ಜಿಲ್ಲೆಯ 20 ಸರ್ಕಾರಿ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ ಗರಿ
Team Udayavani, May 2, 2022, 5:38 PM IST
ವಿಜಯಪುರ: 2020-21ನೇ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಸ್ವಚ್ಛತೆ, ಶುಚಿತ್ವ ಮತ್ತು ನೈರ್ಮಲ್ಯಕ್ಕೆ ಸರ್ಕಾರ ನೀಡುವ ಕಾಯಕಲ್ಪ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ 20 ಆರೋಗ್ಯ ಸಂಸ್ಥೆಗಳು ಆಯ್ಕೆಯಾಗಿವೆ.
ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಕಾಯಕಲ್ಪ ಪ್ರಶಸ್ತಿಯನ್ನು 2015ರಿಂದ ನೀಡಲಾಗುತ್ತಿದೆ. 2019-20ನೇ ಸಾಲಿನಲ್ಲಿ ಜಿಲ್ಲೆಯ 15 ಆರೋಗ್ಯ ಸಂಸ್ಥೆಗಳು ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿದ್ದರೆ, 2020-21ನೇ ಸಾಲಿನಲ್ಲಿ 20 ಆರೋಗ್ಯ ಸಂಸ್ಥೆಗಳು ಕಾಯಕಲ್ಪ ಪ್ರಶಸ್ತಿಯನ್ನು ಪಡೆದಿರುತ್ತವೆ.
ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳ ವಿಭಾಗದಲ್ಲಿ ಬಸವನಬಾಗೇವಾಡಿ ತಾಲೂಕಾಸ್ಪತ್ರೆ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಹೊರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ಸತತ ಎರಡನೇ ಬಾರಿಗೆ ಜಿಲ್ಲೆಯ ಅತ್ಯತ್ತಮ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಯಕಲ್ಪ ಪ್ರಶಸ್ತಿ ಬಾಚಿದೆ.
ನಗರದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆ ಸಮಾಧಾನಕರ ಪ್ರಶಸ್ತಿ ಪಡೆದಿದೆ. ಬಸವನಬಾಗೇವಾಡಿ ತಾಲೂಕಾಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಚಡಚಣ, ಕಾಳಗಿ, ತಡವಲಗಾ, ನಾಲತವಾಡ, ನಿಡಗುಂದಿ ಮತ್ತು ಆಲಮೇಲ ಸಮುದಾಯ ಆರೋಗ್ಯ ಕೇಂದ್ರಗಳು ಸಮಾಧಾನಕರ ಪ್ರಶಸ್ತಿಯನ್ನು ಪಡೆದಿವೆ. ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹೊರ್ತಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಶಿವಣಗಿ, ಹೊನವಾಡ, ಮನಗೂಳಿ, ಗೊಳಸಂಗಿ, ಹೂ.ಹಿಪ್ಪರಗಿ, ಇನಚಗಲ್, ಕೂಡಗಿ ಮತ್ತು ರೋಣಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮಾಧಾನಕರ ಕಾಯಕಲ್ಪ ಪ್ರಶಸ್ತಿ ಪಡೆದಿವೆ.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಾದ ದರ್ಗಾ, ಶಾಂತಿನಗರ ಮತ್ತು ತಾಜಬಾವಡಿ ಸಮಾಧಾನಕರ ಪ್ರಶಸ್ತಿಯನ್ನು ಪಡೆದಿರುತ್ತವೆ. ಪ್ರಶಸ್ತಿ ವಿಜೇತ ಎಲ್ಲ ಆರೋಗ್ಯ ಸಂಸ್ಥೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಜಕುಮಾರ ಯರಗಲ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಜೇಶ್ವರಿ ಗೋಲಗೇರಿ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.