ಸಹಕಾರಿಗಳನ್ನು ಉಳಿಸಿ-ಬೆಳೆಸಿ: ಸವದಿ

ರಾಜ್ಯದ 22 ಲಕ್ಷ ಕುಟುಂಬಗಳಿಗೆ ಪತ್ತಿನ ಸಾಲದ ಲಾಭ

Team Udayavani, Apr 26, 2022, 2:19 PM IST

16

ಅಥಣಿ: ರಾಷ್ಟ್ರದಲ್ಲಿ ರೈತರಿಗೆ ಬಡ್ಡಿ ರಹಿತ ಸಾಲ ನೀಡಿದ್ದು ಕರ್ನಾಟಕ ರಾಜ್ಯ. ಅದರಲ್ಲಿ ಅತಿ ಹೆಚ್ಚು ರೈತರಿಗೆ ಸಾಲ ನೀಡುತ್ತಿರುವುದು ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ ಆಗಿದ್ದು, ಸಹಕಾರ ರಂಗದಲ್ಲಿ ಅತಿ ಹೆಚ್ಚು ಸಾಲಮನ್ನಾ ಮಾಡಿಕೊಂಡ ತಾಲೂಕು ಅಥಣಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಹೇಳಿದರು.

ಅವರು ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ಶ್ರೀ ಅರವಟ್ಟಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉದ್ಘಾಟನಾ ಸಮಾರಂಭ ಹಾಗೂ ಸಾಲ ಪತ್ರ, ಮುದ್ದತ ಠೇವು ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಗ್ರಾಮದಲ್ಲಿ ಮೂರು ಸಹಕಾರ ಪತ್ತಿನ ಬ್ಯಾಂಕ್‌ಗಳನ್ನು ಅತ್ಯಂತ ಉತ್ತಮ ರೀತಿಯಿಂದ ಬೆಳೆಸಿದ್ದಾರೆ. ಇದನ್ನು ಉಳಿಸಿಕೊಂಡು ಹೋಗುವುದು ನಿಮ್ಮೆಲ್ಲರ ಹೆಗಲ ಮೇಲಿದೆ ಎಂದು ತಿಳಿಸಿದರು.

ಈಗಾಗಾಲೇ 22 ಲಕ್ಷ ಕುಟುಂಬಗಳು ನಮ್ಮ ರಾಜ್ಯದಲ್ಲಿ ಪತ್ತಿನಿಂದ ಸಾಲವನ್ನು ಪಡೆದಿವೆ. ಪತ್ತಿನಿಂದ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಎಲ್ಲರೂ ಬೆಳೆಯಬೇಕು ಎನ್ನುವ ಉದ್ದೇಶ ನಮ್ಮದಾಗಿದೆ. ಅರ್ಧನಾರೇಶ್ವರ ಹಾಗೂ ವೈದ್ಯನಾಥನ್‌ ವರದಿಗಳು ಸಹಕಾರಿ ರಂಗಕ್ಕೆ ಬಹುಪಯೋಗಿಯಾಗಿವೆ ಎಂದರು.

ಬಿಡಿಸಿಸಿ ಅಧ್ಯಕ್ಷರಾದ ರಮೇಶ ಕತ್ತಿ ಅವರು ರೈತರಿಗೆ ಸಾಲಪತ್ರ ವಿತರಿಸಿ ಮಾತನಾಡಿ, ಸುಮಾರು 8 ಕೋಟಿ 30 ಲಕ್ಷ ರೂ. ಪತ್ತನ್ನು ಶೂನ್ಯ ಬಡ್ಡಿದರದಲ್ಲಿ ಪಡೆದುಕೊಂಡು ಅಭಿವೃದ್ಧಿ ನಾಮವನ್ನು ಜಪಿಸುತ್ತಿರುವ ದರೂರ ಗ್ರಾಮಸ್ಥರ ನಡೆ ಶ್ಲಾಘನೀಯ.

ಅದೇ ರೀತಿ ಶೂನ್ಯ ಬಡ್ಡಿದರ ಸಾಲ ಯೋಜನೆಯಿಂದ ಅಥಣಿ ತಾಲೂಕಿನ ರೈತರಿಗೆ ಹೆಚ್ಚು ಅನುಕೂಲವಾಗಿದೆ. ಮೂರು ಬಾರಿ ಸಾಲಮನ್ನಾ ಆದಾಗ ಅಥಣಿ ತಾಲೂಕಿನ ರೈತರಿಗೆ ಸುಮಾರು 300 ಕೋಟಿ ರೂ. ಅನುಕೂಲವಾಗಿದೆ. ಒಂದೇ ಗ್ರಾಮದಲ್ಲಿ ಮೂರು ಸಹಕಾರಿ ಸಂಘಗಳನ್ನು ಸ್ಥಾಪನೆ ಮಾಡುವ ಮೂಲಕ ರೈತರ ಮತ್ತು ಕಬ್ಬು ಬೆಳೆಗಾರರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಹಾಗೂ ಶ್ರೀ ಅರವಟ್ಟಿಗೆ ಪಿಕೆಪಿಎಸ್‌ ಅಧ್ಯಕ್ಷ ಸುರೇಶ ಮಾಯನ್ನವರ ಮಾತನಾಡಿ, ಸಹಕಾರಿ ಸಂಘವನ್ನು ಕಟ್ಟಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಮಹಿಳೆಯರು ಸ್ವಾವಲಂಬಿ ಜೀವನ ಮಾಡಲು ಪತ್ತಿನ ಸಾಲವನ್ನು ಹೆಚ್ಚಿಸಬೇಕು ಎಂದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀಕಾಂತ್‌ ಅಸ್ಕಿ, ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸಂಜೀವಕುಮಾರ ಅವಕ್ಕನ್ನವರ, ಅರಿಹಂತ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜೈಪಾಲ್‌ ಚೌಗಲಾ, ಸಹಕಾರ ಇಲಾಖೆ ಉಪನಿಬಂಧಕ ಕೆ.ಎಲ್‌ ಶ್ರೀನಿವಾಸ್‌, ಚಿಕ್ಕೋಡಿ ಉಪನಿಬಂಧಕ ಗೌಡಪ್ಪನವರ, ಅಥಣಿ ನಿಯಂತ್ರಣ ಅಧಿಕಾರಿ ಎಸ್‌ ಎಸ್‌ ನಂದೇಶ್ವರ, ಬಾಯಪ್ಪಾ ಹೊಳೆಪ್ಪಗೋಳ, ಆನಂದ ಚೌಗಲಾ, ಆರ್‌ ಎನ್‌ ನೂಲಿ, ಶಬ್ಬೀರ ಮುಜಾವರ, ಸಾಗರ ಖಂಡಾಲ್ಕರ, ಎಮ್‌ ಎ ಮಾಳಿ, ಆರ್‌ ಬಿ ಗಲಗಲಿ, ಫರೀಧ ಅವಟಿ, ಮಹದೇವ ಬಸಗೌಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಶ್ರೀಕಾಂತ್‌ ಅಸ್ಕಿ ಸ್ವಾಗತಿಸಿದರು. ಸಂಗಮೇಶ ಹಚ್ಚಡದ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.