ವಿಮಾನ ನಿಲ್ದಾಣ ಹೆಸರು; ಸರ್ಕಾರಕ್ಕೆ ಬಿಸಿ ಉಸಿರು

ಬಿಎಸ್‌ವೈ ಹೆಸರಿಡಲು ಸರ್ಕಾರದ ತೀರ್ಮಾನ

Team Udayavani, May 2, 2022, 1:25 PM IST

airport

ಶಿವಮೊಗ್ಗ: ರಾಜ್ಯದ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವ ಹೆಸರಿಡಬೇಕೆಂಬ ಚರ್ಚೆ ಜೋರಾಗಿದ್ದು, ಸರಕಾರಕ್ಕೆ ಬಿಸಿತುಪ್ಪವಾಗಿದೆ.

ಇತ್ತೀಚೆಗೆ ಶಿವಮೊಗ್ಗ ಪ್ರವಾಸದಲ್ಲಿದ್ದ ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ರಾಜ್ಯ ಸರಕಾರ ಸಂಪುಟದಲ್ಲಿ ಅನುಮೋದಿಸಿದ್ದು, ಕೇಂದ್ರ ಸರಕಾರಕ್ಕೆ ಕಳುಹಿಸುವುದಾಗಿ ತಿಳಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಬಿ.ಎಸ್. ಯಡಿಯೂರಪ್ಪನವರು ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಿ, ದೇಶದ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದವರ ಹೆಸರು ಇಡುವಂತೆ ಮನವಿ ಮಾಡಿ ದೊಡ್ಡತನ ಮೆರೆದಿದ್ದರು.

ಬಿಎಸ್‌ವೈ ಅವರ ನಿರ್ಧಾರದ ನಂತರ ಮತ್ತೆ ವಿಮಾನ ನಿಲ್ದಾಣಕ್ಕೆ ಅನೇಕ ಹೆಸರುಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ, ಒತ್ತಾಯ, ಪೋಲಿಂಗ್‌ ಸಹ ಮಾಡಲಾಗುತ್ತಿದೆ. ಇದು ಸರಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

ನೂರಾರು ಹೆಸರುಗಳು

ಗೇಣಿ ಹೋರಾಟದ ರೂವಾರಿ ಗಣಪತಿಯಪ್ಪ, ಜಿಲ್ಲೆಯಿಂದ ಸಿಎಂ ಆದ ಕಡಿದಾಳು ಮಂಜಪ್ಪ, ಎಸ್.ಬಂಗಾರಪ್ಪ, ಬಿ.ಎಸ್‌ .ಯಡಿಯೂರಪ್ಪ, ಶಾಂತವೇರಿ ಗೋಪಾಲಗೌಡ, ಪುನೀತ್‌ ರಾಜ್‌ಕುಮಾರ್‌ ಹೆಸರು ಸಹ ಇತ್ತೀಚಿಗೆ ಕೇಳಿಬಂದಿದೆ. ಇನ್ನು ಸಾಹಿತ್ಯ ವಿಷಯದಲ್ಲಿ ಕನ್ನಡದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು ಅವರ ಹೆಸರಿಡಲು ಹೆಚ್ಚಿನ ಒತ್ತಾಯ ಕೇಳಿಬಂದಿದೆ. ಕೆಳದಿ ಸಂಸ್ಥಾನದ ಪ್ರಖ್ಯಾತ ದೊರೆ ಶಿವಪ್ಪನಾಯಕ, ಜತೆಗೆ ಉಡುತಡಿಯ ಅಕ್ಕಮಹಾದೇವಿ, ಅಲ್ಲಮ್ಮಪ್ರಭು, ಜಗಜ್ಯೋತಿ ಬಸವಣ್ಣ, ಕನ್ನಡದ ಮೊದಲ ದೊರೆ ಮಯೂರ ವರ್ಮ, ಭಗತ್‌ ಸಿಂಗ್‌, ಅಂಬೇಡ್ಕರ್‌, ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಬಿ.ಕೃಷ್ಣಪ್ಪ ಅವರ ಹೆಸರು ಸಹ ಕೇಳಿಬರುತ್ತಿದೆ.

ಅಲ್ಲದೆ ವಿಮಾನ ನಿಲ್ದಾಣ ಇರುವುದು ಸೋಗಾನೆ ಎಂಬ ಗ್ರಾಮದಲ್ಲಿ. ಅದೇ ಹೆಸರನ್ನು ಇಟ್ಟರೆ ಭೂಮಿ ಕೊಟ್ಟ ರೈತರಿಗೆ ಗೌರವ ನೀಡಿದಂತಾಗುತ್ತದೆ ಎಂಬ ವಾದವೂ ಕೇಳಿಬಂದಿದೆ. ಜತೆಗೆ ಮಲೆನಾಡು ಏರ್‌ಪೋರ್ಟ್‌ ಹೆಸರಿಡಬೇಕೆಂಬ ಕೂಗು ಕೇಳಿಬಂದಿದೆ. ಬಿಎಸ್‌ವೈ ಅವರ ಹೆಸರಿಡಲು ನಿರ್ಧರಿಸುವ ಮೊದಲು ಅನೇಕ ಸಂಘಟನೆಗಳು ವಿವಿಧ ಹೆಸರುಗಳನ್ನು ಇಡಲು ಮನವಿ ಮಾಡಿದ್ದವು. ಬಿಎಸ್‌ವೈ ಹೆಸರಿಡಲೂ ಸಹ ಅಭಿಮಾನಿಗಳು ಮನವಿ ಮಾಡಿದ್ದರು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಅನೇಕರ ಕೊಡುಗೆ ಇದೆ. ದಿನೇ ದಿನೇ ಹೆಸರುಗಳ ಪಟ್ಟಿ ಬೆಳೆಯುತ್ತಲೇ ಇದೆ. ಯಾವ ಹೆಸರನ್ನು ಅಂತಿಮಗೊಳಿಸಿ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂಬುದೇ ಈಗ ಗೊಂದಲ ಮೂಡಿಸಿದೆ.

ಬಿಎಸ್‌ವೈ ಏರ್‌ಪೋರ್ಟ್‌ ರೂವಾರಿ

ಶಿವಮೊಗ್ಗಕ್ಕೆ ಏರ್‌ಪೋರ್ಟ್‌ ಕನಸು ನನಸು ಮಾಡಿದವರು ಬಿ.ಎಸ್. ಯಡಿಯೂರಪ್ಪ. 2009ರಲ್ಲಿ ಸಿಎಂ ಆದಾಗ ವಿಮಾನ ನಿಲ್ದಾಣಕ್ಕೆ ಪಿಪಿಪಿ ಮಾದರಿಯಲ್ಲಿ ಚಾಲನೆ ನೀಡಿದ್ದರು. ತಾಂತ್ರಿಕ ಕಾರಣಗಳಿಂದ ಅದು ಅಲ್ಲಿಗೆ ನಿಂತು ಹೋಯ್ತು. ನಂತರ ಬಂದ ಕಾಂಗ್ರೆಸ್‌ ಸರ್ಕಾರ ಅದರ ಬಗ್ಗೆ ಆಸಕ್ತಿ ತೋರಲಿಲ್ಲ. 2019 ರಲ್ಲಿ ಮತ್ತೆ ಸಿಎಂ ಆದ ಬಿಎಸ್‌ವೈ ಕಾಮಗಾರಿ ಪೂರ್ಣಗೊಳಿಸಲು ಆದೇಶ ನೀಡಿ ಅಗತ್ಯ ಅನುದಾನ ಬಿಡುಗಡೆ ಮಾಡಿದರು. 3200 ಮೀಟರ್‌ ರನ್‌ವೇ ಸಿದ್ಧವಾಗಿದ್ದು ಫಿನಿಶಿಂಗ್‌ ಹಂತದಲ್ಲಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲಾಗಿದೆ. ಈ ವರ್ಷದ ಕೊನೆಗೆ ವಿಮಾನ ಹಾರುವುದು ಶತಸಿದ್ಧ. ಯಾರು ಏನೇ ಹೇಳಿದರೂ ಯಡಿಯೂರಪ್ಪನವರ ಹೆಸರೇ ಸೂಕ್ತ ಎನ್ನುತ್ತಿದೆ ಅಭಿಮಾನಿ ಪಡೆ.

ಮಲೆನಾಡು ಹಾಗೂ ಬಯಲುಸೀಮೆಗೆ ಹೊಂದಿಕೊಂಡಿರುವ ಶಿವಮೊಗ್ಗದಲ್ಲಿ ಏರ್‌ಪೋರ್ಟ್‌ ಸ್ಥಾಪನೆ ಅಷ್ಟು ಸುಲಭವಾಗಿರಲಿಲ್ಲ. 800 ಎಕರೆ ಭೂಮಿಯನ್ನು ಇದಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ನೂರಾರು ರೈತರು ಭೂಮಿ ಬಿಟ್ಟುಕೊಟ್ಟಿದ್ದಾರೆ. ಈಗಲೂ ಪೂರ್ಣ ಪ್ರಮಾಣದಲ್ಲಿ ಪರಿಹಾರ, ಭೂಸ್ವಾಧೀನ ಆಗಿಲ್ಲ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಏರ್‌ಪೋರ್ಟ್‌ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದ್ದು ಬಿಎಸ್‌ವೈ ಪರಿಶ್ರಮದಿಂದ ಎಂಬುದು ಸತ್ಯ. ಹೀಗಾಗಿ ಇವರ ಹೆಸರನ್ನೇ ಇಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

ಶರತ್‌ ಭದ್ರಾವತಿ

 

ಟಾಪ್ ನ್ಯೂಸ್

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ

police-ban

Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.