ಸಾವಯವ ಕೃಷಿಗೆ ಮುಂದಾಗಿ; ಸಚಿವ ಬಿ.ಸಿ ಪಾಟೀಲ
ರೈತರು ಬೆಳೆ ಪದ್ದತಿಯನ್ನು ಬದಲಾಯಿಸಿ ಈ ಪ್ರದೇಶದ ಭೂಮಿಯಲ್ಲಿ ಬಿದಿರು ಬೆಳೆಯಬೇಕು
Team Udayavani, May 2, 2022, 6:02 PM IST
ಅಡಹಳ್ಳಿ: ಕೃಷಿಗೆ ರಸಾಯನಿಕ ಗೊಬ್ಬರ ಹಾಗೂ ಕ್ರಿಮಿನಾಶಕ ಬಳಕೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಸಾವಯವ ಕೃಷಿ ಪದ್ಧತಿಗೆ ರೈತರು ಬದಲಾಗಿ ಆರೋಗ್ಯ ಕಾಪಾಡಬೇಕು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ ಹೇಳಿದರು.
ಸಮೀಪದ ಶೇಗುಣಶಿ ಗ್ರಾಮದಲ್ಲಿ ಶಂಕರ ಸ್ವಾಮೀಜಿ ಅಮೃತ ಮಹೋತ್ಸವ ಹಾಗೂ ಡಾ| ಮಹಾಂತ ದೇವರ ನಿರಂಜನ ಚರಪಟ್ಟಾಧಿಕಾರ ಸಮಾರಂಭ ನಿಮಿತ್ತ ರವಿವಾರ ನಡೆದ ಸಾವಯವ ಕೃಷಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ರೈತರು ಸ್ವಾವಲಂಬಿಯಾಗಿ ಬದುಕಬೇಕಾದರೆ ಒಕ್ಕಲುತನದ ಜೊತೆಗೆ ಉಪ ಕಸುಬುಗಳನ್ನು ಮಾಡಬೇಕು.ಸಾವಯವ ಕೃಷಿ ಮತ್ತು ಸಿರಿಧಾನ್ಯಗಳ ಬೆಳೆಯಲು ಸರ್ಕಾರ ಅನುದಾನ ನೀಡುತ್ತಿದೆ. ಕೃಷಿ ಮಹಾವಿದ್ಯಾಲಯದಲ್ಲಿ ಕಲಿಯಲು ರೈತರ ಮಕ್ಕಳಿಗೆ ಶೇ 50 ಮೀಸಲಾತಿ ಇದೆ.
ಅಥಣಿ ತಾಲೂಕಿನ ಕೊಕಟನೂರ ಗ್ರಾಮಕ್ಕೆ ಕೃಷಿ ಕಾಲೇಜು ಮಂಜೂರಾಗಿದೆ. ಆಧುನಿಕ ಯಂತ್ರೋಪಕರಣ ಬಳಸಿ ರೈತ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎಂದರು.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷ್ಣಾ ನದಿ ದಡದ ರೈತರು ಅತಿಯಾದ ನೀರು ಬಳಕೆ ಮಾಡಿ ಸವಳು- ಜವಳು ಸಮಸ್ಯೆ ಎದುರಿಸುತ್ತಿದ್ದು, ಇಸ್ರೇಲ್ ಮಾದರಿಯಲ್ಲಿ ಕೃಷಿ ಕೈಗೊಂಡು ಸಾವಯವ ಕೃಷಿ ಮೊರೆ ಹೋಗುವುದು ಅನಿವಾರ್ಯ ಎಂದರು.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಮಾತನಾಡಿ, ಬೆಳಗಾವಿ, ಬಾಗಲಕೋಟ ಹಾಗೂ ವಿಜಯಪೂರ ಈ ಮೂರು ಜಲ್ಲೆಯಲ್ಲಿಯೇ 1.50 ಲಕ್ಷ ಎಕರೆ ಭೂಮಿ ಸವಳು-ಜವಳಾಗಿದೆ. ಇದನ್ನು ಸರಿಪಡಿಸಲು ರೈತರು ಬೆಳೆ ಪದ್ದತಿಯನ್ನು ಬದಲಾಯಿಸಿ ಈ ಪ್ರದೇಶದ ಭೂಮಿಯಲ್ಲಿ ಬಿದಿರು ಬೆಳೆಯಬೇಕು ಎಂದು ತಿಳಿಸಿದರು.
ಗದಗ-ಡಂಬಳ ತೋಂಟದಾರ್ಯಮಠದ ಜಗದ್ಗುರು ಡಾ| ತೋಂಟದ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಶ್ರೀಗಳ ಅಮೃತ ಮಹೋತ್ಸವ ಹಾಗೂ ನಿರಂಜನ ಪಟ್ಟಾ ಧಿಕಾರ ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಂಸ್ಕೃತಿಕ ವಿಚಾರಗೋಷ್ಠಿ ಕಾರ್ಯಕ್ರಮ ಆಯೋಜಿಸಿರುವುದು ವ್ಯಕ್ತತ್ವ ವಿಕಸನಕ್ಕೆ ಗ್ರಾಮಸ್ಥರು ಮುನ್ನುಡಿ ಬರೆದಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಬೆಂಗಳೂರ ಸಾವಯವ ಕೃಷಿ ಮಿಷನ್ ಅಧ್ಯಕ್ಷ ಆನಂದ ಶ್ರೀ, ವಿಜಯಪುರ ಕೃಷಿ ತಜ್ಞ ಎ.ಪಿ ಬಿರಾದಾರ ಹಾಗೂ ಬಿಳ್ಳೂರ ಗುರುಬಸವೇಶ್ವರ ವಿರಕ್ತಮಠದ ಮುರಘೇಂದ್ರ ಸ್ವಾಮೀಜಿ, ಚಿಕ್ಕೋಡಿ ಸಂಸದ ಅಣ್ಣಸಾಬ ಜೊಲ್ಲೆ ಮಾತನಾಡಿದರು.
ಶಂಕರ ಸ್ವಾಮೀಜಿ, ಡಾ| ಮಹಾಂತ ದೇವರು, ಪ್ರಭುಚನ್ನಬಸವ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಶಾಸಕರಾದ ಮಹೇಶ ಕುಮಠಳ್ಳಿ, ಪಿ. ರಾಜೀವ, ದುರ್ಯೋಧನ ಐಹೊಳೆ, ಶ್ರೀಶೈಲ ನಾರಗೊಂಡ, ಅಮೂಲ ನಾಯಿಕ, ಚಿದಾನಂದ ಸವದಿ, ಚಿಕ್ಕೋಡಿ ಕೃಷಿ ಇಲಾಖೆ ಉಪನಿರ್ದೇಶಕ ಎಲ್.ಐ. ರೂಡಗಿ ಸೇರಿದಂತೆ ಶ್ರೀಗಳು ಮತ್ತು ಗಣ್ಯರು ಉಪಸ್ಥಿತರಿದ್ದರು. ಎ.ವೈ ಗಲಗಲಿ ಸ್ವಾಗತಿಸಿದರು, ಗುರುದೇವ ಸ್ವಾಮೀಜಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.