ನವೀಕರಿಸಬಹುದಾದ ಇಂಧನ ಕ್ಷೇತ್ರ: 61,000 ಕೋ.ರೂ. ಒಡಂಬಡಿಕೆಗೆ ಸಹಿ
Team Udayavani, Apr 30, 2022, 5:45 AM IST
ಬೆಂಗಳೂರು: ರಾಜ್ಯದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 61,000 ಕೋಟಿ ರೂ. ಮೊತ್ತದ ಹೂಡಿಕೆಯ ಒಡಂಬಡಿಕೆಗೆ ವಿವಿಧ ಸಂಸ್ಥೆಗಳು ಸಹಿ ಹಾಕಿದ್ದು, ರಾಜ್ಯದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ 12 ಸಾವಿರ ಉದ್ಯೋಗ ಸೃಷ್ಟಿಗೆ ಇದು ದಾರಿಯಾಗಲಿದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಅಭಿಪ್ರಾಯಪಟ್ಟರು.
ಹೊಸದಿಲ್ಲಿ ನಡೆಯುತ್ತಿರುವ ವಿಂಡರ್ಜಿ 2022 ಸಮ್ಮೇಳನದಲ್ಲಿ, ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹಲವಾರು ಹೂಡಿಕೆದಾರರು 61,000 ಕೋಟಿ ರೂ. ಮೊತ್ತದ ಎಕ್ಸ್ ಪ್ರಶನ್ ಆಫ್ ಇಂಟರೆಸ್ಟ್ ಗೆ ಸಹಿ ಹಾಕಿ ಮಾತನಾಡಿದ ಅವರು, ರಾಜ್ಯ ಇಂಧನ ಇಲಾಖೆ ಇತಿಹಾಸದಲ್ಲಿ ಇದೊಂದು ಮೈಲಿಗಲ್ಲು ಕೊಪ್ಪಳ, ಗದಗ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ತುಮಕೂರು, ಬಾಗಲಕೋಟೆ ಭಾಗದಲ್ಲಿ ಉದ್ಯೋಗ ಸೃಜನೆಯಾಗಲಿದೆ ಹಾಗೂ 9,218 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ರಿನ್ಯೂ, ಟೊರೆಂಟ್, ಇಡಿಎಫ್ ರಿನ್ಯೂಬಲ್‌ನಂತಹ ಖ್ಯಾತ ಕಂಪೆನಿಗಳು ಎಕ್ಸ್ ಪ್ರಶನ್ ಆಫ್ ಇಂಟರೆಸ್ಟ್ ಗೆ ಸಹಿ ಮಾಡಿವೆ ಎಂದು ಹೇಳಿದರು.
ಇಂಡಿಯನ್ ವಿಂಡ್ ಟರ್ಬೈನ್, ಮ್ಯಾನ್ಯುಫಾಕ್ಚರರ್ಸ್ ಅಸೋಸಿಯೇಶನ್ ಮತ್ತು ಪಿಡಿಎ ಟ್ರೇಡ್ ಫೇರ್ಸ್ ಪ್ರೈವೇಟ್ ಲಿಮಿಟೆಡ್ ಮೂರು ದಿನಗಳ ಸಮ್ಮೇಳನ ವಿಂಡರ್ಜಿ- 2022 ಅನ್ನು ಆಯೋಜಿಸಿದೆ. ಇದರಲ್ಲಿ ಭಾರತ ಕ್ಲೀನ್ ಎನರ್ಜಿ ಕಡೆಗೆ ಇಡುತ್ತಿರುವ ಹೆಜ್ಜೆಗಳು, ಭಾರತದಲ್ಲಿ ಇರುವ ಅವಕಾಶಗಳು, ತಾಂತ್ರಿಕತೆಯ ಅಭಿವೃದ್ಧಿ ಮತ್ತು ಆವಿಷ್ಕಾರ, ಪವನ ಶಕ್ತಿ ಉತ್ಪಾದನೆಯಲ್ಲಿ ಇರುವ ತೊಡಕುಗಳು ಸಹಿತ ಅನೇಕ ವಿಷಯಗಳ ಬಗ್ಗೆ ಚರ್ಚೆ ಹಾಗೂ ವಿಚಾರ ವಿನಿಮಯ ನಡೆಯಲಿದೆ ಎಂದು ತಿಳಿಸಿದರು.
ಕರ್ನಾಟಕ ಸರಕಾರದ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ ಅವರು, ನವೀಕರಿಸಬಹುದಾದ ಇಂಧನ ವಲಯದಲ್ಲಿ ಹಾಗೂ ನವೀಕರಿಸಬಹುದಾದ ಇಂಧನಗಳ ಯೋಜನೆಗಳಲ್ಲಿ ಹೂಡಿಕೆ ಹಾಗೂ ರಾಜ್ಯದ ಸಾಧನೆ ಬಗ್ಗೆ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.