ಸ್ವಇಲಾಖೆಯ ಅಕ್ರಮ ತಡೆಯಲಾಗದ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಲಿ: ಬಿ.ಕೆ.ಹರಿಪ್ರಸಾದ್


Team Udayavani, Apr 29, 2022, 4:36 PM IST

ಸ್ವಇಲಾಖೆಯ ಅಕ್ರಮ ತಡೆಯಲಾಗದ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಲಿ: ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ತಮಗೆ ಎರಡೆರಡು ನಾಲಿಗೆ ಇದೆ ಎಂಬುದನ್ನ ಮತ್ತೆ ಸಾಬೀತು ಪಡಿಸಿದ್ದಾರೆ. ವಿಧಾನ ಪರಿಷತ್ ಅಧಿವೇಶನದಲ್ಲಿ ಪಿಎಸೈ ನೇಮಕಾತಿಯಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಎದೆತಟ್ಟಿ ಹೇಳಿದ್ದ ಗೃಹ ಸಚಿವರು ಇಂದು ನಡು ಬಗ್ಗಿಸಿ ಪಿಎಸೈ ನೇಮಕಾತಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ, ಆದ್ದರಿಂದ ನೇಮಕಾತಿ ರದ್ದು ಮಾಡಿ ಮರು ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಹಾವಿಗೂ ಎರಡು ನಾಲಿಗೆ ಇದೆ, ಹಾವಿನ ಪುರದವರಿಗೂ ಕೂಡ ಎರಡೆರಡು ನಾಲಿಗೆ ಇದೆ ಎಂದು ಸಾಬೀತು ಪಡಿಸಿದಂತಾಯಿತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

ವಿಧಾನ ಪರಿಷತ್ ಅಧಿವೇಶನದಲ್ಲಿ ಪಿಎಸೈ ನೇಮಕಾತಿಯಲ್ಲಿ ಕೋಟಿ ಕೋಟಿ ಭಾರಿ ಅವ್ಯವಹಾರಗಳು ನಡೆದಿವೆ ಎಂದು ಎಳೆಎಳೆಯಾಗಿ ಬಿಚ್ಚಿಟ್ಟಿದ್ದೆ. ರಾಜ್ಯದ ಪ್ರಮುಖ ಪತ್ರಿಕೆಗಳು ಸರ್ಕಾರದ ಮುಖಕ್ಕೆ ರಾಚುವಂತೆ ಇಲಾಖೆಯ ಮುಖವಾಡಗಳನ್ನೇ ಧಾರಾವಾಹಿಗಳಂತೆ ಬಿಚ್ಚಿಟ್ಟಿದ್ದವು. ಆಗ ಸತ್ಯ ಹರಿಶ್ಚಂದ್ರರಂತೆ ಮಾತಾಡಿದ್ದ ಗೃಹ ಸಚಿವರು ಅಕ್ರಮವೇ ನಡೆದಿಲ್ಲ ಎಂದು ಅಧಿವೇಶನದಲ್ಲಿ ಸುಳ್ಳು ಹೇಳಿಕೆ ಕೊಟ್ಟಿದ್ದರು. ಈಗ ಸರ್ಕಾರವೇ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಒಪ್ಪಿಕೊಂಡ ಮೇಲೆ ಯಾವ ನೈತಿಕತೆಯ ಮೇಲೆ ಗೃಹ ಸಚಿವರು ಮುಂದುವರೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅಕ್ರಮ ನಡೆಸಿರುವ ಕಿಂಗ್ ಪಿನ್ ಗಳಿಗೆ ತಾಂಬೂಲು ಕೊಟ್ಟು ಕರೆಯುವ ಹಾಗೆ, ದಯವಿಟ್ಟು ವಿಚಾರಣೆಗೆ ಬನ್ನಿ ಎಂದು ಕರೆಯುವಂತಹ ಅದಕ್ಷ ಗೃಹ ಸಚಿವರನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ. ಗೃಹ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬರುವ ಪಿಎಸೈಗಳ ನೇಮಕಾತಿಯಲ್ಲಿಯೇ ಕೋಟಿ ಕೋಟಿ ಅವ್ಯವಹಾರಗಳು ನಡೆಯುತ್ತಿದ್ದರೂ ನಿಮ್ಮ ಗಮನಕ್ಕೆ ಬಾರದೆ ಅಕ್ರಮ ನಡೆದಿದೆಯೇ? ಸ್ವಲಾಖೆಯಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ನಿಮ್ಮಿಂದ ಸಾಧ್ಯವಾಗಿಲ್ಲ ಎಂದಾದರೆ ಅಸಮರ್ಥರಾಗಿ ಮುಂದುವರೆಯಲು ನಿಮ್ಮನ್ನ ನೈತಿಕತೆ ಪ್ರಶ್ನೆ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಮಥುರಾ: ವಿವಾಹದ ಸಂಭ್ರಮದ ನಡುವೆಯೇ ವಧುವನ್ನು ಗುಂಡಿಕ್ಕಿ ಕೊಂದ ಪ್ರಿಯಕರ

ಅಭ್ಯರ್ಥಿಗಳೇ ಪರೀಕ್ಷೆ ಬರೆದಿದ್ದಾರೆ. ಇಷ್ಟಕ್ಕೂ ಸರ್ಕಾರ ಮರು ಪರೀಕ್ಷೆ ನಡೆಸುವುದಾದರೇ ಪ್ರಾಮಾಣಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಯಾವ ತಪ್ಪಿಗೆ ಶಿಕ್ಷೆ ಅನುಭವಿಸಬೇಕು? ಈಗಾಗಲೇ ಮುಂದೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅಕ್ರಮ ನಡೆಯುವುದಿಲ್ಲ ಎಂಬ ಯಾವ ಮುಖವಿಟ್ಟು ಭರವಸೆ ಕೊಡುತ್ತೀರಿ? 545 ಪಿಎಸ್‌ಐ ಹುದ್ದೆಗಳಿಗೆ ರಾಜ್ಯದಲ್ಲಿ ಒಟ್ಟು 54,289 ಅಭ್ಯರ್ಥಿಗಳ ಪರೀಕ್ಷೆ ಬರೆದಿದ್ದಾರೆ. ಲಕ್ಷಾಂತರ ಅಭ್ಯರ್ಥಿಗಳು ಶುಲ್ಕ ಕಟ್ಟಿದ್ದಾರೆ. ಮತ್ತೆ ಅವರಿಂದ ಶುಲ್ಕ ಪಡೆದರೆ ಒಂದೇ ಪರೀಕ್ಷೆಗೆ ಎರಡೆರಡು ಬಾರಿ ಶುಲ್ಕ ಕಟ್ಟಬೇಕೆ? ನಿಮ್ಮ ತಪ್ಪಿಗೆ ಅಭ್ಯರ್ಥಿಗಳಿಗೆ ಬರೆ ಎಳೆಯುವಂತಾಗಲಿದೆ. ಹೀಗಾಗಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಮೊದಲ ಬಾರಿಗೆ ಅರ್ಜಿ ಶುಲ್ಕ ಕಟ್ಟಿದವರಿಗೆ ಉಚಿತ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಹರಿಪ್ರಸಾದ್ ಒತ್ತಾಯಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ದಕ್ಷ, ಪ್ರಾಮಾಣಿಕತೆಗೆ ಹೆಸರುವಾಸಿಯಾಗಿದ್ದ ಇಡೀ ಇಲಾಖೆಯ ಜಂಘಾಬಲವನ್ನೇ ಕುಸಿಯುವಂತೆ ಮಾಡಿದ್ದೀರಿ. ನಿಮಿಗೆ ನೈತಿಕ ರಾಜಕೀಯ ಮೌಲ್ಯವೇ ಗೊತ್ತಿಲ್ಲದಿದ್ದರೆ ಪರವಾಗಿಲ್ಲ, ಗೃಹ ಸಚಿವಸ್ಥಾನಕ್ಕೆ ತನ್ನದೇ ಆದ ಘನತೆ, ಗೌರವಗಳಿವೆ ಹೆಚ್ಚು ಮಾತಾಡದೆ ಈಶ್ವರಪ್ಪ ಮಾದರಿಯಲ್ಲಿ “ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡುತ್ತಿದ್ದೇನೆ” ಎಂದು ರಾಜ್ಯಪಾಲರಿಗೆ ರಾಜೀನಾಮೆ ನೀಡಿ ಖುರ್ಚಿ ಖಾಲಿ ಮಾಡಿ ಎಂದು ಬಿ.ಕೆ.ಹರಿಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.