ಸೇವಾದಳದ ಕಾರ್ಯ ಚಟುವಟಿಕೆ ಸ್ತುತ್ಯರ್ಹ

ವಿದ್ಯಾರ್ಥಿಗಳಲ್ಲಿ ದೇಶಭಕ್ತಿ-ಒಗ್ಗಟ್ಟು ಮೂಡಿಸುವಲ್ಲಿ ಸಂಘಟನೆ ಪಾತ್ರ ಮಹತ್ವದ್ದು: ಶಾಸಕ ತಿಪ್ಪಾ ರೆಡ್ಡಿ

Team Udayavani, May 2, 2022, 3:23 PM IST

service

ಚಿತ್ರದುರ್ಗ: ಮಕ್ಕಳಲ್ಲಿ ರಾಷ್ಟ್ರೀಯ ಭಾವೈಕ್ಯತಾ ಮನೋಭಾವ ಬೆಳೆಸಿ ಅವರನ್ನು ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು ಭಾರತ ಸೇವಾದಳ ಶ್ರಮಿಸುತ್ತಿದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.

ಭಾರತ ಸೇವಾದಳ ಜಿಲ್ಲಾ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತ ಸೇವಾದಳದ ನೂತನ ಜಿಲ್ಲಾ ಕಚೇರಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಿಂದ ಬ್ರಿಟಿಷರನ್ನು ತೊಲಗಿಸಲು ಹುಟ್ಟಿಕೊಂಡಿದ್ದ ಬಲಿಷ್ಠ ಮತ್ತು ನಿಸ್ವಾರ್ಥ ಸಂಘಟನೆ ಭಾರತ ಸೇವಾದಳ. ಇಂದು ವಿದ್ಯಾರ್ಥಿಗಳಿಗೆ ತರಬೇತಿ, ಶಿಕ್ಷಣ, ಸೇವೆ, ರಾಷ್ಟ್ರೀಯತೆ, ಸಾರ್ವಜನಿಕ ರಕ್ಷಣೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಗೆ ಪೂರಕವಾಗುವ ಕಾರ್ಯಕ್ರಮಗಳು ಸೇವಾದಳದಿಂದ ನಡೆಯುತ್ತಿವೆ ಎಂದರು.

ಭಾರತ ಸೇವಾದಳದಿಂದ ಒಗ್ಗಟ್ಟು ಪ್ರದರ್ಶನ ಸಾಧ್ಯವಿದೆ. ಜನರಲ್ಲಿ ದೇಶಭಕ್ತಿ ಮೂಡಿಸುವ ಸಲುವಾಗಿ ಹುಟ್ಟಿಕೊಂಡ ಸಂಘಟನೆ ಇದಾಗಿದೆ. ಇಲ್ಲಿ ಯಾವುದೇ ರಾಜಕೀಯ ಇಲ್ಲದೆ ಅಚ್ಚುಕಟ್ಟಾಗಿ ನಡೆಯುತ್ತಿದೆ. ಪ್ರತಿ ಶಾಲಾ-ಕಾಲೇಜುಗಳಲ್ಲಿ ಒಗ್ಗಟ್ಟಿನ ಭಾವನೆ ಮೂಡಿಸಲು, ದೇಶದ ಇತಿಹಾಸವನ್ನು ತಿಳಿಸುವ ಕೆಲಸ ಸಂಘಟನೆಯಿಂದ ಆಗಬೇಕಿದೆ. ಭಾರತ ಸೇವಾದಳ ಇತ್ತೀಚೆಗೆ ಕಣ್ಮರೆಯಾಗುತ್ತಿದೆ. ಆದರೆ ರಾಷ್ಟ್ರದ ಹಿತಾಸಕ್ತಿಗಾಗಿ ಸಂಘಟನೆಗಳ ಅವಶ್ಯಕತೆ ಇದೆ. ಎಲ್ಲಾ ಕಡೆಗಳಲ್ಲಿ ಭಾರತ ಸೇವಾದಳ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅ ಧಿಕಾರ ಸ್ವೀಕರಿಸಿದಾಗ ಕಾಲೇಜುಗಳಲ್ಲಿ ಭಾರತ ಸೇವಾದಳ ಪ್ರಾರಂಭಿಸಲು ತೆಗೆದುಕೊಂಡ ತೀರ್ಮಾನ ಉತ್ತಮವಾಗಿದೆ ಎಂದು ಶ್ಲಾಘಿಸಿದರು.

ಇದೇ ವೇಳೆ ಮುಂದಿನ ದಿನದಲ್ಲಿ ಎರಡನೇ ಹಂತದ ಕಟ್ಟಡ ನಿರ್ಮಾಣ ಮಾಡಲು ಶಾಸಕರ ಅನುದಾನದಲ್ಲಿ 5 ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಬಿ. ಸಂಜೀವಮೂರ್ತಿ ಮಾತನಾಡಿ, ಮೊದಲು ಭಾರತ ಸೇವಾದಳಕ್ಕೆ ಸ್ವಂತ ಕಟ್ಟಡ ಇರಲಿಲ್ಲ. ಜಿಲ್ಲಾಧಿಕಾರಿ ಮೂಲಕ ಜಾಗ ಪಡೆದು ಕಟ್ಟಡ ನಿರ್ಮಿಸಿದ್ದೇವೆ. ಸರ್ಕಾರದಿಂದ 20 ಲಕ್ಷ ರೂ., ರಾಜ್ಯಸಭಾ ಸದಸ್ಯರಾಗಿದ್ದ ಹನುಮಂತಪ್ಪ ನೀಡಿದ 10 ಲಕ್ಷ ರೂ. ಅನುದಾನದಲ್ಲಿ ಮುಂಭಾಗದ ಕಟ್ಟಡ ನಿರ್ಮಿಸಿದ್ದೆವು. ಅದರಿಂದ ಬಂದ ಬಾಡಿಗೆ ಮತ್ತು ದಾನಿಗಳು, ಪದಾಧಿಕಾರಿಗಳು ಆರ್ಥಿಕ ನೆರವು ನೀಡಿದ್ದರಿಂದ 41 ಲಕ್ಷ ರೂ. ವೆಚ್ಚದಲ್ಲಿ ನೂತನ ತರಬೇತಿ ಕಟ್ಟಡ ಪೂರ್ಣಗೊಳಿಸಲು ಸಾಧ್ಯವಾಗಿದೆ. ಶಾಸಕರು ಚಿತ್ರದುರ್ಗವನ್ನು ಮಾದರಿ ನಗರ ಮಾಡಿದ್ದಾರೆ. ಮನಸ್ಸು ಮಾಡಿದರೆ ಮತ್ತೂಂದು ಹಂತದ ಕಟ್ಟಡಕ್ಕೆ ಅನುದಾನ ನೀಡುತ್ತಾರೆ. ಸೇವಾದಳದ ಚಟುವಟಿಕೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಇನ್ನೂ ಒಂದಿಷ್ಟು ಅಭಿವೃದ್ಧಿ ಕಾರ್ಯಗಳಾಗಬೇಕಿದೆ ಎಂದು ಮನವಿ ಮಾಡಿದರು.

ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್‌, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ, ನಗರಸಭೆ ಸದಸ್ಯೆ ಶ್ರೀದೇವಿ ಚಕ್ರವರ್ತಿ, ಸೇವಾದಳದ ರಾಜ್ಯಾಧ್ಯಕ್ಷ ಬಿ.ಸಿ. ವೆಂಕಟೇಶ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಕೆ. ಕಮಲ್‌ಕುಮಾರ್‌, ಜಿಲ್ಲಾ ಉಪಾಧ್ಯಕ್ಷ ಎಂ.ಸಿ. ದೇವದಾಸ್‌, ಕಾರ್ಯದರ್ಶಿ ಶಿವಕುಮಾರ್‌, ಜಿಲ್ಲಾ ಸಂಘಟಕ ಬಸವರಾಜ್‌, ಕೋಶಾಧ್ಯಕ್ಷ ನಿರಂಜನ ಮೂರ್ತಿ ಮತ್ತು ಅರುಣ್‌ಕುಮಾರ್‌ ಇದ್ದರು.

ಭಾರತ ಸೇವಾದಳ ಪ್ರತಿ ಹಳ್ಳಿಯಲ್ಲಿ ಹೋರಾಟ ಮಾಡಿದೆ. ಭಾರತೀಯ ಸಂವಿಧಾನದಲ್ಲಿ ಭಾರತ ಸೇವಾದಳಕ್ಕೆ ವಿಶೇಷ ತಿದ್ದುಪಡಿ ತಂದು ಬಾವುಟ ಹಾರಿಸಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ರಾಜಕೀಯ ಪಕ್ಷಗಳಿಗೆ ಭಾರತ ಸೇವಾದಳ ಸೀಮಿತವಲ್ಲ. ಎಲ್ಲಾ ಸಂಘಗಳ ನಿರ್ಮಾತೃ ಸೇವಾದಳವಾಗಿದೆ. ರಾಷ್ಟ್ರದ ದೇಶದ ಏಕತೆ ಕಾಪಾಡಲು ಪ್ರಯತ್ನ ಮಾಡುತ್ತಿದೆ. -ಚಂದ್ರಶೇಖರ್‌ ಭಾರತ ಸೇವಾದಳದ ರಾಜ್ಯ ದಳಪತಿ

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.