ಅಕ್ರಮ ಮರಳು ದಂಧೆ ವಿರುದ್ಧ ಸಚಿವರ ಸಿಡಿಮಿಡಿ
Team Udayavani, Apr 29, 2022, 12:49 PM IST
ರಾಯಚೂರು: ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಮರಳು ಅಕ್ರಮ ಸಾಗಣೆ ದಂಧೆ ತಡೆಯುವಲ್ಲಿ ವಿಫಲವಾದ ಜಿಲ್ಲಾಡಳಿತದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಆಚಾರ ಹಾಲಪ್ಪ ಸಿಡಿಮಿಡಿಗೊಂಡರು.
ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಶಾಸಕ ಬಸನಗೌಡ ದದ್ದಲ್ ಮಾತನಾಡಿ, ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಬಂದು ಹಲವು ವರ್ಷಗಳೇ ಕಳೆದಿವೆ. ಆದರೆ ಇಂದಿಗೂ ಜಿಲ್ಲೆಯಲ್ಲಿ ಅನುಷ್ಠಾನನಗೊಳಿಸಿಲ್ಲ. ಈ ಬಗ್ಗೆ ಸಚಿವರು ಗಮನ ಹರಿಸುವಂತೆ ತಾಕೀತು ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ತಡೆಗೆ ಚೆಕ್‌ಪೋಸ್ಟ್‌ಗಳನ್ನು ಬಿಗಿಗೊಳಿಸಿ ವಿಶೇಷ ನಿಗಾ ವಹಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ವಿವಿಧೆಡೆ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿದ್ದು, ಮರಳು ಅಕ್ರಮ ದಂಧೆ ತಡೆಯಿರಿ. ಈ ಬಗ್ಗೆ ತೀವ್ರ ನಿಗಾವಹಿಸಿ ಟಾಸ್ಕ್ಫೋರ್ಸ್ ಸಮಿತಿ ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕು. ಮರಳು ಸಾಗಣೆಯಿಂದ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ ರಾಜಧನ ಸರಿಯಾಗಿ ಪಾವತಿ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಎಸ್‌ಪಿ ನಿಖೀಲ್ ಮಾತನಾಡಿ, ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅನುಮತಿ ಇಲ್ಲದೆ ಮರಳು ಸಾಗಿಸಿದ ನೋಂದಣಿ ಸಂಖ್ಯೆ ಇಲ್ಲದ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗುತ್ತಿದೆ ಎಂದರು.
ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಲಭ್ಯಗಳಿಲ್ಲ. ಅಂಥ ಕಡೆ ಕೂಡಲೇ ಸೌಲಭ್ಯ ಕಲ್ಪಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ನೀರು ಪೂರೈಸುತ್ತಿಲ್ಲ ಎನ್ನುವ ದೂರು ಬರಬಾರದು. ಅಪೌಷ್ಟಿಕ ಮಕ್ಕಳ ಬಗ್ಗೆ ವಿಶೇಷ ಗಮನ ನೀಡಬೇಕು. ಅದರಂತೆ ಗರ್ಭಿಣಿ, ಬಾಣಂತಿಯರ ಅಪೌಷ್ಟಿಕತೆ ನಿವಾರಣೆಗೂ ಆದ್ಯತೆ ನೀಡಬೇಕು ಎಂದರು.
ಶಾಸಕ ಡಾ| ಎಸ್.ಶಿವರಾಜ ಪಾಟೀಲ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಡಾ| ರೇಜು, ಮಹಿಳಾ ಆಯೋಗದ ಅಧ್ಯಕ್ಷೆ ಡಾ| ಜಯಲಕ್ಷ್ಮೀ, ಎಡಿಸಿ ಡಾ| ಕೆ.ಆರ್.ದುರುಗೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.