ಬಾಗೇಪಲ್ಲಿ ಕ್ಷೇತ್ರಕೆ ಬಲಿಷ್ಠ ಬಿಜೆಪಿ ಅರ್ಭ್ಯರ್ಥಿ: ಎಂ.ಟಿ.ಬಿ.ನಾಗರಾಜ್‌

Team Udayavani, May 1, 2022, 2:06 PM IST

Untitled-1

ಬಾಗೇಪಲ್ಲಿ: ಮುಂಬರುವ ವಿಧಾನಸಭಾ ಚುನಾವಣೆಯ ಗೆಲುವಿಗಾಗಿ ಎಲ್ಲ ಪಕ್ಷದವರೂ ಗರಿಷ್ಠ ಪ್ರಯತ್ನಿಸುತ್ತಿದ್ದಾರೆ. ಆದರೆ, ತೀರ್ಪು ನೀಡುವವರು ಮತದಾರರು. ಬಾಗೇಪಲ್ಲಿಯಲ್ಲಿ ಬಿಜೆಪಿ ಖಾತೆ ತೆರೆಯಲು ಹೈಕಮಾಂಡ್‌ ಬಲಿಷ್ಠ ಅಭ್ಯರ್ಥಿ ಕಣಕ್ಕಿಳಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್‌ ತಿಳಿಸಿದರು.

ಪಟ್ಟಣದಲ್ಲಿರುವ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಹಾಗೂ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಿ ಮಾತನಾಡಿ, ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಗುಂಪುಗಾರಿಕೆ ಸಹಜ ವಾಗಿದೆ. ಆದರೆ, ಬಾಗೇಪಲ್ಲಿ ಬಿಜೆಪಿಯಲ್ಲಿ ಸ್ವಲ್ಪ ಹೆಚ್ಚಾಗಿದೆ. ಕ್ಷೇತ್ರದಿಂದ ಸ್ಪ ರ್ಧಿಸುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಆಕಾಂಕ್ಷಿಗಳು ಗುಂಪುಗಾರಿಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಪಕ್ಷದ ವರಿಷ್ಠರಿಗೆ ಸಿಕ್ಕಿದೆ ಎಂದು ಹೇಳಿದರು.

ಚುನಾವಣಾ ತಂತ್ರಗಾರಿಕೆ ರೂಪಿಸಿ: ಹಲವು ಪ್ರಭಾವಿ ಬಿಜೆಪಿ ಮುಖಂಡರು ಸ್ಪರ್ಧೆ ಬಯಸಿ ಬಾಗೇಪಲ್ಲಿ ಕ್ಷೇತ್ರಕ್ಕೆ ಬಂದಿದ್ದಾರೆ. ಕೇಂದ್ರ ಮತ್ತು ರಾಜ್ಯದ ವರಿಷ್ಠರು, ಪಕ್ಷದಲ್ಲಿನ ಚುನಾವಣಾ ಸಮಿತಿ ಅಭ್ಯರ್ಥಿ ಆಯ್ಕೆ ಮಾಡುತ್ತದೆ. ಪಕ್ಷ ಅ ಧಿಕೃತ ಘೋಷಣೆ ಮಾಡುವ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕೆ ಬಿಜೆಪಿ ಕಾರ್ಯಕರ್ತರು ಚುನಾವಣಾ ತಂತ್ರಗಾರಿಕೆ ರೂಪಿಸಿಕೊಂಡು ಶ್ರಮಿಸಬೇಕು ಎಂದು ವಿವರಿಸಿದರು.

ಸಚಿವರಿಗೆ ದೂರು ಸಲ್ಲಿಕೆ: ತಾಲೂಕಿನ ಗೂಳೂರು ಹೋಬಳಿಯ ವಿವಿಧ ಗ್ರಾಪಂನಲ್ಲಿ 14 ಮತ್ತು 15ನೇ ಹಣಕಾಸು ಯೋಜನೆಯಲ್ಲಿ ಕಾಮಗಾರಿ ಮಾಡದೆ ಹಣ ಡ್ರಾ ಮಾಡಿ ಅವ್ಯವಹಾರ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಿಪಂ ಸಿಇಒ, ತಾಪಂ ಇಒಗೆ ಆದೇಶ ಮಾಡಿದ್ದರೂ ಯಾವುದೇ ಕ್ರಮ ಜರುಗಿಸುತ್ತಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಉಸ್ತುವಾರಿ ಸಚಿವರಿಗೆ ಅಧಿಕಾರಿಗಳ ಸಮ್ಮುಖದಲ್ಲಿ ದೂರು ಸಲ್ಲಿಸಿದರು.

ತರಾಟೆ: ದೂರಿಗೆ ಸ್ಪಂದಿಸಿದ ಸಚಿವರು, ಸ್ಥಳದಲ್ಲೇ ಇದ್ದ ತಾಪಂ ಇಒ ಮಂಜುನಾಥಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡು, ಅವ್ಯವಹಾರ ಹಣದಲ್ಲಿ ನಿನಗೆಷ್ಟು ಪಾಲು ಬಂದಿದೆ. ಸಾರ್ವಜನಿಕರು ದೂರು ಸಲ್ಲಿಸಿದರೂ ಏಕೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿಲ್ಲ ಎಂದು ಪ್ರಶ್ನಿಸಿದರು.

ಸಭೆ ನಡೆಸಲೂ ಹಿಂದೇಟು: ಪರಿಶಿಷ್ಟ ವರ್ಗಗಳ ನಿಗಮದ ಜಿಲ್ಲಾ ವ್ಯವಸ್ಥಾಪಕ ಜಯರಾಮಯ್ಯ ಜನಪ್ರತಿನಿ ಧಿಗಳು ಇಲ್ಲದಿದ್ದರೂ ಶಿಷ್ಠಾಚಾರ ಉಲ್ಲಂಘಿಸಿ, ಶಾಸಕರ ಬೆಂಬಲಿಗರ ಮುಖಂಡತ್ವದಲ್ಲಿ 52 ಫ‌ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯ ಸಲಕರಣೆ ವಿತರಿಸುತ್ತಾರೆ. 6 ತಿಂಗಳಾದರೂ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿಲ್ಲ. ಕೆಡಿಪಿ ಸದಸ್ಯರಾದ ನಾವು ಸಭೆ ನಡೆಸುವಂತೆ ಮನವಿ ಮಾಡಿದರೂ ಸ್ಪಂದಿ ಸುವುದಿಲ್ಲ ಎಂದು ಕಾರ್ಯಕರ್ತರು ದೂರು ಸಲ್ಲಿಸಿದರು.

ತಹಶೀಲ್ದಾರ್‌ ವೈ.ರವಿ, ತಾಪಂ ಇಒ ಮಂಜುನಾಥಸ್ವಾಮಿ, ಪೊಲೀಸ್‌ ವೃತ್ತ ನಿರೀಕ್ಷಕ ಡಿ.ಆರ್‌.ನಾಗರಾಜು, ಬಿಜೆಪಿ ಮಂಡಲಾಧ್ಯಕ್ಷ ಆರ್‌. ಪ್ರತಾಪ್‌, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್‌. ವೆಂಕಟೇಶ್‌, ಕೆಡಿಪಿ ಸದಸ್ಯ ಮಂಜುನಾಥ್‌, ಮುಖಂಡರಾದ ವೈ.ಎಸ್‌.ಲೋಕೇಶ್‌, ಆಂಜನೇಯರೆಡ್ಡಿ, ನಿರ್ಮಲಮ್ಮ, ಗಂಗುಲಮ್ಮ, ವನಜಾ, ರೂಪಾ, ಮಂಜುಳಾ ಮತ್ತಿತರರು ಇದ್ದರು

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.