ವಿಟ್ಲ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಲಕ್ನೋ ಮೂಲದ ಕಾರ್ಮಿಕ ಸಾವು
Team Udayavani, Apr 27, 2022, 2:27 PM IST
ವಿಟ್ಲ : ವಿಟ್ಲದ ಸಭಾಭವನವೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಕ್ಕೆ ಬಿದ್ದು ಲಕ್ನೋ ಮೂಲದ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ.
ವಿಟ್ಲ ಶೋಕಮಾತೆ ಇಗರ್ಜಿಯ ಅಧೀನಕ್ಕೊಳಪಟ್ಟ ಸಭಾಭವನದ ಕೆಲಸ ಮಾಡುತ್ತಿದ್ದ ಲಕ್ನೋ ಪಿಪ್ರಾ ಗೂಮ್ ಮೂಲದ ಕಾರ್ಮಿಕ ಜಯ ಪ್ರಕಾಶ್(25) ಮೃತಪಟ್ಟ ಕಾರ್ಮಿಕ.
ಎ.26ರಂದು ಸಂಜೆ ಈ ದುರ್ಘಟನೆ ಸಂಭವಿಸಿತ್ತು. ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಯ ಪ್ರಕಾಶ್ ಅಸುನೀಗಿದ್ದಾರೆ.
ಅಂತ್ಯಸಂಸ್ಕಾರಕ್ಕಾಗಿ ಶವವನ್ನು ಸ್ವಗ್ರಾಮಕ್ಕೆ ಕಳುಹಿಸಲು ಪ್ರಯತ್ನ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಇದನ್ನೂ ಓದಿ : ಕರಾಚಿ ಸ್ಫೋಟ: ದಾಳಿ ನಡೆಸಿದ ಆತ್ಮಾಹುತಿ ಬಾಂಬರ್ ಸ್ಕೂಲ್ ಟೀಚರ್, ಯಾರೀಕೆ?
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.