ಸರ್ಕಾರ ಧರಣಿಗೆ ಸ್ಪಂದಿಸದಿದ್ರೆ ಹೋರಾಟ

ವಾಲ್ಮೀಕಿ ಶ್ರೀಗಳ ಅಹೋರಾತ್ರಿ ಧರಣಿಗೆ ಎಲ್ಲ ಸಮಾಜದವರೂ ಬೆಂಬಲಿಸಲಿ: ಯೋಗಾನಂದ ಶ್ರೀ

Team Udayavani, Apr 26, 2022, 2:08 PM IST

male-bennur

ಮಲೇಬೆನ್ನೂರು: ನಿವೃತ್ತ ನ್ಯಾಯಾಧಿಧೀಶ ನಾಗಮೋಹನದಾಸ್‌ ಆಯೋಗದ ವರದಿ ಅನುಷ್ಠಾನಕ್ಕಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಳೆದ 75 ದಿನಗಳಿಂದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ಅಹೋರಾತ್ರಿ ನಡೆಸುತ್ತಿರುವ ಶಾಂತಿಯುತ ಧರಣಿಗೆ ಎಲ್ಲಾ ಸಮಾಜದವರೂ ಬೆಂಬಲ ವ್ಯಕ್ತಪಡಿಸಬೇಕು ಎಂದು ಯಲವಟ್ಟಿಯ ಶ್ರೀ ಯೋಗಾನಂದ ಸ್ವಾಮೀಜಿ ಹೇಳಿದರು.

ವಾಲ್ಮೀಕಿ ಶ್ರೀಗಳು ನಡೆಸುತ್ತಿರುವ ಧರಣಿ ಬೆಂಬಲಿಸಿ ಪಟ್ಟಣದ ಸ್ವಾಭಿಮಾನಿ ಎಸ್‌ಸಿ-ಎಸ್‌ಟಿ ಸಂಘಟನೆಗಳ ಒಕ್ಕೂಟ ಏರ್ಪಡಿಸಿದ್ದ ಮಲೇಬೆನ್ನೂರಿನಿಂದ ಹರಿಹರದವರೆಗಿನ ಪಾದಯಾತ್ರೆ ಸಂದರ್ಭದಲ್ಲಿ ಶ್ರೀಗಳು ಮಾತನಾಡಿದರು. ಪ್ರಸನ್ನಾನಂದ ಸ್ವಾಮೀಜಿಯವರ ಶಾಂತಿಯುತ ಧರಣಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಸರ್ಕಾರ ಕೂಡಲೇ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಬೃಹತ್‌ ಸಮಾವೇಶ ನಡೆಸಲಾಗುವುದು ಎಂದು ಎಚ್ಚರಿಸಿದರು.

ಹೊಸಳ್ಳಿ ವೇಮನ ಮಠದ ಬಸವಪ್ರಭು ಸ್ವಾಮೀಜಿ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ, ಹಿಂದುಳಿದ ಎಲ್ಲಾ ಸಮಾಜದ ಏಳಿಗೆಗಾಗಿ, ಹಿಂದುಳಿದವರೂ ಇತರರಂತೆ ಸಮಾಜದಲ್ಲಿ ಉನ್ನತ ಹುದ್ದೆ ಪಡೆಯಲಿ ಎಂಬ ಸದುದ್ದೇಶದಿಂದ ವಾಲ್ಮೀಕಿ ಶ್ರೀಗಳು ಧರಣಿ ನಡೆಸುತ್ತಿದ್ದಾರೆ. ಎಲ್ಲಾ ಸಮಾಜದವರು ಅವರಿಗೆ ಬೆಂಬಲ ಸೂಚಿಸಿದಲ್ಲಿ ಅವರಿಗೆ ಮತ್ತಷ್ಟು ಬಲ ತುಂಬಿದಂತಾಗುತ್ತದೆ ಎಂದರು.

ಈಗ ಇರುವ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ನಡೆಸುತ್ತಿರುವ ಧರಣಿ ಐತಿಹಾಸಿಕ ಧರಣಿಯಾಗಿದೆ. ಸರ್ಕಾರ ಮೂಗಿನ ತುದಿಗೆ ತುಪ್ಪ ಸವರುವ ಕೆಲಸ ಮಾಡದೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಂಬಂಧ ಸರ್ಕಾರದ ಗಮನಕ್ಕೆ ತರಬೇಕೆಂದು ಮಾಜಿ ಶಾಸಕ ಬಿ.ಪಿ. ಹರೀಶ್‌ ಅವರಲ್ಲಿ ಮನವಿ ಮಾಡಿದರು.

ಡಾ| ಬಿ.ಆರ್. ಅಂಬೇಡ್ಕರ್‌ ಹಾಗೂ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪಾದಯಾತ್ರೆಗೆ ಚಾಲನ ನೀಡಲಾಯಿತು. ಮಾಜಿ ಶಾಸಕ ಬಿ.ಪಿ. ಹರೀಶ್‌, ಎಪಿಎಂಸಿ ಮಾಜಿ ಅಧ್ಯಕ್ಷ ಮಂಜುನಾಥ ಪಾಟೀಲ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ. ಅಬಿದ್‌ ಅಲಿ, ಜಿ. ಅನಂದ್‌, ಬೆಣ್ಣೆಹಳ್ಳಿ ಹಾಲೇಶಪ್ಪ, ನಂದಿಗಾವಿ ಶ್ರೀನಿವಾಸ್‌, ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ. ಚಿದಾನಂದಪ್ಪ, ಎಸ್‌.ಜಿ. ಪರಮೇಶ್ವರಪ್ಪ, ಬೋವಿ ಕುಮಾರ್‌, ಪಿ.ಎಸ್. ಶಿವಕುಮಾರ್‌, ಎ.ಕೆ. ಲೋಕೇಶ್‌, ಸೋಮಶೇಖರಪ್ಪ, ಬಸವರಾಜ್‌, ಮಂಜು, ಬಸವರಾಜ್‌ ದೊಡ್ಮನಿ, ಕಿರಣ್‌, ಅಶೋಕ್‌, ವೀರಭದ್ರಪ್ಪ, ಮೊದಲಾದವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಪಿಎಸ್‌ಐಗಳಾದ ರವಿಕುಮಾರ್‌, ಶಂಕರ್‌ ಗೌಡ ಹಾಗೂ ಸಿಬ್ಬಂದಿ ಬಂದೋಬಸ್ತ್ ಒದಗಿಸಿದ್ದರು.

ಟಾಪ್ ನ್ಯೂಸ್

Ullal: ಗಾಂಜಾ ಮಾರಾಟ: ಜೋಡಿ ಬಂಧನ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-renuuu

Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

Davanagere: ಬಿಜೆಪಿಯ ಬಾಯಿಚಟದ ಮೂರ್ನಾಲ್ಕು ಜನರ ವಿರುದ್ದ ರೇಣುಕಾಚಾರ್ಯ ಟೀಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Ullal: ಗಾಂಜಾ ಮಾರಾಟ: ಜೋಡಿ ಬಂಧನ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.