ಆರ್‌.ಡಿ.ಪಾಟೀಲ್‌ಗೆ ಠಾಣೆಯಲ್ಲಿ ರಾಜಾತಿಥ್ಯ

ಸೆಲ್‌ನಲ್ಲಿ ಕುರ್ಚಿ ಹಾಕಿ ಕೂಡಿಸಿದ ಅಧಿಕಾರಿಗಳು

Team Udayavani, Apr 26, 2022, 5:00 PM IST

24

ಕಲಬುರಗಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ಪ್ರಮುಖ ರೂವಾರಿ ಆರ್‌.ಡಿ.ಪಾಟೀಲ್‌ಗೆ ಪೊಲೀಸ್‌ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ!

ಸಿಐಡಿ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದಲ್ಲದೇ, ನನ್ನನ್ನು ಟಚ್‌ ಮಾಡಿದ್ದರೆ ಬಿಡುವುದಿಲ್ಲ ಎಂದು ಆವಾಜ್‌ ಹಾಕಿದ್ದ ಆರ್‌.ಡಿ.ಪಾಟೀಲ್‌ನನ್ನು ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದರು. ನ್ಯಾಯಾಲಯ ಹೆಚ್ಚಿನ ವಿಚಾರಣೆಗೆ 13 ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಿದ್ದರಿಂದ ಎಂ.ಬಿ.ನಗರ ಠಾಣೆಯಲ್ಲಿ ಸೆಲ್‌ನಲ್ಲಿ ಇಡಲಾಗಿತ್ತು. ಸೆಲ್‌ನಲ್ಲಿ ಆರ್‌.ಡಿ.ಪಾಟೀಲ್‌ಗೆ ಕುರ್ಚಿ ಹಾಕಿ ಕೂಡಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಅದೇ ಸೆಲ್‌ನಲ್ಲಿ ಇನ್ನೋರ್ವ ಆರೋಪಿ ಮಲ್ಲುಗೌಡ ಕೈ ಕಟ್ಟಿ ನಿಂತು ಆರ್‌.ಡಿ.ಪಾಟೀಲ್‌ ಜತೆ ಚರ್ಚೆಗೆ ಅವಕಾಶ ನೀಡಲಾಗಿದೆ! ಕಾನೂನು ಎಲ್ಲರಿಗೂ ಒಂದೇ. ಆದರೆ ಆರ್‌.ಡಿ.ಪಾಟೀಲ್‌ಗೆ ಮಾತ್ರ ರಾಜಾತಿಥ್ಯ ನೀಡುತ್ತಿರುವುದು ಇಲಾಖೆಯನ್ನೇ ಪ್ರಶ್ನಿಸುವಂತಾಗಿದೆ.

ಮೂರು ತಿಂಗಳ ಹಿಂದೆಯೇ ಬುಲಾವ್‌: ಹಲವು ಪರೀಕ್ಷೆಯಲ್ಲಿ ಅಕ್ರಮ ಎಸಗುವುದನ್ನೇ ತನ್ನ ದಂಧೆ ಮಾಡಿಕೊಂಡಿದ್ದ ಆರ್‌.ಡಿ.ಪಾಟೀಲ್‌ ಹಾಗೂ ನೀರಾವರಿ ಇಲಾಖೆ ಕಿರಿಯ ಎಂಜಿನಿಯರ್‌ ಮಂಜುನಾಥ ಮೇಳಕುಂದಿಗೆ ಬೆಂಗಳೂರಿನ ಅಧಿಕಾರಿಗಳು ಮೂರು ತಿಂಗಳ ಹಿಂದೆ ಕರೆಯಿಸಿ ವಿಚಾರಣೆ ಮಾಡಿ ಕಳುಹಿಸಿದ್ದರು. ಅದೇ ರೀತಿ ಪ್ರಕರಣವೊಂದರಲ್ಲಿ ಕ್ಲೀನ್‌ಚಿಟ್‌ ನೀಡಲು ಪೊಲೀಸ್‌ ಅಧಿಕಾರಿಗಳಿಗೆ ಕೋಟಿಗಟ್ಟಲೇ ಹಣ ನೀಡಿದ್ದಾನೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಎಂತಹ ಪ್ರಕರಣದಲ್ಲಿಯಾದರೂ ತನ್ನನ್ನು ಸಿಕ್ಕಿಸಲಿ, ಹೇಗೆ ಹೊರಗೆ ಬರೋದು ನನಗೆ ಗೊತ್ತಿದೆ ಎಂದು ಆರ್‌.ಡಿ.ಪಾಟೀಲ್‌ ಆಪ್ತರಲ್ಲಿ ಗರ್ವದಿಂದ ಹೇಳಿಕೊಳ್ಳುತ್ತಿದ್ದ ಎನ್ನಲಾಗಿದೆ.

ಬಗೆದಷ್ಟು ಅಕ್ರಮ: ಪ್ರಜಾಪ್ರಭುತ್ವದ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಮಟ್ಟಿಗೆ ವ್ಯಾಪಕವಾಗಿರುವ ಅಕ್ರಮ ಬಗೆದಷ್ಟು ವಿಸ್ತಾರಗೊಳ್ಳುತ್ತಿದೆ. ಪಿಎಸ್‌ಐ ಅಲ್ಲದೇ ಲೋಕೋಪಯೋಗಿ, ಜಲಸಂಪನ್ಮೂಲ, ಎಸ್‌ಡಿಎ, ಎಸ್‌ ಡಿಸಿ, ಪ್ರಾಧ್ಯಾಪಕ ಹುದ್ದೆ, ಅಬಕಾರಿ ನಿರೀಕ್ಷರು, ಸಹಕಾರ ಇಲಾಖೆ ಹುದ್ದೆಗಳು ಸೇರಿ ಇತರ ಹಲವಾರು ಇಲಾಖೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ವ್ಯವಸ್ಥಿತವಾಗಿ ಅಕ್ರಮ ನಡೆದಿದೆ. ಈ ಮೂಲಕ ಸಾವಿರಾರು ಹುದ್ದೆಗಳ ನೇಮಕಾತಿ ಮಾಡುವಂತೆ ನೋಡಿಕೊಂಡಿರುವ ಕೂಟದಲ್ಲಿ ಕಿಂಗ್‌ಪಿನ್‌ಗಳಲ್ಲದೇ ಕೆಲವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ ಎನ್ನುವುದು ದಿಗ್ಭ್ರಮೆ ಮೂಡಿಸಿದೆ.

ಸಿಎಂ ಹೇಳಿಕೆಗೆ ಆಕ್ರೋಶ: ಪ್ರಕರಣದಲ್ಲಿ ಯಾರೇ ಇರಲಿ ಅವರನ್ನು ರಕ್ಷಿಸುವುದಿಲ್ಲ, ದಿವ್ಯಾ ಹಾಗರಗಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪದೇ ಪದೇ ಹೇಳುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ತಮ್ಮದೇ ಪಕ್ಷದ ನಾಯಕಿ ಜಾಮೀನು ಕೋರುವ ಅರ್ಜಿಗೆ ಸಹಿ ಹಾಕುತ್ತಾರೆಂದ ಮೇಲೂ ಬಂಧನ ಮಾಡದಿರುವುದು ಅನುಮಾನ ಮೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಬಿಐಗೆ ಹೆಚ್ಚಿದ ಒತ್ತಡ: ಪಿಎಸ್‌ಐ ಸೇರಿದಂತೆ ವಿವಿಧ ಪರೀಕ್ಷೆ ಅಕ್ರಮಗಳ ತನಿಖೆ ಸಿಬಿಐಗೆ ವಹಿಸುವಂತೆ ಒತ್ತಡ ಹೆಚ್ಚಾಗುತ್ತಿದೆ. ಬ್ಲೂಟೂತ್‌ ಬಳಸಿ ಡಿವೈಸ್‌ ಮೂಲಕ ಪ್ರಶ್ನೆಗಳಿಗೆ ಉತ್ತರವನ್ನು ನೆರೆಯ ರಾಜ್ಯಗಳ ಅಜ್ಞಾತ ಸ್ಥಳದಲ್ಲಿದ್ದು ಹೇಳುತ್ತಿದ್ದುದರಿಂದ ಜತೆಗೆ ಐಪಿಎಸ್‌ನಂತಹ ಹಿರಿಯ ಅಧಿಕಾರಿಗಳು ಅಕ್ರಮದಲ್ಲಿ ಪಾಲ್ಗೊಂಡಿದ್ದರಿಂದ ಎಲ್ಲರ ಮುಖವಾಡ ಕಳಚಲು ಸಿಬಿಐ ತನಿಖೆಯೊಂದೇ ಪರಿಹಾರವೆಂದು ನೊಂದ ಅಭ್ಯರ್ಥಿಗಳು ಆಗ್ರಹಿಸುತ್ತಿದ್ದಾರೆ. ಈ ಹಿಂದೆ ಯಾವೊಂದು ತನಿಖೆಯೂ ತಾರ್ಕಿಕ ಅಂತ್ಯ ಕಂಡಿಲ್ಲ. ಹೀಗಾಗಿ ಇದು ಕೂಡ ಹಳ್ಳ ಹಿಡಿಯುವ ಸಾಧ್ಯತೆ ಇದೆ. ಸಮಗ್ರ ತನಿಖೆ ನಡೆಸಿ ಪ್ರಕರಣದಲ್ಲಿ ಭಾಗಿಯಾದ ಪ್ರಭಾವಿಗಳನ್ನು ಕಂಬಿ ಹಿಂದೆ ಹಾಕುವಂತೆ ಆಗ್ರಹಿಸಿದ್ದಾರೆ.

  –ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.