ಎರಡು ತಿಂಗಳಲ್ಲಿ ಕೃಷ್ಣಾ ತಾಂತ್ರಿಕ ಸಮಸ್ಯೆ ನಿವಾರಣೆ, ಅಧಿಸೂಚನೆ ಸಾಧ್ಯತೆ: ಬೊಮ್ಮಾಯಿ


Team Udayavani, Apr 26, 2022, 4:13 PM IST

ಎರಡು ತಿಂಗಳಲ್ಲಿ ಕೃಷ್ಣಾ ತಾಂತ್ರಿಕ ಸಮಸ್ಯೆ ನಿವಾರಣೆ, ಅಧಿಸೂಚನೆ ಸಾಧ್ಯತೆ: ಬೊಮ್ಮಾಯಿ

ವಿಜಯಪುರ: ಕೃಷ್ಣಾ ನ್ಯಾಯಾಧೀಕರಣದ ತೀರ್ಪು ಹೊರಬಿದ್ದು ದಶಕವೇ ಕಳೆದಿದೆ. ಕೇಂದ್ರ ಸರ್ಕಾರ ಬರುವ 2-3 ತಿಂಗಳಲ್ಲಿ ತಾಂತ್ರಿಕ‌ ಸಮಸ್ಯೆ ಬಗೆಹರಿಸಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಅಧಿಸೂಚನೆ ಹೊರಬೀಳುತ್ತಲೇ ಬಜೆಟ್ ನಲ್ಲಿನ  ಘೋಷಿತ ಅನುದಾನದ ಹೊರತಾಗಿ ಕೃಷ್ಣಾ ಯೋಜನೆಗೆ ಅಗತ್ಯದ ಅನುದಾನ ಬಿಡುಗಡೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಮಂಗಳವಾರ ತಾಳಿಕೋಟೆ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆಯ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷ್ಣಾ ನ್ಯಾಯಾಧೀಕರಣ ಅಂತಿಮ ತೀರ್ಪು ಹೊರ ಬಿದ್ದ ಬಳಿಕದ ಕಾನೂನು ಹೋರಾಟದ ತಾಂತ್ರಿಕ ಸಮಸ್ಯೆ ಇದೀಗ ಹಂತ ಹಂತವಾಗಿ ನಿವಾರಣೆಯಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಎರಡು-ಮೂರು ತಿಂಗಳಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧಿಸೂಚನೆ ಹೊರ ಬೀಳುತ್ತಲೇ ಬಜೆಟ್ ನಲ್ಲಿ ನೀರಾವರಿ ಕಾರ್ಯಕ್ಕೆ ಘೋಷಿತ ಅನುದಾನ ಹೊರತಾಗಿ ಕೃಷ್ಷಾ ಮೇಲ್ದಂಡೆ ಯೋಜನೆಗೆ ಅಗತ್ಯ ಇರುವ ಪೂರ್ಣ ಅ‌ನುದಾನ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಆಲಮಟ್ಟಿ ಬಳಿ ಕೃಷ್ಣಾ ನದಗೆ ನಿರ್ಮಿಸಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ 524 ಮೀಟರಗೆ ಗೇಟ್ ಅಳವಡಿಸುವ ಕಾರ್ಯ, ಭೂಸ್ವಾಧೀನವಾದ, ಪರಿಹಾರ ವಿತರಣೆ, ಮುಳುಗಡೆ ಆಗಲಿರುವ 20 ಹಳ್ಳಿಗಳ ಪುನರ್ವಸತಿ ಕಾರ್ಯ ಸೇರಿದಂತೆ ಇಡೀ ಯೋಹನೆಗೆ ಅಗತ್ಯ ಇರುವ ಅನುದಾನ ನೀಡುವುದಾಗಿ ಘೋಷಿಸಿದರು. ರಾಜ್ಯದ ಪಾಲಿನ 130 ಟಿಎಂಸಿ ಅಡಿ ನೀರು ಬಳಸಿಕೊಂಡು ರಾಜ್ಯದ ಅನ್ನದಾತರ ಜಮೀನಿಗೆ ನೀರು ಹರಿಸಿ ಭೂದೇವಿಗೆ ಹಸಿರು ಹೊದಿಸುವ ಕಾರ್ಯ ಮಾಡುವಲ್ಲಿ ನಮ್ಮ ಸರ್ಕಾರ ಬದ್ಧತೆ ತೋರಲಿದೆ ಎಂದರು.

ಇದನ್ನೂ ಓದಿ:ಹಿಜಾಬ್ ತೀರ್ಪಿನ ವಿರುದ್ಧದ ಮೇಲ್ಮನವಿ ಶೀಘ್ರ ವಿಚಾರಣೆ ನಡೆಸಲು ಸುಪ್ರೀಂ ಸಮ್ಮತಿ

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನದ ವಿಷಯದಲ್ಲಿ ಅಖಂಡ ವಿಜಯಪುರ ಜಿಲ್ಲೆಯ ಜನರ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಈ ನೆಲದ ಹಿಂದಿನವರು ತಮ್ಮ ಭವಿಷ್ಯವನ್ನೇ ತ್ಯಾಗ ಮಾಡಿದ್ದರಿಂದ ರಾಜ್ಯ ನಂದನವನವಾಗಿದೆ. ಹೀಗಾಗಿ ಈ ನೆಲದ ಜನತೆಯ ತ್ಯಾಗ ಸದಾ ಸ್ಮರಣೀಯ ಎಂದರು.

ಆದರೆ ವಿಜಯಪುರ ಜಿಲ್ಲೆ ನೀರಾವರಿ ಸೌಲಭ್ಯದಿಂದ ವಂಚಿತವಾಗಿದ್ದು, ಬರದ ನಾಡು ಎಂಬ ಅಪಕೀರ್ತಿಯ ಹಣೆಪಟ್ಟಿ ಕಟ್ಟಿಕೊಂಡಿದೆ. ಈ ಅಪಕೀರ್ತಿ ತೊಡೆದು ಹಾಕಿ, ಬರದ ನಾಡಿಗೆ ಜಲದ ನಾಡು ಎಂಬ ಅಭಿದಾನ ತಂದುಕೊಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲು ಬದ್ಧತೆ ತೋರುತ್ತೇನೆ ಎಂದರು.

ರಾಜ್ಯದಲ್ಲೇ ಕೆರೆಗೆ ತುಂಬುವ ಯೋಜನೆ ಅನುಷ್ಠಾನವನ್ನು 110 ಕೋಟಿ ರೂ. ಅನುದಾನ ನೀಡಿ, ವಿಜಯಪುರ ಜಿಲ್ಲೆಯಿಂದ ಯೋಜನೆ ಆರಂಭಿಸಿದ್ದು ನಾನು. ಆದರೆ ನೀರಾವರಿ ವಿಷಯದಲ್ಲಿ ಕೆಲವರು ಭಗೀರಥ ಎಂದು ಕರೆದುಕೊಳ್ಳುತ್ತಾರೆ. ಯಾರು ಬೇಕಾದರೂ ತಮ್ಮನ್ನು ಭಗೀರಥ ಎಂದು ಕರೆದುಕೊಳ್ಳಲಿ, ನನಗೆ ಭಗೀರಥ ಎಂದು ಕರೆಯುವುದು ಬೇಡ. ನಾಡಿನ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿದ ಸಂತೃಪ್ತಿ ನನಗಿದೆ ಎಂದರು.

ಟಾಪ್ ನ್ಯೂಸ್

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

3

Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.