ಅನಾವಶ್ಯಕ ನಿರ್ಬಂಧ ಹೇರದಂತೆ ಪ್ರಧಾನಿ ಸೂಚಿಸಿದ್ದಾರೆ : ಸಿಎಂ ಬೊಮ್ಮಾಯಿ
ಪೆಟ್ರೋಲ್, ಡೀಸೆಲ್ ಸೆಸ್ ಇಳಿಕೆ ಬಗ್ಗೆ ರಾಜ್ಯದ ಉದಾಹರಣೆ ಕೊಟ್ಟರು
Team Udayavani, Apr 27, 2022, 3:19 PM IST
ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಅನಾವಶ್ಯಕ ನಿರ್ಬಂಧ ಹೇರದಂತೆ ಪ್ರಧಾನಿ ಸೂಚಿಸಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವಿಡಿಯೋ ಸಂವಾದದ ನಂತರ ಹೇಳಿಕೆ ನೀಡಿದ ಸಿಎಂ, ‘ಪ್ರಧಾನಿಗಳು ಸುದೀರ್ಘವಾದ ವರದಿ ತೆಗೆದುಕೊಂಡರು. ಕೆಲವು ನಿರ್ದೇಶನ ಕೊಟ್ಟರು.ನಾವು ರಾಜ್ಯದ ಸ್ಥಿತಿ ಬಗ್ಗೆ ಹೇಳಿದ್ದೇವೆ. ಏಪ್ರಿಲ್ 9 ರ ಬಳಿಕ ಬೆಂಗಳೂರಿನಲ್ಲಿ ಕೋವಿಡ್ ಹೆಚ್ಚಳವಾಗುತ್ತಿದೆ. ಟೆಸ್ಟಿಂಗ್ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದೇವೆ’ ಎಂದರು.
‘ಸರ್ಕಾರಿ 50 ಸಾವಿರ ಬೆಡ್, ಖಾಸಗಿ 1 ಲಕ್ಷ ಬೆಡ್, ಆಸ್ಪತ್ರೆ ವ್ಯವಸ್ಥೆ ಬಗ್ಗೆ ಹೇಳಿದ್ದೇವೆ. ಬೆಂಗಳೂರಿಗೆ ಹೆಚ್ಚಿನ ಗಮನ, ಹೆಚ್ಚಿನ ಟೆಸ್ಟಿಂಗ್ ಮಾಡಲಾಗುತ್ತದೆ’ ಎಂದು ಸಿಎಂ ತಿಳಿಸಿದರು.
’15-18 ವರ್ಷದ ಮಕ್ಕಳ ಲಸಿಕೆ ಚುರುಕಿಗೆ ಸೂಚಿಸಿದ್ದಾರೆ. ನಾವು ಸನ್ನದ್ಧರಾಗಿದ್ದೇವೆ ಅಂತ ಹೇಳಿದ್ದೇವೆ. 6-12 ವರ್ಷದ ಮಕ್ಕಳಿಗೆ ಶಾಲೆಯಲ್ಲಿ ಲಸಿಕೆಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ ಈಗ 6-12, 12-18 ನೇ ವಯಸ್ಸಿನ ಮಕ್ಕಳಿಗೆ ಲಸಿಕೆ ಅಭಿಯಾನಕ್ಕೆ ವೇಗ ಕೊಡಲು ನಿರ್ಧಾರ ಮಾಡಲಾಗಿದೆ.ಲಸಿಕೆ ಅಭಿಯಾನ ಉತ್ತಮವಾಗಿ ಮಾಡಿದ್ದರಿಂದ ಮೂರನೇ ಅಲೆ ಸಮರ್ಥವಾಗಿ ಎದುರಿಸಿದ್ದೇವೆ’ ಅಂದರು.
ಇದನ್ನೂ ಓದಿ : ಇಂಧನದ ಮೇಲಿನ ವ್ಯಾಟ್ ಕಡಿಮೆ ಮಾಡಿ: ವಿಪಕ್ಷಗಳ ಸಿಎಂಗಳಿಗೆ ಪ್ರಧಾನಿ ಚಾಟಿ
‘ಪ್ರಧಾನಿ ಪೆಟ್ರೋಲ್, ಡೀಸೆಲ್ ಸೆಸ್ ಇಳಿಕೆ ಬಗ್ಗೆ ರಾಜ್ಯದ ಉದಾಹರಣೆ ಕೊಟ್ಟರು.ಮತ್ತೆ ಸೆಸ್ ಇಳಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿ , ಈಗ ನಮ್ಮ ರಾಜ್ಯದ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಮುಂದುವರೆಯುತ್ತೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.