ಡಾ|ಅಂಬೇಡ್ಕರ್ ನಿಗಮದಡಿ ಪಂಪ್‌ಸೆಟ್ ಪರಿಕರ ವಿತರಣೆ
Team Udayavani, Apr 26, 2022, 12:00 PM IST
ಆಳಂದ: ಡಾ| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮಂಡಳಿಯಡಿ ಆಯ್ಕೆಯಾದ 2018-19ರ 31 ಮಂದಿ ಫಲಾನುಭವಿಗಳಿಗೆ ಪಟ್ಟಣದಲ್ಲಿ ಸೋಮವಾರ ಶಾಸಕ ಸುಭಾಷ ಗುತ್ತೇದಾರ ಪಂಪಸೆಟ್ ಸೇರಿದಂತೆ ವಿದ್ಯುತ್ ಪರಿಕರಗಳನ್ನು ವಿತರಿಸಿದರು.
ನಿಗಮದ ತಾಂತ್ರಿಕ ಕಾರಣದಿಂದಾಗಿ ಫಲಾನುಭವಿಗಳಿಗೆ ಸೌಲಭ್ಯ ನೀಡುವಲ್ಲಿ ವಿಳಂಬವಾಗಿದೆ. ಪ್ರಸಕ್ತ ಸಾಲಿನಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯ ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಪರಿಶಿಷ್ಟ ಜನಾಂಗದ ಕೃಷಿ ಉತ್ತೇಜಿಸುವ ಸಲುವಾಗಿ ಸರ್ಕಾರ ನಿಗಮದ ಮೂಲಕ ಕೊಳವೆ ಬಾವಿ ಸೇರಿದಂತೆ ಪಂಪಸೆಟ್ ಸಮೇತ ಸೌಲಭ್ಯಗಳನ್ನು ಒದಗಿಸುತ್ತಿದೆ. ಫಲಾನುಭವಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಡಾ| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸತೀಶ ಬೆಳಾಮಕರ್, ಮಹೇಶ ಗುತ್ತೇದಾರ, ಮುಖಂಡ ಮಲ್ಲಿಕಾರ್ಜುನ ಕಂದಗುಳೆ, ಮಲ್ಲಣ್ಣಾ ನಾಗೂರೆ, ಅಶೋಕ ಗುತ್ತೇದಾರ, ಆನಂದ ಗಾಯಕವಾಡ, ಚನ್ನವೀರ ಕಾಳಕಿಂಗೆ ಮತ್ತಿತರರು ಉಪಸ್ಥಿತರಿದ್ದರು. ಫಲಾನುಭವಿಗಳಿಗೆ ಕೊಳವೆಬಾವಿ, ಪಂಪಸೆಟ್ ವಿದ್ಯುತ್ ಸಂಪರ್ಕ ಸೇರಿದಂತೆ ಒಟ್ಟು 3.50ಲಕ್ಷ ರೂ. ಗಳನ್ನು ತಲಾ 31 ಫಲಾನುಭವಿಗಳಿಗೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.