹಾನ್ ನಾಯಕರು, ಹಿರಿಯರಿದ್ದಾರೆ. ಅವರ ಹೆಸರಿಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿರುವುದು ಅವರ ದೊಡ್ಡ ಗುಣ. ಯಡಿಯೂರಪ್ಪ ಅವರ ಹೆಸರಿಡುವುದು ಆಗದೇ ಇದ್ದಾಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ರಾಣಿ ಚೆನ್ನಮ್ಮ ಹೆಸರಿಡಬೇಕು ಎಂದು ನಮ್ಮ ಅಭಿಲಾಷೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.