3 ತಿಂಗಳ ಗರ್ಭಿಣಿಗೆ ಬಲವಂತದಿಂದ ಟಾಯ್ಲೆಟ್ ಕ್ಲೀನರ್ ಕುಡಿಸಿದ ಪತಿ, ಪತ್ನಿ ಸಾವು
ಆಕೆಯನ್ನು ನಿಜಾಮಾಬಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿ ಹೇಳಿದೆ.
Team Udayavani, Apr 29, 2022, 3:33 PM IST
ತೆಲಂಗಾಣ: ಗರ್ಭಿಣಿ ಪತ್ನಿಗೆ ಪತಿ ಬಲವಂತವಾಗಿ ಟಾಯ್ಲೆಟ್ ಸ್ವಚ್ಛಗೊಳಿಸುವ ಲಿಕ್ವಿಡ್ ಅನ್ನು ಕುಡಿಸಿದ ಪರಿಣಾಮ ಆಕೆ ಸಾವನ್ನಪ್ಪಿರುವ ಘಟನೆ ಬುಧವಾರ (ಏಪ್ರಿಲ್ 27) ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಮಣಿಪಾಲ: ಉದಯವಾಣಿ ಕಚೇರಿಯಲ್ಲಿ ಹಿರಿಯ ನಟಿ ಹರಿಣಿಯವರಿಗೆ ಅಭಿನಂದನೆ
ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ನಾಲ್ಕು ವರ್ಷದ ಹಿಂದೆ ತರುಣ್ ಎಂಬಾತ ಕಲ್ಯಾಣಿಯನ್ನು ವಿವಾಹವಾಗಿದ್ದ. ಮೂರು ತಿಂಗಳ ಹಿಂದೆ ಕಲ್ಯಾಣಿ ಗರ್ಭಿಣಿಯಾಗಿದ್ದು, ಬಳಿಕ ಪತಿ ತರುಣ್, ಆಕೆ ಸುಂದರವಾಗಿ ಕಾಣುತ್ತಿಲ್ಲ ಎಂದು ಆರೋಪಿಸಿ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲ ಹೆಚ್ಚುವರಿ ವರದಕ್ಷಿಣೆ ತರುವಂತೆ ಒತ್ತಡ ಹೇರುತ್ತಿದ್ದ ಎಂದು ವಾರ್ನಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಇಬ್ಬರ ನಡುವಿನ ಜಗಳ ತಾರಕಕ್ಕೇರಿದ್ದು, ಈ ಸಂದರ್ಭದಲ್ಲಿ ತರುಣ್ ಪತ್ನಿ ಕಲ್ಯಾಣಿಗೆ ಬಲವಂತದಿಂದ ಟಾಯ್ಲೆಟ್ ಕ್ಲೀನಿಂಗ್ ಲಿಕ್ವಿಡಿ ಕುಡಿಸಿಬಿಟ್ಟಿದ್ದ. ಕೂಡಲೇ ಆಕೆ ಕುಸಿದು ಬಿದ್ದಿದ್ದು, ಆಕೆಯನ್ನು ನಿಜಾಮಾಬಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿ ಹೇಳಿದೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಲ್ಯಾಣಿ ಬುಧವಾರ ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಲ್ಯಾಣಿ ಮನೆಯವರು ಪತಿ ತರುಣ್ ಹಾಗೂ ಮನೆಯವರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 302, 304 ಬಿ ಮತ್ತು 498-ಎ ಅಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ತರುಣ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ತಂಡವನ್ನು ರಚಿಸಲಾಗಿದೆ ಎಂದು ನಿಜಾಮಾಬಾದ್ ನ ವಾರ್ನಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.