ಪ್ರತಿಷ್ಠಿತ ಆಸ್ಪತ್ರೆಗಳ ಹೆಸರಿನ ನಕಲಿ ವೆಬ್‍ಸೈಟ್ ಸೃಷ್ಟಿ: ಕಿಡ್ನಿದಾನಕ್ಕೆ 4 ಕೋಟಿ ಆಮಿಷ
ಸಾರ್ವಜನಿಕರ ಬಳಿ ಹಣ ಸುಲಿಗೆ ಮಾಡುತ್ತಿದ್ದ ವಿದೇಶಿ ಪ್ರಜೆಗಳ ಬಂಧನ
Team Udayavani, Apr 26, 2022, 10:09 AM IST
ಬೆಂಗಳೂರು: ನಗರದ ಕೆಲ ಪ್ರತಿಷ್ಠಿತ ಆಸ್ಪತ್ರೆಗಳ ಹೆಸರಿ ನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ಕಿಡ್ನಿದಾನ ಮಾಡಿದರೆ 4 ಕೋಟಿ ರೂ. ನೀಡುವುದಾಗಿ ಜಾಹೀರಾತು ನೀಡಿ, ಅಮಾಯಕ ಸಾರ್ವಜನಿಕರ ಬಳಿ ಹಣ ಸುಲಿಗೆ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಆಗ್ನೇಯ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಮಿರಾಕಲ್ ಅಲಿಯಾಸ್ ಮಿಮಿ (28), ಸೋವ್ ಕಾಲಿನ್ಸ್ ನಿ (32) ಮತ್ತು ಫಾನಾ ಮೂಲದ ಮ್ಯಾಥ್ಯೂ ಇನೋಸೆಂಟ್ ಅಲಿಯಾಸ್ ಪಾಲ್ (38) ಬಂಧಿತರು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ಗಳು, ಲ್ಯಾಪ್‌ಟಾಪ್ ಹಾಗೂ ಇತರೆ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.
ಮೂವರು ಇತ್ತೀಚೆಗೆ ಜಯನಗರದ ಸಾಗರ್ ಆಸ್ಪತ್ರೆ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಕಿಡ್ನಿ ಕಸಿ ಮಾಡಲಾಗುತ್ತದೆ. ಕಿಡ್ನಿ ದಾನ ಮಾಡುವವರು ಹಾಗೂ ಕಿಡ್ನಿ ಅಗತ್ಯವಿದ್ದವರು ಸಂಪರ್ಕಿಸುವಂತೆ ಜಾಹೀರಾತು ನೀಡಿದ್ದರು. ಅದನ್ನು ಗಮನಿಸಿದ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಮಹೇಂದ್ರ ಕುಮಾರ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು.
ಹತ್ತಕ್ಕೂ ಹೆಚ್ಚು ವೆಬ್‌ಸೈಟ್‌ಗಳು
ನಗರದ ಸಾಗರ್, ಬ್ಯಾಪ್ಟಿಸ್ಟ್, ಕಾವೇರಿ ಆಸ್ಪತ್ರೆ ಸೇರಿ ನಗರದ ಹತ್ತಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಹೆಸರಿನ ನಕಲಿ ವೆಬ್‌ಸೈಟ್ ತೆರೆದಿದ್ದರು. ಕಿಡ್ನಿ ದಾನ ಮಾಡಿದರೆ ಮುಂಗಡ 2 ಕೋಟಿ ಹಾಗೂ ನಂತರ 2 ಕೋಟಿ ಒಟ್ಟು 4 ಕೋಟಿ ಕೊಡುವುದಾಗಿ ಜಾಹೀರಾತು ನೀಡಿದ್ದರು. ಅದಕ್ಕಾಗಿ ತಮ್ಮನ್ನು ಸಂಪರ್ಕಿಸುವಂತೆ ಮೊಬೈಲ್ ನಂಬರ್ ಉಲ್ಲೇಖೀಸಿ, ಜಾಹೀರಾತು ನೀಡಿದ್ದರು.
ಈ ಜಾಹೀರಾತು ನೋಡಿದ ಕೆಲವರು ಹಣದಾಸೆಗೆ ಕಿಡ್ನಿ ಮಾರಾಟ ಮಾಡಲು ಆರೋಪಿಗಳ ಮೊಬೈಲ್‌ಗೆ ಸಂಪರ್ಕಿಸಿದ್ದು, ಈ ವೇಳೆ ನೋಂದಣಿ ಶುಲ್ಕ, ಮೆಡಿಕಲ್ ಶುಲ್ಕ, ವೈದ್ಯರ ಶುಲ್ಕ ಸೇರಿ ವಿವಿಧ ಶುಲ್ಕಗಳ ಹೆಸರಿನಲ್ಲಿ ಆನ್‌ಲೈನ್ ಮೂಲಕ ಲಕ್ಷಾಂತರ ರೂ. ಪಡೆದಿದ್ದಾರೆ. ಅಲ್ಲದೆ, ಮುಂಗಡ 2 ಕೋಟಿ ರೂ. ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗಿದೆ. ಆದರೆ, ಶೇ.30ರಷ್ಟು ಹಣವನ್ನು ನಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಿದ ಬಳಿಕ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಹಣವನ್ನು ಡ್ರಾ ಮಾಡಬಹುದು ಎಂದು ಹೇಳುತ್ತಿದ್ದರು. ಬಳಿಕ ಹಣ ಪಡೆದು ಸಂಪರ್ಕಕ್ಕೆ ಸಿಗದೆ ವಂಚಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಪ್ರಿಯಕರನ ಜತೆ ಸೇರಿ ಪತಿಯ ಕೊಂದ ಪತ್ನಿ
ಈ ಸಂಬಂಧ ಆಗ್ನೇಯ ವಿಭಾಗ ಪೊಲೀಸರು, ವಂಚನೆಗೊಳಗಾದ ಸಾರ್ವಜನಿಕರು ಅಸಲಿ ದಾಖಲೆಗಳ ಸಮೇತ ಠಾಣೆಗೆ ದೂರು ನೀಡಬಹುದು. ಅಲ್ಲದೆ, ವಿದೇಶಿ ಪ್ರಜೆಗಳಿಗೆ ಬಾಡಿಗೆ ಮನೆ ನೀಡುವ ಮೊದಲು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಮೊಬೈಲ್ ಜಾಡು ಹಿಡಿದು ಆರೋಪಿಗಳ ಬಂಧನ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ನಕಲಿ ವೆಬ್‌ಸೈಟ್, ಅದರಲ್ಲಿ ಹಾಕಿದ್ದ ಮೊಬೈಲ್ ಸಂಖ್ಯೆಗಳ ಜಾಡು ಹಿಡಿದು ಸಿಡಿಆರ್ ಮೂಲಕ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿತ್ತು. ಈ ವೇಳೆ ಆರೋಪಿಗಳು ಹೆಗಡೆನಗರ ಹಾಗೂ ಎಚ್‌ಬಿಆರ್ ಲೇಔಟ್‌ನಲ್ಲಿ ಓಡಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ಮೂವರು ಆರೋಪಿಗಳು ವಿದ್ಯಾರ್ಥಿ ವೀಸಾದಡಿ ಬೆಂಗಳೂರಿಗೆ ಬಂದಿದ್ದು, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನಗರದಲ್ಲಿ ವಾಸವಾಗಿದ್ದಾರೆ. ಮೋಜಿನ ಜೀವನಕ್ಕಾಗಿ ಹಣ ಸಂಪಾದಿಸಲು ವಂಚನೆ ಮಾರ್ಗ ಅನುಸರಿಸುತ್ತಿದ್ದರು. ಇದುವರೆಗೂ ಎಷ್ಟು ಮಂದಿಗೆ ವಂಚಿಸಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.