ಸ್ವಾತಂತ್ರ್ಯದ ಅಮೃತಮಹೋತ್ಸವ :4 ಜಿಲ್ಲೆಗಳಲ್ಲಿ 8 ದಿನಗಳ ಕಾಲ ರಥಯಾತ್ರೆ
ಅಮೃತ ಭಾರತಿಗೆ ಕನ್ನಡದ ಆರತಿ; ಎಲ್ಲ ಜಿಲ್ಲೆಗಳಲ್ಲೂ ಸ್ವಾತಂತ್ರ್ಯದ ಹಬ್ಬ
Team Udayavani, Apr 30, 2022, 5:04 PM IST
ಬೆಂಗಳೂರು : ಸ್ವಾತಂತ್ರ್ಯದ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ನಾಲ್ಕು ಹಂತದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದ್ದು, ನಾಲ್ಕು ಕಂದಾಯ ಜಿಲ್ಲೆಗಳಲ್ಲಿ ಎಂಟು ದಿನಗಳ ಕಾಲ ರಥಯಾತ್ರೆ ನಡೆಸಲು ನಿರ್ಧರಿಸಲಾಗಿದೆ.
ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಇಂಧನ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಅಮೃತಮಹೋತ್ಸವ ಕಾರ್ಯಕ್ರಮದ ಪರಿಶೀಲನಾ ಸಭೆ ನಡೆಸಲಾಗಿದ್ದು, ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲೇ ವಿನೂತನವಾದ ರೀತಿಯಲ್ಲಿ ರಥಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಅಮೃತ ಭಾರತಿಗೆ ಕನ್ನಡದ ಆರತಿ ” ಎಂಬ ಶೀರ್ಷಿಕೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸ್ವಾತಂತ್ರ್ಯದ ಹಬ್ಬ ನಡೆಯಲಿದೆ.
ಮೇ 28 ರಂದು ಮೊದಲ ಹಂತದ ಕಾರ್ಯಕ್ರಮ ನಡೆಯಲಿದೆ. 75 ಸ್ಥಳಗಳಲ್ಲಿ ಅಮೃತ ಮಹೋತ್ಸವದ ಆಚರಣೆಯ ಜತೆಗೆ ಮೆರವಣಿಗೆ, ಶಿಲಾಫಲಕಗಳ ಅಳವಡಿಕೆ, ಉಪನ್ಯಾಸ, ಪ್ರದರ್ಶಿನಿ, ಸಾಂಸ್ಕೃತಿಕ ಕಾರ್ಯಕ್ರಮ, ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಪಟ್ಟ ಸಾಕ್ಷ್ಯ ಚಿತ್ರಗಳ ಪ್ರದರ್ಶನ ನಡೆಯಲಿದೆ.
ಹೋರಾಟದ ನೆಲದಲ್ಲಿ ಒಂದು ದಿನ
ಜೂನ್ 15 ರಿಂದ 30 ರ ವರೆಗೆ ಹೋರಾಟದ ನೆಲದಲ್ಲಿ ಒಂದು ದಿನ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ.ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಪಟ್ಟ ರಾಜ್ಯದ ಆಯ್ದ ಹದಿನೈದು ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಲಾಗುತ್ತದೆ. ಈ ಹೋರಾಟದ ಭೂಮಿಯನ್ನು ಸ್ಮರಣೀಯವಾಗಿಸುವ ಜತೆಗೆ ಯುವಕರು, ವಿದ್ಯಾರ್ಥಿಗಳಿಗೆ ಪ್ರೇಕ್ಷಣೀಯವಾಗಿಸಲು ನಿರ್ಧರಿಸಲಾಗಿದೆ.
ರಥಯಾತ್ರೆ
ಮೂರನೇ ಹಂತದಲ್ಲಿ ಆಗಷ್ಟ್ 1 ರಿಂದ ಆಗಷ್ಟ್ 8 ರ ವರೆಗೆ ರಾಜ್ಯದ ನಾಲ್ಕು ಕಂದಾಯ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಎಂಬ ಶೀರ್ಷಿಕೆಯಲ್ಲಿ ಆರು ಸ್ವಾತಂತ್ರ್ಯ ಅಮೃತ ಮಹೋತ್ಸವದ ರಥಯಾತ್ರೆ ನಡೆಸಲಾಗುತ್ತದೆ. ರಾಜ್ಯದ 31 ಜಿಲ್ಲೆಗಳನ್ನು ಹಾದು ಈ ರಥಯಾತ್ರೆ ಬೆಂಗಳೂರಿಗೆ ತಲುಪಲಿದೆ.
ರಥಯಾತ್ರೆ ಸಾಗಬೇಕಾದ ಮಾರ್ಗಗಳ ರೂಟ್ ಮ್ಯಾಪ್ ನ್ನು ಕರಾರುವಕ್ಜಾಗಿ ಸಿದ್ದಪಡಿಸಲಾಗುತ್ತಿದ್ದು, ಜಿಲ್ಲಾವಾರು ಕಾಲೇಜು ವಿದ್ಯಾರ್ಥಿಗಳು, ಯುವಕ ಸಂಘ, ಕಲಾ ತಂಡಗಳನ್ನು ಬಳಸಿಕೊಂಡು ಮೆರವಣಿಗೆ ನಡೆಸಲಾಗುತ್ತದೆ.ಬರಬೇಕು. ವಿವಿಧ ರಂಗಾಯಣದಿಂದ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಪಟ್ಟ ನಾಟಕಗಳನ್ನು ಆಯಾ ಜಿಲ್ಲಾವಾರು ರಚನೆ ಮಾಡಲು ಸೂಚನೆ ನೀಡಲಾಗಿದೆ.
ಸಮಾರೋಪ
ಆಗಷ್ಟ್ 9, 10, 11 ರಂದು ಅಮೃತ ಮಹೋತ್ಸವದ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದೆ. ಜಿಲ್ಲೆಗಳಿಂದ ಹೊರಟ ರಥಯಾತ್ರೆ ಆಗಷ್ಟ್ 9 ರಂದು ಬೆಂಗಳೂರು ತಲುಪಲಿದೆ. ರಾಜಧಾನಿಯಲ್ಲಿ ಭಾರಿ ಮೆರವಣಿಗೆ, ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯುತ್ತದೆ. ಆಗಷ್ಟ್ 10 ರಂದು ಇಡಿ ದೇಶದಲ್ಲಿ ಎಲ್ಲರ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ವಿನೂತನ ಚಿಂತನೆ ನಡೆಸಲಾಗಿದ್ದು, ಸಾಕಷ್ಟು ಪೂರ್ವ ತಯಾರಿ ಮಾಡಬೇಕು. ಪೂರ್ವ ತಯಾರಿ ಸಭೆಯನ್ನು ಮೇ 10 ರ ಒಳಗೆ ಮುಗಿಸಬೇಕು ಎಂದು ಸಚಿವ ಸುನೀಲ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸ್ವಾತಂತ್ರ್ಯ ದ ಅಮೃತ ಮಹೋತ್ಸ ದೇಶಾದ್ಯಂತ ನಡೆಯುತ್ತದೆ. ಆದರೆ ಕರ್ನಾಟಕದಲ್ಲಿ ಮಾತ್ರ ಇದು ವಿಭಿನ್ನವಾಗಿರಬೇಕು. ಅಮೃತ ಭಾರತಿಗೆ ಕನ್ನಡದ ಆರತಿ ನಡೆಸುವಾಗ ಕಿಂಚಿತ್ ಲೋಪವುಂಟಾಗಬಾರದು. ಇದು ದೇಶದ ಉತ್ಸವ, ರಾಜ್ಯದ ಉತ್ಸವವಾಗಿದ್ದು ಕನ್ನಡಿಗರು ಹೆಮ್ಮೆಪಡುವ ರೀತಿಯಲ್ಲಿ ನಡೆಸಲಾಗುವುದು.
ವಿ.ಸುನೀಲ್ ಕುಮಾರ್, ಕನ್ನಡ ಸಂಸ್ಕೃತಿ ಹಾಗೂ ಇಂಧನ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.