3ರಂದು ಅದ್ದೂರಿ ಉಚಿತ ಸಾಮೂಹಿಕ ವಿವಾಹ: ಕರದಾಳ

Team Udayavani, May 1, 2022, 2:12 PM IST

13mass-marrige

ಚಿತ್ತಾಪುರ: ಮೇ 3ರಂದು ಉಚಿತ ಸಾಮೂಹಿಕ ವಿವಾಹ ಅದ್ಧೂರಿಯಾಗಿ ಮಾಡಲಾಗುತ್ತಿದೆ. ಸಾಮೂಹಿಕವಾಗಿ ವಿವಾಹವಾಗಲು ಹಲವಾರು ಜೋಡಿಗಳು ಸ್ವ ಇಚ್ಛೆಯಿಂದ ಹೆಸರು ನೋಂದಾಯಿಸುತ್ತಿದ್ದಾರೆ. ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಬಸವ ಜಯಂತಿ, ಉಚಿತ ಸಾಮೂಹಿಕ ವಿವಾಹ ಸಮಿತಿ, ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.

ಪಟ್ಟಣದ ಎಪಿಎಂಸಿ ಯಾರ್ಡ್‌ ಸಭಾಂಗಣದಲ್ಲಿ ಬಸವ ಜಯಂತಿ ನಿಮಿತ್ತ ಉಚಿತ ಸಾಮೂಹಿಕ ವಿವಾಹ ಕುರಿತು ಹಮ್ಮಿಕೊಂಡಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಟ್ಟಣದ ಬಜಾಜ್‌ ಕಲ್ಯಾಣ ಮಂಟಪದಲ್ಲಿ ಮೇ 3ರಂದು ಬಸವ ಜಯಂತಿ ನಿಮಿತ್ತ 6ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಿದ್ದು, ಸಾಮೂಹಿಕ ವಿವಾಹವಾಗಲು ಹಲವರು ಮುಂದೆ ಬಂದಿರುವುದು ಸಂತಸ ತಂದಿದೆ ಎಂದರು.

ಎಲ್ಲ ಮದುಮಕ್ಕಳಿಗೆ ಬಟ್ಟೆ, ವಧುವಿಗೆ ತಾಳಿ, ಕಾಲುಂಗುರ ಹಾಗೂ ಮದುಮಕ್ಕಳಿಗೆ ಬಟ್ಟೆಗಳನ್ನು ಉದ್ಯಮಿ ಶೈಲಜಾ ಪ್ರಮೋದರೆಡ್ಡಿ ಯರಗಲ್‌ ಉಡುಗೊರೆಯಾಗಿ ನೀಡಲಿದ್ದಾರೆ. ಎಪಿಎಂಸಿ ವರ್ತಕರಿಂದ ಪ್ರಸಾದ ವ್ಯವಸ್ಥೆ ಮಾಡಲಾಗುವುದು. ಮದುಮಕ್ಕಳ ಬೀಗರು, ನೆಂಟರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಮಂಟಪ, ಅಲಂಕಾರ, ವೇದಿಕೆ, ಪ್ರಸಾದ, ಪ್ರಚಾರ ಸೇರಿದಂತೆ ಎಲ್ಲ ಸಮಿತಿಗಳನ್ನು ರಚನೆ ಮಾಡಲಾಗಿದೆ. ಮೇ 3ರಂದು ಬೆಳಗ್ಗೆ 9ಕ್ಕೆ ತಹಶೀಲ್ದಾರ್‌ ಕಚೇರಿಯಿಂದ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಹಾಗೂ ಜಯಂತಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ನಂತರ 12 ಗಂಟೆಗೆ ಉಚಿತ ವಿವಾಹ ಕಾರ್ಯಕ್ರಮ ಪಟ್ಟಣದ ಬಜಾಜ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ವಿವರಿಸಿದರು.

ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಮುಖಂಡರಾದ ಚಂದ್ರಶೇಖರ ಅವಂಟಿ, ನಾಗರಾಜ ಭಂಕಲಗಿ, ಬಸವರಾಜ ಚಿನ್ನಮಳ್ಳಿ ಮಾತನಾಡಿದರು.

ವರ್ತಕರ ಸಂಘದ ಅಧ್ಯಕ್ಷ ಅಣ್ಣಾರಾವ್‌ ಪಾಟೀಲ ಮುಡಬೂಳ, ಚಂದ್ರಶೇಖರ ಸಾತನೂರ, ಶರಣು ಸಜ್ಜನ, ರವೀಂದ್ರ ಸಜ್ಜನಶೆಟ್ಟಿ, ಡಾ| ಚಂದ್ರಶೇಖರ ಕಾಂತಾ, ಡಾ| ಶ್ರೀನಿವಾಸರೆಡ್ಡಿ ಕಂದಕೂರ, ಡಾ| ಪ್ರಭುರಾಜ ಕಾಂತಾ, ಶ್ರೀನಿವಾಸರೆಡ್ಡಿ ಪಾಲಪ, ಕೋಟೇಶ್ವರ ರೇಷ್ಮಿ, ಶಿವರಾಜ ಪಾಳೇದ, ಸಂತೋಷ ಚೌಧರಿ, ರಮೇಶ ಬೊಮ್ಮನಳ್ಳಿ, ಶರಣಗೌಡ ಮುಡಬೂಳ, ಶಾಮ ಮುಕ್ತೇದಾರ, ಅನಿಲ ವಡ್ಡಡಗಿ, ಮಲ್ಲಿಕಾರ್ಜುನರೆಡ್ಡಿ ಇಜಾರ ಇದ್ದರು. ಶಾಂತಪ್ಪ ಚಾಳಿಕಾರ ನಿರೂಪಿಸಿದರು. ಆನಂದ ನರಬೋಳಿ ಸ್ವಾಗತಿಸಿದರು. ಅಶೋಕ ನಿಪ್ಪಾಣಿ ವಂದಿಸಿದರು.

ಟಾಪ್ ನ್ಯೂಸ್

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.