ಮೇ ತಿಂಗಳಲ್ಲಿ ಮಳೆಯ ದಿನಗಳು ಹೆಚ್ಚಿರಲಿದೆ

Team Udayavani, May 2, 2022, 7:30 AM IST

ಮೇ ತಿಂಗಳಲ್ಲಿ ಮಳೆಯ ದಿನಗಳು ಹೆಚ್ಚಿರಲಿದೆ

ಬೆಂಗಳೂರು: ಮಾರ್ಚ್‌ ಹಾಗೂ ಎಪ್ರಿಲ್‌ನಲ್ಲಿ ಉತ್ತರ ಭಾರತ ರಾಜ್ಯಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ನಷ್ಟು ಜಾಸ್ತಿಯಾಗಿದೆ.

ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಸಿಗಾಳಿಯಿಂದ ಜನ ತತ್ತರಿಸಿದ್ದಾರೆ. ಅದರ ಪ್ರಭಾವ ರಾಜ್ಯದಲ್ಲೂ ಬೀರಲಿದೆ ಎಂಬ ಆತಂಕ ಮನೆಮಾಡಿತ್ತು. ಆದರೆ, ಇದೇ ಸಮಯದಲ್ಲಿ ವರುಣನ ಆಗಮನ ಹಾಗೂ ಹವಾಮಾನ ತಜ್ಞರ ಮುನ್ಸೂಚನೆಯು ಜನರ ಆತಂಕವನ್ನು ತಕ್ಕಮಟ್ಟಿಗೆ ದೂರ ಮಾಡಿದೆ. ಅದರಂತೆ ರಾಜ್ಯದಲ್ಲಿ “ಬೇಸಗೆಯ ಪೀಕ್‌’ ಅಂದರೆ ಮೇಯಲ್ಲೂ ಮಳೆಯ ದಿನಗಳು ಹೆಚ್ಚು ಇರಲಿದ್ದು, ಇದರಿಂದ ಹಿಂದಿನ ವರ್ಷಗಳಿಗೆ ಹೋಲಿಸಿದರೆ, ತಾಪಮಾನ ಕಡಿಮೆ ಇರಲಿದೆ.

ಮೇಯಲ್ಲಿ 10ದಿನ ಮಳೆ!
ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಈ ಮಾಹಿತಿಯನ್ನು ತಿಳಿಸಿದೆ. ಇಡೀ ತಿಂಗಳಿನಲ್ಲಿ ಸರಾಸರಿ 6ರಿಂದ 7 ದಿನಗಳು ಮಳೆಯ ದಿನಗಳಾಗಿವೆ. ಈ ಬಾರಿ ಇದಕ್ಕಿಂತ ಹೆಚ್ಚಿನ ಮಳೆಯ ದಿನಗಳನ್ನು ನಿರೀಕ್ಷೆ ಮಾಡಲಾಗಿದೆ. 9ರಿಂದ 10 ದಿನಗಳು ಗುಡುಗು, ಮಿಂಚು ಸಹಿತ ಮಳೆ ಸುರಿಯಬಹುದು. ಪ್ರತೀ ವರ್ಷ ಮೇ ತಿಂಗಳಿನಲ್ಲಿ ಸರಾಸರಿ 11 ಸೆಂ.ಮೀ. ಮಳೆಯಾಗಲಿದ್ದು, ಈ ವರ್ಷ ಅದಕ್ಕಿಂತ ಹೆಚ್ಚಿನ ಮಳೆಯಾಗಬಹುದು ಎಂದು ಇಲಾಖೆ ವಿಜ್ಞಾನಿ ಎ. ಪ್ರಸಾದ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

2 ಡಿಗ್ರಿ ಕಡಿಮೆಯಾಗುವ ನಿರೀಕ್ಷೆ
ಸಾಮಾನ್ಯವಾಗಿ ಬೇಸಗೆಯಲ್ಲಿ ಉತ್ತರ ಒಳನಾಡು ಜಿಲ್ಲೆಗಳಾದ ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಮೇ ತಿಂಗಳಿನಲ್ಲಿ ಸಾಮಾನ್ಯವಾಗಿ ಸರಾಸರಿ 43ರಿಂದ 45 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರುತ್ತದೆ. ಇದಕ್ಕೆ ಹೋಲಿಸಿದರೆ ಮಳೆಯ ದಿನಗಳು ಹೆಚ್ಚಿರುವುದರಿಂದ ಈ ಬಾರಿ ಉಷ್ಣಾಂಶ ಕನಿಷ್ಠ 0.5ರಿಂದ 2 ಡಿಗ್ರಿಯಷ್ಟು ಕಡಿಮೆ ದಾಖಲಾಗಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರಣವೇನು?
ವಾತಾವರಣದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾದ ವೇಳೆ ಸಹಜವಾಗಿ ಮಳೆ ಬರುತ್ತದೆ. (ವೈಜ್ಞಾನಿಕವಾಗಿ ಇದನ್ನು “ಅಪ್‌ ಡ್ರಾಫ್ಟ್’ ಎನ್ನಲಾಗುತ್ತದೆ) ಅದೇ ರೀತಿ, ಎಪ್ರಿಲ್‌ನಲ್ಲಿ ಬಿಸಿಲಿನ ಬೇಗೆ ಹೆಚ್ಚಿದ್ದರಿಂದ ಮೇಯಲ್ಲಿ ಹೆಚ್ಚಿನ ಮಳೆಯ ದಿನಗಳು ಇರುತ್ತವೆ. ಬಿಸಿಲು ಕೂಡ ಇರುತ್ತದೆ. ಆದರೆ, ತಾಪಮಾನ ಏರಿಕೆಯಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಗಾರು ಮೇಲೆ ಪರಿಣಾಮವಿಲ್ಲ
ಪೂರ್ವಮುಂಗಾರು ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾದರೆ ಅಥವಾ ತಾಪಮಾನ ಕಡಿಮೆಯಾಗುವುದರಿಂದ ಮುಂಗಾರು ಮಳೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈಗಾಗಲೇ ಎಪ್ರಿಲ್‌ನಲ್ಲಿ ವರದಿ ನೀಡಿರುವಂತೆ ಸಾಮಾನ್ಯ ಮುಂಗಾರು ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಂತೆ ಎಂದಿನಂತೆ ಮುಂಗಾರು ಮಾರುತಗಳು ಮಳೆ ಸುರಿಸಲಿವೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನಿ ಎ. ಪ್ರಸಾದ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.