2 ತಿಂಗಳಲ್ಲಿ ಕಾಮಗಾರಿ ಮುಗಿಸದಿದ್ದರೆ ಜೈಲಿಗೆ ಕಳುಹಿಸಲಾಗುವುದು: ಬೈರತಿ ಬಸವರಾಜ
Team Udayavani, Apr 27, 2022, 11:50 AM IST
ರೋಣ: ಮುಂದಿನ ಎರಡು ತಿಂಗಳ ಅವಧಿಯಲ್ಲಿ ಜಿಗಳೂರ ಕೆರೆಯ ಕಾಮಗಾರಿ ಮುಗಿಸದಿದ್ದರೆ, ಸಂಬಂಧಿಸಿದ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಿ ಜೈಲಿಗೆ ಕಳುಹಿಸಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆಯ ಸಚಿವ ಬೈರತಿ ಬಸವರಾಜ ಎಚ್ಚರಿಕೆ ನೀಡಿದರು.
ತಾಲೂಕಿನ ಜಿಗಳೂರ ಕೆರೆಯ ಕಾಮಗಾರಿ ವೀಕ್ಷಿಸಿ ಮಾತನಾಡಿ, ಮುಂದಿನ ಎರಡು ತಿಂಗಳೊಳಗೆ ಕಾಮಗಾರಿ ಮುಗಿಸಬೇಕು. ಈ ಭಾಗದ ಜನರಿಗೆ ಕುಡಿಯುವ ನೀರನ್ನು ಕೊಡುವ ಬದ್ದತೆ ನಮಗಿದೆ. ಆದ್ದರಿಂದ ಅಧಿಕಾರಿಗಳು ಕಾರ್ಯಪ್ರವೃತರಾಗಿ ಕೆಲಸ ಮಾಡಬೇಕು. ಮಳೆಗಾಲ ಪ್ರಾರಂಭವಾದರೆ ಇಲ್ಲಿ ಕಪ್ಪು ಮಣ್ಣು ಇರುವುದರಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಹೆಚ್ಚಿನ ಪ್ರಮಾಣದಲ್ಲಿ ಕಾರ್ಮಿಕರನ್ನು, ಯಂತ್ರಗಳನ್ನು ಬಳಕೆ ಮಾಡಿಕೊಂಡು ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕು. ಇಲ್ಲವಾದರೆ ಗುತ್ತಿಗೆದಾರರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದರು.
ಇದನ್ನೂ ಓದಿ:ವಿಟ್ಲ: ಪಿಕಪ್ ವಾಹನದಲ್ಲಿ ದನ ಸಾಗಾಟ ಪತ್ತೆ
ಈ ಸಂದರ್ಭದಲ್ಲಿ ರೋಣ ಶಾಸಕ ಕಳಕಪ್ಪ ಬಂಡಿ, ಯೋಜನೆಯ ವ್ಯವಸ್ಥಾಪಕ ಕೆ.ಪಿ.ಮೋಹನರಾಜ್, ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು, ಚೀಫ್ ಇಂಜಿನಿಯರ್ ಶ್ರೀ ಕೇಶವ, ಕಾರ್ಯಪಾಲಕ ಜೆ.ಎಚ್.ಕೆಂಗಾಳಿ, ಸಹಾಯಕ ಕಾರ್ಯಪಾಲಕ ಜಗದೀಶ ಹೊಸಮನಿ, ಸಹಾಯಕ ಅಭಿಯಂತರ ಕರಿಸಿದ್ದಪ್ಪ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.