ಬಿಜೆಪಿಯವರು ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ: ಸಿದ್ದರಾಮಯ್ಯ
ಕಳ್ಳರ ಜೊತೆ ಶಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ
Team Udayavani, Apr 29, 2022, 9:44 AM IST
ಬೆಂಗಳೂರು: ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಷೆ, ಪ್ರದೇಶಗಳು ನಮ್ಮ ನೀತಿ-ನಿಲುವು. “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ” ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು. ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ ಮಾತೃಭಾಷೆಯೂ ಹೌದು, ಪರಿಸರದ ಭಾಷೆ ಕೂಡಾ. ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯ ಭಾಷೆಯೂ ನಮ್ಮ ರಾಷ್ಟ್ರಭಾಷೆ. ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಗೆ ನೀಡಿದ ನಾಯಕತ್ವ ಸೂತ್ರದಲ್ಲಿ ರಾಹುಲ್-ಪ್ರಿಯಾಂಕಾ ಹೆಸರಿಲ್ಲ:ಪ್ರಶಾಂತ್ ಕಿಶೋರ್
ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ ಎಂದರು.
ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಿ ಎಂದು ಹೇಳಿದರು.
ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಎಂದೆಂದಿಗೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಶಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ, ಅಪ್ಪಿಕೊಂಡ ಪಕ್ಷ. ಒಂದು ಧರ್ಮ, ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ. ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ. ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ ಎಂದರು.
ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ ಯಶಸ್ಸು ಕಾಣುವುದನ್ನು ಸಹಿಸದ ಹಿಂದಿ ನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.