ಮನೆ-ನಿವೇಶನ ರಹಿತ ಪ.ಜಾತಿ ಕುಟುಂಬಗಳಿಗೆ ತ್ವರಿತ ನಿವೇಶನ ಹಂಚಿಕೆಗೆ ಕ್ರಮ : ಸಚಿವ ಕೋಟ
Team Udayavani, Apr 25, 2022, 11:22 PM IST
ಬೆಂಗಳೂರು: ರಾಜ್ಯದಲ್ಲಿ ಮನೆ ನಿವೇಶನ ಹೊಂದಿರದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಕುಟುಂಬಗಳ ಪಟ್ಟಿಮಾಡಿ ಅವರಿಗೆ ತ್ವರಿತವಾಗಿ ನಿವೇಶನಗಳನ್ನು ಒದಗಿಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ.
ರಾಜ್ಯಾದ್ಯಂತ ಪರಿಶಿಷ್ಟ ಜಾತಿಯ ಮನೆ ನಿವೇಶನ ರಹಿತ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಕುಟುಂಬಗಳಿಗೆ ಮನೆ ನಿವೇಶನಗಳನ್ನು ನೀಡಬೇಕು. ಆರಂಭಿಕವಾಗಿ ನಾಲ್ಕು ವಿಭಾಗಗಳಲ್ಲಿ ಅತೀ ಹೆಚ್ಚು ಜನಸಂಖ್ಯೆ ಇರುವ ನಾಲ್ಕು ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು ವಿಭಾಗದಲ್ಲಿ ಚಿತ್ರದುರ್ಗ, ಮೈಸೂರು ವಿಭಾಗದಲ್ಲಿ ಚಾಮರಾಜ ನಗರ, ಕಲಬುರಗಿ ವಿಭಾಗದಲ್ಲಿ ರಾಯಚೂರು ಮತ್ತು ಬೆಳಗಾವಿ ವಿಭಾಗದಲ್ಲಿ ಹಾವೇರಿ ಜಿಲ್ಲೆಯಲ್ಲಿ ಇದನ್ನು ಪೈಲಟ್ ಆಗಿ ಅನುಷ್ಠಾನಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಮಾತನಾಡಿ, ರಾಜ್ಯದಲ್ಲಿ ಒಟ್ಟು 5.46 ಲಕ್ಷ ಕುಟುಂಬಗಳು ಮನೆ ನಿವೇಶನ ಹೊಂದಿಲ್ಲ. ಅವರಿಗೆ ಭೂಮಿ ಕೊಡುವುದು ಸರಕಾರದ ಜವಾಬ್ದಾರಿ. ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆದ್ಯತೆಯಲ್ಲಿ ಶೀಘ್ರ ಮನೆ ಒದಗಿಸಲು, ಆಯ್ದ ಜಿಲ್ಲೆಗಳಲ್ಲಿ ಸರಕಾರಿ ಭೂಮಿ ಲಭ್ಯತೆ, ಮನೆ ನಿವೇಶನ ರಹಿತ ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಬಳಿಕ ಪ್ರತೀ ಜಿಲ್ಲೆಗೂ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಇದನ್ನೂ ಓದಿ : ಶ್ರೀಮಂತಿಕೆಯಲ್ಲಿ ಬಫೆಟ್‌ರನ್ನು ಹಿಂದಿಕ್ಕಿದ ಅದಾನಿ : ಜಗತ್ತಿನ 5ನೇ ಸಿರಿವಂತ ವ್ಯಕ್ತಿ
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಲಹೆಗಾರ ನಿವೃತ್ತ ಅಧಿಕಾರಿ ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾ. ಮಣಿವಣ್ಣನ್ ಪಿ., ಆಯುಕ್ತ ರಾಕೇಶ್ ಕುಮಾರ್, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ಬಸವರಾಜ…, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರ ಸಹಿತ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.