ಮುನ್ಸೂಚನೆ ನೀಡಿ ಹೆಚ್ಚಿನ ಹಾನಿ ತಪ್ಪಿಸಿ: ಡಿಸಿ
ಜಿಲ್ಲಾ ವಿಪತ್ತು ನಿರ್ವಹಣ ಸಮಿತಿ ಸಭೆ
Team Udayavani, Apr 27, 2022, 12:49 PM IST
ಉಡುಪಿ: ಮಳೆಯಿಂದಾಗುವ ಅತಿವೃಷ್ಟಿ ಸೇರಿದಂತೆ ನೈಸರ್ಗಿಕ ಪ್ರಾಕೃತಿಕ ವಿಕೋಪಗಳು ಉಂಟಾಗುವ ಮುನ್ಸೂಚನೆ ಗಳನ್ನು ಜನರಿಗೆ ಮುಂಚಿತವಾಗಿಯೇ ತಿಳಿಸಿ ಅವುಗಳನ್ನು ಎದುರಿಸುವ ಬಗ್ಗೆ ಅರಿವು ಮೂಡಿಸಿ, ಹಾನಿ ಉಂಟಾಗದಂತೆ ಮುಂಜಾಗ್ರತ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಹಾಲ್ನಲ್ಲಿ ಸೋಮವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನರಿಗೆ ವಿಕೋಪಗಳನ್ನು ಎದುರಿಸುವ ಹಾಗೂ ಸುರಕ್ಷಿತವಾಗಿರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಜೀವ, ಆಸ್ತಿ ಹಾಗೂ ಮಾನವ ಸಂಕಷ್ಟವನ್ನು ಕಡಿಮೆಗೊಳಿಸಬೇಕು ಎಂದರು.
ಎಪ್ರಿಲ್, ಮೇ, ಜೂನ್ ತಿಂಗಳಲ್ಲಿ ಜೋರಾದ ಗಾಳಿ, ಮಳೆಯಿಂದ ಸಾಮಾನ್ಯವಾಗಿ ಮಧ್ಯಾಹ್ನದ ಅನಂತರ ಗುಡುಗು-ಸಿಡಿಲು ಹೆಚ್ಚು ಇದ್ದು, ಗ್ರಾಮಾಂತರ ಪ್ರದೇಶಗಳ ಬಯಲು ಪ್ರದೇಶಗಳಲ್ಲಿ, ಎತ್ತರದ ಮರ ಗಿಡಗಳಿಗೆ ಹೊಡೆಯುತ್ತದೆ. ಪ್ರಸ್ತುತ ಸಾಲಿನಲ್ಲಿ ಸಿಡಿಲು ಹೆಚ್ಚುವ ಸಾಧ್ಯತೆ ಇವೆ. ಈ ಬಗ್ಗೆ ಅಗತ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಒಳಿತು ಎಂದರು.
ಆ್ಯಪ್ ಸದುಪಯೋಗಿಸಿ
ಸರಕಾರ ಗುಡುಗು ಸಿಡಿಲಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸಲು ಸಿಡಿಲು ಆ್ಯಪ್ ಅಭಿವೃದ್ಧಿ ಪಡಿಸುವುದರೊಂದಿಗೆ ಸ್ಥಳೀಯ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಆಗುವ ಬಗ್ಗೆ ನಿಖರ ಮಾಹಿತಿಯನ್ನು ಒದಗಿಸುತ್ತಿದೆ. ಇದರ ಸದುಪಯೋಗಪಡಿಸಿಕೊಳ್ಳುವುದರೊಂದಿಗೆ ರಕ್ಷಣೆ ಪಡೆಯಬೇಕು ಎಂದರು.
ಅರಿವು ಮೂಡಿಸಿ
ಶಾಲೆಯ ಪ್ರಾರಂಭದ ದಿನಗಳಲ್ಲಿಯೇ ಪ್ರಕೃತಿ ವಿಕೋಪ ಸಂದರ್ಭದಲ್ಲಿ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಅವುಗಳನ್ನು ತಮ್ಮ ನೆರೆ ಹೊರೆ ಹಾಗೂ ಕುಟುಂಬದವರೊಂದಿಗೆ ಹಂಚಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸೂಕ್ತ ತರಬೇತಿ
ಆರೋಗ್ಯ ಇಲಾಖೆಯವರು ಪ್ರಕೃತಿ ವಿಕೋಪದಿಂದ ತೊಂದರೆಗೊಳಗಾದವರಿಗೆ ಪ್ರಥಮ ಚಿಕಿತ್ಸೆ ನೀಡುವ ಕುರಿತು ಪ್ರಾಯೋಗಿಕ ತರಬೇತಿಗಳನ್ನು ಸಂಘ-ಸಂಸ್ಥೆಯವರಿಗೆ, ಆಶಾ ಕಾರ್ಯಕರ್ತೆಯರಿಗೆ ನೀಡಿ ಅವರ ಮೂಲಕ ಇತರ ಸಾರ್ವಜನಿಕರಿಗೆ ತಲುಪಿಸುವ ಕೆಲಸವಾಗಬೇಕು. ಇವುಗಳಿಂದ ತೊಂದರೆ ಉಂಟಾದವರಿಗೆ ಚಿಕಿತ್ಸೆ ನೀಡಲು ಎಲ್ಲ ರೀತಿಯ ಔಷಧಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು. ಘಟನೆ ಸಂಭವಿಸಿದರೆ ತತ್ಕ್ಷಣ ಸಮೀಪದ 108 ಗೆ ಮಾಹಿತಿ ನೀಡುವುದು ಉತ್ತಮ ಎಂದರು.
ಮೆಸ್ಕಾಂ, ಅರಣ್ಯ ಇಲಾಖೆಗೆ ಸೂಚನೆ
ಮೆಸ್ಕಾಂ ಇಲಾಖೆಯವರು ಜೋರಾದ ಮಳೆ, ಗಾಳಿ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದರ ಜತೆಗೆ ಯಾವುದೇ ರೀತಿಯ ವಿದ್ಯುತ್ ಅವಘಡಗಳು ಆಗದಂತೆ ಎಚ್ಚರವಹಿಸಬೇಕು. ರಸ್ತೆ ಬದಿಯಲ್ಲಿ ಅಸುರಕ್ಷಿತ ಮರಗಳಿದ್ದಲ್ಲಿ ಅವುಗಳನ್ನು ತೆರವುಗೊಳಿಸುವ ಕಾರ್ಯ ಶೀಘ್ರದಲ್ಲಿ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಂದಾಪುರ ಡಿಎಫ್ಒ ಆಶೀಶ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ವೀಣಾ, ಉಪವಿಭಾಗಾಧಿಕಾರಿ ರಾಜು, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.