ಕಾಂಗ್ರೆಸ್ ಪುನಶ್ಚೇತನಕ್ಕೆ ಪ್ರಿಯಾಂಕಾ “ತ್ರಿಸೂತ್ರ’
ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿ ಅವಗಾಹನೆಯಲ್ಲಿರುವ ಸಲಹೆಗಳು
Team Udayavani, May 1, 2022, 7:50 AM IST
ಲಕ್ನೋ: 2012ರ ವಿಧಾನಸಭಾ ಚುನಾವಣೆ ನಂತರ ಉತ್ತರಪ್ರದೇಶದಲ್ಲಿ ಕುಸಿಯುತ್ತ ಸಾಗಿರುವ ಕಾಂಗ್ರೆಸ್ ಈಗ ತೀರಾ ಕೆಳಮಟ್ಟಕ್ಕೆ ತಲುಪಿದೆ.
2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ್ದು ಕೇವಲ 2 ಸ್ಥಾನ ಮಾತ್ರ. ಇದನ್ನು ಸರಿಪಡಿಸಲು ಆ ರಾಜ್ಯದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಮೂರು ಸಲಹೆಗಳನ್ನು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ನೀಡಿದ್ದಾರೆನ್ನಲಾಗಿದೆ.
ಮೊದಲನೆಯದಾಗಿ ಯುಪಿ ಕಾಂಗ್ರೆಸ್ ಸಮಿತಿಯನ್ನು ಪುನರ್ರಚನೆ ಮಾಡುವುದು, ಹಿರಿಯ ನಾಯಕರೊಬ್ಬರನ್ನು ಇದಕ್ಕೆ ಉಸ್ತುವಾರಿಯನ್ನಾಗಿ ನೇಮಿಸುವುದು. ಎರಡನೆಯದಾಗಿ, 4-5 ಕಾರ್ಯಾಧ್ಯಕ್ಷರನ್ನು ನೇಮಿಸಿ ಸಂಘಟನೆಯನ್ನು ಬಲಪಡಿಸುವುದು, ಇವರ ಮೇಲ್ವಿಚಾರಣೆಗೆ ರಾಜ್ಯಾಧ್ಯಕ್ಷರ ನೇಮಕ. ಮೂರನೇಯದಾಗಿ, ಉತ್ತರಪ್ರದೇಶವನ್ನು ಪಶ್ಚಿಮ, ಪೂರ್ವ, ಅವಧ್, ಎಂಬ ನಾಲ್ಕು ವಲಯಗಳನ್ನಾಗಿ ವಿಭಾಗಿಸಿ ಅಲ್ಲಿ ಪ್ರತ್ಯೇಕ ಸಮಿತಿಗಳನ್ನು ರಚಿಸುವುದು.
ಸದ್ಯ ಈ ಪ್ರಸ್ತಾವವನ್ನು ಸೋನಿಯಾ ಪರಿಶೀಲಿಸುತ್ತಿದ್ದಾರೆಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.