ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ
Team Udayavani, May 2, 2022, 5:57 PM IST
ಬಸವನಬಾಗೇವಾಡಿ: ಪ್ರತಿ ವರ್ಷ 60 ಲಕ್ಷಕ್ಕೂ ಹೆಚ್ಚು ಆದಾಯ ಬರುವ ಐದು ಮಾದರಿ ಗ್ರಾಪಂಗಳು ಜಿಲ್ಲೆಯಲ್ಲಿದ್ದು ಅದರಲ್ಲಿ ನಾಲ್ಕು ಗ್ರಾಪಂ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿವೆ ಎಂದು ಮಾಜಿ ಸಚಿವ, ಶಾಸಕ ಶಿವಾನಂದ ಪಾಟೀಲ ಹೇಳಿದರು.
ಮನಗೂಳಿ ಪಟ್ಟಣದಲ್ಲಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ 2021-22ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಿಂದ ಹೊನಗನಹಳ್ಳಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗದೆ ಹರಿಯುವ ನೀರಾದಾಗ ಮಾತ್ರ ಆ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗುತ್ತದೆ. ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ರಸ್ತೆ, ನೀರಾವರಿ, ವಿದ್ಯುತ್, ಕುಡಿಯುವ ನೀರು, ಶೈಕ್ಷಣಿಕ, ಒಳ ಚರಂಡಿ, ಪ್ರವಾಸೋದ್ಯಮ, ಔದ್ಯೋಗಿಕರಣ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಇರುವ ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಜಿಲ್ಲೆಯಲ್ಲಿ ಮಾದರಿ ಮತಕ್ಷೇತ್ರವಾಗಿ ಹೊರ ಹೊಮ್ಮುತ್ತಿದೆ ಎಂದು ಹೇಳಿದರು.
ವಿಶ್ವನಾಥ ಪಾಟೀಲ, ಶ್ರೀಶೈಲ ಸಜ್ಜನ, ಚಂದ್ರಶೇಖರಗೌಡ ಪಾಟೀಲ, ಮಹಾಂತಪ್ಪಗೌಡ ಗುಜಗೊಂಡ, ಸಿದ್ದನಗೌಡ ಬಿರಾದಾರ, ಪಿಂಟು ಮುತ್ತಪ್ಪನವರ, ಶರಣಯ್ಯ ನಂದಿಕೊಲಮಠ, ಸುರೇಶ ಬಿರಾದಾರ, ಶ್ರೀಶೈಲ ಮುತ್ತಪ್ಪನವರ, ಬಸವರಾಜ ಸೋಂಪುರ, ಎಸ್.ಬಿ. ದನವಾಡ, ಎಸ್.ಜಿ. ಪಟ್ಟೆದ, ಸುನೀಲ ಉಳ್ಳಾಗಡ್ಡಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.