ಗೋವಾ: 3 ಉಚಿತ ಗ್ಯಾಸ್ ಸಿಲಿಂಡರ್ ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ !
Team Udayavani, May 1, 2022, 4:29 PM IST
ಪಣಜಿ: ಗೋವಾದಲ್ಲಿ ಪ್ರತಿ ಮನೆಗೆ ವರ್ಷಕ್ಕೆ 3 ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಘೋಷಿಸಿತ್ತು. ಆದರೆ ಈಗ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಮಾತ್ರ ಈ ಉಚಿತ ಸಿಲಿಂಡರ್ ಲಭ್ಯವಾಗಲಿದೆ ಎಂದು ಹೇಳುವ ಮೂಲಕ ಬಿಜೆಪಿ ಸರ್ಕಾರ ಟೀಕೆಗೆ ಗುರಿಯಾಗುವಂತಾಗಿದೆ.
ಈ ಕುರಿತಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಗೋವಿಂದ ಗಾವಡೆ ಸುದ್ಧಿಗಾರರೊಂದಿಗೆ ಮಾತನಾಡಿ, ಪಡಿತರ ಚೀಟಿದಾರರನ್ನು ಹೊರತುಪಡಿಸಿ ವಾರ್ಷಿಕ 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರಿಗೆ ಮಾತ್ರ ವರ್ಷಕ್ಕೆ 3 ಉಚಿತ ಸಿಲಿಂಡರ್ ಲಭಿಸಲಿದೆ ಎಂದು ಹೇಳಿದ್ದಾರೆ. 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರು ಸರ್ಕಾರಿ ಪ್ರಾಧಿಕಾರದಿಂದ ಆದಾಯ ಪ್ರಮಾಣಪತ್ರವನ್ನು ಪಡೆದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಲ್ಲಿಸಬೇಕು. 3 ಸಿಲಿಂಡರ್ ಗಳ ಹಣವನ್ನು ಸಂಬಂಧಿತ ಕುಟುಂಬದ ಖಾತೆಗೆ ಜಮಾವಣೆ ಮಾಡಲಾಗುತ್ತದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮುಂದಿನ ಮೂರು ವರ್ಷಗಳ ಕಾಲ ಪೆಟ್ರೋಲ್ ಡೀಸೆಲ್ ಮೇಲಿನ ರಾಜ್ಯ ತೆರಿಗೆ ಹೆಚ್ಚಿಸುವುದಿಲ್ಲ, ವರ್ಷವೊಂದಕ್ಕೆ ಪ್ರತಿ ಕುಟುಂಬಕ್ಕೆ 3 ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಭರವಸೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.