ಹೊರಗುತ್ತಿಗೆ ಸಿಬ್ಬಂದಿಗೆ ಸೌಲಭ್ಯ ಒದಗಿಸಿ

ಪ್ರತಿ ತಿಂಗಳು 7ನೇ ತಾರೀಖೀನೊಳಗೆ ಸಂಬಳ ನೀಡಿ

Team Udayavani, Apr 27, 2022, 12:18 PM IST

13

ಕೊಪ್ಪಳ: ಎಲ್ಲಾ ಇಲಾಖೆ ಅಧಿಕಾರಿಗಳು ಹೊರಗುತ್ತಿಗೆ ಸಿಬ್ಬಂದಿಗಳಿಗೆ ಕಾರ್ಮಿಕ ಕಾಯ್ದೆ ಅನ್ವಯ ಸರ್ಕಾರ ನಿಗದಿಪಡಿಸಿದ ಕನಿಷ್ಟ ವೇತನ, ಇಎಸ್‌ಐ ಮತ್ತು ಪಿಎಫ್‌ ಸೌಲಭ್ಯಗಳನ್ನು ಒದಗಿಸಬೇಕೆಂದು ಎಡಿಸಿ ಎಂ.ಪಿ. ಮಾರುತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯಿಂದ ನಡೆದ ಹೊರಗುತ್ತಿಗೆ ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ಇಎಸ್‌ಐ ಮತ್ತು ಪಿಎಫ್‌ ಸೌಲಭ್ಯ ಒದಗಿಸುವ ಕುರಿತು ಚರ್ಚಿಸಲು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ರದ್ದತಿ) ಕಾಯ್ದೆ 1970 ಮತ್ತು ಕರ್ನಾಟಕ ನಿಯಮಗಳು 1971ರಂತೆ ಎಲ್ಲ ಗುತ್ತಿಗೆದಾರರು ಸೌಲಭ್ಯ ನೀಡಬೇಕು. ಇಲಾಖೆ ಮುಖ್ಯಸ್ಥರು ಗುತ್ತಿಗೆದಾರರು ನೀಡುವ ವೇತನದ ಕುರಿತು, ಇತರೆ ಸೌಲಭ್ಯ ಒದಗಿಸಿದ ಕುರಿತು ಸಂಪೂರ್ಣ ಮಾಹಿತಿ ಪಡೆದು ನ್ಯೂನ್ಯತೆಗಳು ಕಂಡುಬಂದರೆ ಸೂಕ್ತ ಸೂಚನೆ ನೀಡಿ ಹೊರಗುತ್ತಿಗೆ ಸಿಬ್ಬಂದಿಗೆ ಸರಿಯಾಗಿ ವೇತನ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುವಂತೆ ನೋಡಿಕೊಳ್ಳಬೇಕು ಎಂದರು.

ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಿ.ಜಿ. ನಾಗೇಶ ಮಾತನಾಡಿ, ಪ್ರತಿಯೊಂದು ಸಂಸ್ಥೆಯು 20ಕ್ಕಿಂತ ಹೆಚ್ಚು ಕಾರ್ಮಿಕರನ್ನು, ನೌಕರರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡರೆ ಅಂತಹ ಸಂಸ್ಥೆಗಳನ್ನು ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ರದ್ದತಿ) ಕಾಯ್ದೆ 1970ರಡಿ ಮೂಲ ಮಾಲೀಕರು ನೋಂದಣಿ ಹಾಗೂ ಗುತ್ತಿಗೆದಾರರು ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಿಂದ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಮೂಲ ಮಾಲೀಕರು ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡ ನಂತರ ನೋಂದಣಿ, ತಿದ್ದುಪಡಿ ಮಾಡಿಸಿಕೊಳ್ಳಬೇಕು. ಆಯ್ಕೆಯಾದ ಗುತ್ತಿಗೆದಾರರು ಕಡ್ಡಾಯವಾಗಿ ಕಾರ್ಯವ್ಯಾಪ್ತಿಯ ಸಹಾಯಕ ಕಾರ್ಮಿಕ ಆಯುಕ್ತರು, ಕಲಬುರಗಿ ವಿಭಾಗ, ಕಲಬುರಗಿ ಅವರಲ್ಲಿ ಪರವಾನಗಿ ಪಡೆದುಕೊಳ್ಳಲು ಸೂಚಿಸಿ ಪರವಾನಗಿ ಪ್ರತಿ ಪಡೆದುಕೊಳ್ಳಬೇಕು. ತಪ್ಪಿದರೆ ಇದು ಮೂಲ ಮಾಲೀಕರು, ಗುತ್ತಿಗೆದಾರರ ವಿರುದ್ಧ ಕಾಯ್ದೆಯ ಅನುಸಾರ ಕೇಸ್‌ ದಾಖಲಿಸಲು ಅವಕಾಶವಿದೆ ಎಂದರು.

ಎಲ್ಲ ಮೂಲ ಮಾಲೀಕರು, ಗುತ್ತಿಗೆದಾರರು ರಾಜ್ಯ ಸರಕಾರ ನೀಡಿರುವ ಅಧಿಸೂಚನೆಯ ಅನುಸೂಚಿತ ಉದ್ದಿಮೆಗೆ ಸಂಬಂಧಿಸಿದಂತೆ ಮತ್ತು ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಕಾರ್ಮಿಕರಿಗೆ ನೀಡಬೇಕಾದ ಕನಿಷ್ಟ ವೇತನದ ಅಧಿಸೂಚನೆಗಳಂತೆ ಕನಿಷ್ಟ ವೇತನದ ದರಗಳಲ್ಲಿ ವೇತನ ಪಾವತಿಸಬೇಕು. ಮೂಲ ಮಾಲೀಕರು ತಮ್ಮ ಕಾರ್ಮಿಕರಿಗೆ, ನೌಕರರಿಗೆ ಗುತ್ತಿಗೆದಾರರು ಪಾವತಿಸಿರುವ ವೇತನ ಕನಿಷ್ಟ ವೇತನದ ದರಕ್ಕಿಂತ ಕಡಿಮೆ ಇಲ್ಲದಂತೆ ಪಾವತಿಸಿರುತ್ತಾರೆಯೇ ಎಂದು ದಾಖಲೆಗಳ ಮೂಲಕ ಖಚಿತ ಪಡಿಸಿಕೊಳ್ಳಬೇಕು.

ಅಂತಹ ದಾಖಲೆ ಇಟ್ಟುಕೊಳ್ಳಬೇಕು. ಪ್ರತಿ ವರ್ಷ ಏಪ್ರಿಲ್‌ನಿಂದ ಸರಕಾರ ಹೆಚ್ಚುವರಿ ಮಾಡುವ ತುಟ್ಟಿ ಭತ್ಯೆಯನ್ನು ಅದೇ ಮಾಹೆಯಿಂದ ಅನ್ವಯವಾಗುವಂತೆ ಪಾವತಿಸಬೇಕು. ತಪ್ಪಿದರೆ ಇದು ವ್ಯತ್ಯಾಸದ ಮೊತ್ತಕ್ಕೆ ಕ್ಲೈಮ್‌ ಅರ್ಜಿಯನ್ನು ದಾಖಲಿಸಲು ಅವಕಾಶ ಮಾಡಿಕೊಡುತ್ತದೆ ಎಂದರು.

ರಾಜ್ಯ ಗುತ್ತಿಗೆ ಕಾರ್ಮಿಕರ ಸಲಹಾ ಮಂಡಳಿ ಸದಸ್ಯ ಪಂಪಾಪತಿ ರಾಟೆ ಮಾತನಾಡಿ, ಗುತ್ತಿಗೆ ಕಾರ್ಮಿಕರ ಮೂಲ ಮಾಲೀಕರು ಕಾರ್ಮಿಕರ ವೇತನವನ್ನು ಬಿಲ್‌ ಮೂಲಕ ಜಮೆಗೊಳಿಸಿದರೂ ಗುತ್ತಿಗೆದಾರರು ಕಾರ್ಮಿಕರ ಖಾತೆಗಳಿಗೆ ಜಮೆ ಮಾಡದೇ ಇರುವುದನ್ನು ಮೂಲ ಮಾಲೀಕರಾದ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ| ಅವಿನಾಶ್‌ ನಾಯಕ್‌, ಜಿಲ್ಲಾ ಕಾರ್ಮಿಕ ಅಧಿಕಾರಿ ವೀಣಾ ಮಾಸ್ತಿ, ಕಾರ್ಮಿಕ ನಿರೀಕ್ಷಕರಾದ ಶಿವಶಂಕರ ತಳವಾರ್‌, ಗೋಪಾಲ್‌ ಧೂಪದ್‌, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗ, ಗುತ್ತಿಗೆದಾರರು ಉಪಸ್ಥಿತರಿದ್ದರು.

ವೇತನವನ್ನು ಪ್ರತಿ ತಿಂಗಳು 7ನೇ ತಾರೀಖೀನೊಳಗೆ ಗುತ್ತಿಗೆ ಕಾರ್ಮಿಕರ, ನೌಕರರ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆ ಮಾಡಬೇಕು. ಅವರವರ ಬ್ಯಾಂಕ್‌ ಖಾತೆಗೆ ಜಮೆ ಮಾಡಿದ್ದಾರೆಯೇ ಎಂದು ಖಚಿತ ಪಡಿಸಿ, ದಾಖಲೆ ನಿರ್ವಹಿಸಬೇಕು. ಕ್ಯಾಂಟೀನ್‌, ರೆಸ್ಟ್‌ರೂಮ್‌, ಕುಡಿಯುವ ನೀರು, ಪ್ರಥಮ ವೈದ್ಯಕೀಯ ಚಿಕಿತ್ಸೆ, ಶೌಚಾಲಯ ಕಾರ್ಮಿಕರಿಗೆ ಗುತ್ತಿಗೆದಾರರು ಒದಗಿಸಬೇಕು. ಮೂಲ ಮಾಲೀಕರು ಮತ್ತು ಗುತ್ತಿಗೆದಾರರು ಕಾಯ್ದೆಯಡಿ ಅಗತ್ಯ ರಿಜಿಸ್ಟರ್‌ ಮತ್ತು ದಾಖಲೆಗಳನ್ನು ನಿರ್ವಹಿಸಬೇಕು. ಕಾಲಕಾಲಕ್ಕೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಗುತ್ತಿಗೆದಾರರು ವರದಿಗಳನ್ನು ನಿಗದಿತ ಸಮಯದಲ್ಲಿ ಸಲ್ಲಿಸಬೇಕು.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.