ಅದ್ದೂರಿ ಬಸವ ಜಯಂತಿ ಆಚರಣೆ: ಜಿಲ್ಲಾಧಿಕಾರಿ
Team Udayavani, Apr 27, 2022, 5:29 PM IST
ಬಸವನಬಾಗೇವಾಡಿ: ರಾಜ್ಯಸರ್ಕಾರ ಈಗಾಗಲೇ ಶರಣರು ಜನ್ಮವೆತ್ತಿದ ಸ್ಥಳಗಳಲ್ಲಿ ಅದ್ಧೂರಿಯಾಗಿ ಜಯಂತ್ಯುತ್ಸವ ಆಚರಿಸಲು ನಿರ್ಧರಿಸಿದ್ದು ಅದೇ ರೀತಿ ಬಸವ ಜನ್ಮಸ್ಥಳವಾದ ಬಸವನಬಾಗೇವಾಡಿಯಲ್ಲಿ ಬಸವ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಮಂಗಳವಾರ ಸಂಜೆ ಪಟ್ಟಣದಲ್ಲಿ ಬಸವಜನ್ಮ ಸ್ಮಾರಕ ನೂತವಾಗಿ ನಿರ್ಮಾಣವಾಗುತ್ತಿರುವ ಮೆಗಾ ಮಾರುಕಟ್ಟೆ, ಪುರಸಭೆ ಕಾರ್ಯಾಲಯದ ಕಟ್ಟಡ ವೀಕ್ಷಿಸಿ ಅವರು ಮಾತನಾಡಿದರು.
ಶರಣರು ಜನ್ಮ ತಾಳಿದ ಸ್ಥಳಗಳಲ್ಲಿ ಜಯಂತಿಗಳನ್ನು ಆಚರಿಸಬೇಕೆಂದು ಸರ್ಕಾರ ಆದೇಶಿಸಿದೆ. ಈ ನಿಟ್ಟಿನಲ್ಲಿ ಬಸವ ಜಯಂತಿ ಕಾರ್ಯಕ್ರಮವನ್ನು ರಾಜ್ಯಮಟ್ಟದ ರೀತಿಯಲ್ಲಿ ಒಂದು ದಿನ ಆದ್ಧೂರಿಯಾಗಿ ಆಚರಿಸಲು ಏ. 27ರಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಬಸವ ಜಯಂತಿ ಆಚರಣೆ ಕುರಿತು ಚರ್ಚಿಸಿ ಆಚರಣೆ ಮಾಡಲು ನಿರ್ಧರಿಸಲಾಗುವುದು ಎಂದು ಹೇಳಿದರು.
ಬಸವ ಜಯಂತ್ಯುತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಬರುವ ನಿರೀಕ್ಷೆ ಇದೆ. ಪುರಸಭೆ ಕಾರ್ಯಾಲಯ ವಿಶಾಲವಾದ ಜಾಗೆಯಲ್ಲಿ ನಿರ್ಮಾಣಗೊಂಡಿರುವುದು. ಸಂತಸದ ವಿಷಯ ಸರಕಾರಿ ಕಟ್ಟಡಗಳು ಶೀಘ್ರದಲ್ಲಿ ಉದ್ಘಾಟಿಸಲು ಈಗಾಗಲೇ ಅನುಮೋದನೆಗೆ ಕಳುಹಿಸಲಾಗಿದೆ ಎಂದರು.
ಉಪ ವಿಭಾಗಗಾಧಿಕಾರಿ ಬಲರಾಮ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಡಿ.ನಾಗರಾಜ, ತಹಶೀಲ್ದಾರ್ ವಿಜಯಕುಮಾರ ಕಡಕೋಳ, ಕೆಪಿಸಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರವಿ ರಾಠೊಡ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ ಹಾರಿವಾಳ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ಅಭಿಯಂತರ ಮಹಾದೇವ ಜಂಬಗಿ, ಆರೋಗ್ಯ ನಿರೀಕ್ಷಕರಾದ ಸಿದ್ಧಾರ್ಥ ಕಳ್ಳಿಮನಿ, ಮಹೇಶ ಹಿರೇಮಠ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.