ಒಂಟಿ ಸಲಗ ದಾಂಧಲೆ: ಅಪಾರ ನಷ್ಟ

Team Udayavani, Apr 27, 2022, 3:29 PM IST

ಒಂಟಿ ಸಲಗ ದಾಂಧಲೆ: ಅಪಾರ ನಷ್ಟ

ಚನ್ನಪಟ್ಟಣ: ಪಟ್ಟಣದ ಹೊರವಲಯದಲ್ಲಿರುವ ಅಗ್ನಿಶಾಮಕ ಠಾಣೆ ಆವರಣಕ್ಕೆ ಸೋಮವಾರ ರಾತ್ರಿ ಒಂಟಿ ಸಲಗ ನುಗ್ಗಿ ದಾಂಧಲೆ ನಡೆಸಿದ್ದು, ಸಿಕ್ಕಸಿಕ್ಕ ಕಡೆ ಓಡಾಡಿ, ಸಿಬ್ಬಂದಿಯನ್ನು ಭಯ ಭೀತರನ್ನಾಗಿಸಿದೆ.

ಮಧ್ಯರಾತ್ರಿ ಸುಮಾರು 1 ಗಂಟೆಯಲ್ಲಿ ಆವರಣದೊಳಗೆ ಪವೇಶಿಸಿದ ಆನೆ, 3 ತೆಂಗಿನ ಮರ, ಹಲಸಿನ ಮರವನ್ನು ನಾಶಮಾಡಿದೆ. ಠಾಣೆಯ ಪಂಪ್‌ಹೌಸ್‌ಗೆ ಸಂಪರ್ಕ ಕಲ್ಪಿಸಿದ್ದ ವೈರಿಂಗ್‌ ಕಿತ್ತುಹಾಕಿದೆ. ಆವರಣದಲ್ಲಿದ್ದ ಸಿಬ್ಬಂದಿ ಬೈಕ್‌ ಜಖಂಗೊಳಿಸಿದೆ.  ಆನೆಯ ಆಟಾಟೋಪ ನೋಡಿ ಸಿಬ್ಬಂದಿ ಕಂಗಾಲಾಗಿದ್ದಾರೆ.

ಎಚ್ಚೆತ್ತುಕೊಂಡ ಸಿಬ್ಬಂದಿ: ಠಾಣೆಯ ಸುತ್ತಲೂ ಇರುವ ಕಾಂಪೌಂಡ್‌ ಗೋಡೆ ಒಂದು ಭಾಗ ಕುಸಿದು 10 ವರ್ಷ ಕಳೆದರೂ, ಹೊಸದಾಗಿ ಕಾಂಪೌಂಡ್‌ ನಿರ್ಮಿಸದ ಕಾರಣ ಆನೆ ಸರಾಗ ವಾಗಿ ಆವರಣಕ್ಕೆ ಬಂದಿದೆ. ಚಿಕ್ಕ ಮಣ್ಣು ಗುಡ್ಡೆ ಅರಣ್ಯ ಪ್ರದೇಶದಿಂದ ಆನೆ ಆಗಮಿಸಿರ ಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಅಗ್ನಿಶಾಮಕ ಠಾಣೆ ಹೊಂದಿ ಕೊಂಡಿದ್ದು, ಆನೆ ಹೆದ್ದಾರಿ ಕಡೆಗೆ ಆಗಮಿಸಿದ್ದರೆ ಇನ್ನಷ್ಟು ಅನಾಹುತ ಗಳು ಸಂಭ ವಿಸುತ್ತಿತ್ತು. ಹಾಗೆಯೇ ಠಾಣೆ ಪಕ್ಕದಲ್ಲೇ ಪೊಲೀಸ್‌ ತರಬೇತಿ ಶಾಲೆ ಸಹ ಇದ್ದು, ತರಬೇತಿ ಶಾಲೆ ಮೂಲಕವೇ ಅಗ್ನಿಶಾಮಕ ಠಾಣೆ ಕಡೆಗೆ ಆನೆ ಆಗಮಿಸಿದೆ. ಆದರೆ, ವಸತಿಗೃಹಗಳ ಕಡೆಗೆ ಆನೆ ಹೋಗದಿರು ವುದು ಆಗಬಹುದಾದ ಅನಾಹುತ ತಪ್ಪಿದೆ.

ಕೂಡಲೇ ಸಿಬ್ಬಂದಿ ಎಚ್ಚೆತ್ತುಕೊಂಡ ಪರಿ ಣಾಮ ಗದ್ದಲಕ್ಕೆ ಆನೆ ವಾಪಸ್‌ ಕಾಡಿನತ್ತ ಹೆಜ್ಜೆ ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೈತರ ಬೆಳೆ ನಾಶ: ತಾಲೂಕಿನ ಸಿದ್ದೇಗೌಡನ ದೊಡ್ಡಿ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿ, ರೈತರ ಬೆಳೆ ನಾಶ ಮಾಡಿವೆ. ರೈತರ ತೆಂಗು, ಜೋಳ, ಮಾವು ಹಾಗೂ ಸಪೋಟ ಬೆಳೆಯನ್ನು ಆನೆಗಳು ಹಾನಿಮಾಡಿವೆ. ಮಾವು ಫಸಲಿನ ಸಮಯದಲ್ಲಿ ದಾಳಿಯಿಂದಾಗಿ ರೈತರು ನಷ್ಟ ಅನುಭವಿಸುವಂತಾಗಿದೆ. ಇನ್ನು ಪ್ರಮುಖವಾಗಿ ಬೇಬಿಕಾರ್ನ್ ಬೆಳೆಯನ್ನು ಆನೆಗಳು ತುಳಿದುಹಾಕಿವೆ.

ಅರಣ್ಯ ಇಲಾಖೆ ಆನೆಗಳ ದಾಳಿಯಿಂದ ಹಾನಿಯಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಹಾಗೆಯೇ ಆನೆಗಳು ಮರಳಿ ಬಾರದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

missing

ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.