ರಾಗಿ ಖರೀದಿ ಪ್ರಕ್ರಿಯೆ ಪುನರಾರಂಭ
ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವಂತೆ ಕೇಂದ್ರ ಮಂತ್ರಿಗಳೊಂದಿಗೆ ಸಮಾಲೋಚನೆ: ಬೊಮ್ಮಾಯಿ
Team Udayavani, Apr 30, 2022, 5:21 PM IST
ಚಿತ್ರದುರ್ಗ: ಕೇಂದ್ರ ಸರ್ಕಾರದ ಅನುಮತಿ ದೊರೆತ ತಕ್ಷಣವೇ ಬೆಂಬಲ ಬೆಲೆಯಡಿ ಹೆಚ್ಚುವರಿ ರಾಗಿ ಖರೀದಿ ಪ್ರಕ್ರಿಯೆ ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರ ಗ್ರಾಮಕ್ಕೆ ಶುಕ್ರವಾರ ಖಾಸಗಿ ಭೇಟಿ ನಿಮಿತ್ತ ಆಗಮಿಸಿದ ಮುಖ್ಯಮಂತ್ರಿಗಳು ಹೆಲಿಪ್ಯಾಡ್ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯದ ರೈತರು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ರಾಗಿ ಬೆಳೆಯಲಾಗಿದ್ದು, ಬೆಂಬಲಬೆಲೆ ಯೋಜನೆಯಡಿ ಹೆಚ್ಚಿನ ರಾಗಿ ಖರೀದಿಸುವಂತೆ ಈಗಾಗಲೇ ಕೇಂದ್ರ ಮಂತ್ರಿಗಳೊಂದಿಗೆ ಸಮಾಲೋಚನೆ ಮಾಡಲಾಗಿದ್ದು, ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಮತ್ತೂಮ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೆಚ್ಚಿನ ರಾಗಿ ಖರೀದಿಗೆ ಸಂಬಂಧಪಟ್ಟಂತೆ ಬಹುತೇಕವಾಗಿ ಇನ್ನೇರೆಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಿಎಸ್‌ಐ ನೇಮಕಾತಿಗೆ ಮರುಪರೀಕ್ಷೆ
ಪಿಎಸ್‌ಐ ನೇಮಕಾತಿ ಅಧಿಸೂಚನೆಯನ್ನು ರದ್ದು ಪಡಿಸಿಲ್ಲ. ಮರು ಪರೀಕ್ಷೆಗೆ ಆದೇಶ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಯಾವುದೇ ಪರೀಕ್ಷೆಗಳಲ್ಲಿ ಲೋಪದೋಷ ಹಾಗೂ ಅನ್ಯಾಯವಾದರೆ ಅದರ ವ್ಯಾಪಕತೆ ಎಷ್ಟಿದೆ ಎಂಬುದು ಗೊತ್ತಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿಯ ಮರುಪರೀಕ್ಷೆ ಮಾಡಲಾಗುವುದು. ಈ ಹಿಂದೆ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದು. ನೇಮಕಾತಿ ವಿಭಾಗದ ಎಡಿಜಿಪಿಯನ್ನು ಆಡಳಿತ ದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ರಸ್ತೆ ಸುರಕ್ಷತಾ ಕಾಮಗಾರಿ ಉದ್ಘಾಟಿಸಿದ ಸಿಎಂ
ಲೋಕೋಪಯೋಗಿ ಇಲಾಖೆ ವತಿಯಿಂದ 2.5 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ ತಾಲೂಕಿನ ಪಂಡ್ರಹಳ್ಳಿ-ಬೊಮ್ಮೆನಹಳ್ಳಿ-ಸಿರಿಗೆರೆ-ಹಿರೇಗುಂಟನೂ ರು ರಸ್ತೆ ಸುರಕ್ಷತಾ ಕಾಮಗಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರಗೇಶ್ ನಿರಾಣಿ, ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ, ರಾಜ್ಯ ರಸ್ತೆ ಸಾರಿಗೆ ನಿಮಗದ ಅಧ್ಯಕ್ಷರೂ ಹಾಗೂ ಶಾಸಕ ಎ.ಚಂದ್ರಪ್ಪ, ಚಿತ್ರದುರ್ಗ ಶಾಸಕ ಜಿ.ಹೆಚ್ .ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ವೈ.ಎ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ| ನಂದಿನಿದೇವಿ, ಪೊಲೀಸ್ ವರಿಷ್ಠಾಧಿಕಾರಿ ಕೆ. ಪರುಶುರಾಮ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೃಷ್ಣಪ್ಪ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.